Ind vs SA 2nd ODI: ಟಾಸ್ ಗೆದ್ದ ದ. ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಪ್ಲೇಯಿಂಗ್ 11 ಜೊತೆಗೆ LIVE SCORE

ರಾಂಚಿಯ ಜೆಎಸ್‌ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಂತಹ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡಿದೆ. ನಾಯಕ ಟೆಂಬಾ ಬವುಮಾಗೆ ಅನಾರೋಗ್ಯ ಹಿನ್ನಲೆಯಲ್ಲಿ ಕೇಶವ್ ಮಹಾರಾಜ್ ಹರಿಣಗಳ ತಂಡವನ್ನ ಮುನ್ನಡೆಸಲಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಟೆಂಬಾ ಬವುಮಾ ಜೊತೆಗೆ ತಬ್ರೈಜ್ ಶಮ್ಸಿ ಕೂಡ ಪ್ಲೇಯಿಂಗ್ ಇಲೆವೆನ್‌ನಿಂದ ಹೊರಬಿದ್ದಿದ್ದು, ಅವರ ಬದಲು ರೀಜಾ ಹೆಂಡ್ರಿಕ್ಸ್ ಮತ್ತು ಬಿಜಾನ್ ಫಾರ್ಚುನ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ಟೀಂ ಇಂಡಿಯಾ ನಾಯಕ ಶಿಖರ್ ಧವನ್ ಟಾಸ್ ಸೋತು ಮೊದಲು ಬೌಲಿಂಗ್ ಮಾಡಲಿದ್ದು, ತಮ್ಮ ಆಯ್ಕೆಯು ಬೌಲಿಂಗ್ ಮಾಡುವುದೇ ಆಗಿತ್ತು ಎಂದು ತಿಳಿಸಿದ್ದಾರೆ. ಭಾರತ ತಂಡದಲ್ಲಿಯೂ ಇಬ್ಬರು ಆಟಗಾರರ ಬದಲಾವಣೆ ಆಗಿದ್ದು ರುತುರಾಜ್ ಗಾಯಕ್ವಾಡ್ ಮತ್ತು ರವಿ ಬಿಷ್ಣೋಯಿ ಬದಲಾಗಿ ವಾಷಿಂಗ್ಟನ್ ಸುಂದರ್ ಮತ್ತು ಶಹಬಾಜ್ ಅಹಮದ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಲಿದ್ದಾರೆ.
ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ ಸರಣಿ ಜೀವಂತವಾಗಿರಿಸಲು ಈ ಪಂದ್ಯವನ್ನ ಗೆಲ್ಲಲೇಬಾಕದ ಅನಿವಾರ್ಯತೆಯಲ್ಲಿದೆ. ಪಂದ್ಯದ ಲೈವ್ ಸ್ಕೋರ್ ಈ ಕೆಳಗಿದೆ.

ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಶಹಬಾಜ್ ಅಹಮದ್
ರಾಂಚಿಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಆಲ್‌ರೌಂಡರ್ ಶಹಬಾಜ್ ಅಹ್ಮದ್‌ಗೆ ಚೊಚ್ಚಲ ಏಕದಿನ ಪಂದ್ಯವನ್ನಾಡುವ ಅವಕಾಶ ಪಡೆದಿದ್ದಾರೆ. ಆರ್‌ಸಿಬಿ ಪರ ಆಲ್‌ರೌಂಡರ್ ಆಗಿ ಮಿಂಚಿರುವ ಶಹಬಾಜ್ ಅಹ್ಮದ್‌ಗೆ ಪ್ರಸಕ್ತ ಏಕದಿನ ಸರಣಿಯಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಸ್ಕ್ವಾಡ್‌ನಲ್ಲಿ ಅವಕಾಶ ಪಡೆದರು.
ಇನ್ನು ಇಂಜ್ಯುರಿಯಿಂದಾಗಿ ಟೀಂ ಇಂಡಿಯಾದಿಂದ ಬಹುಕಾಲ ಹೊರಗುಳಿದಿದ್ದ ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್ ಬದಲಾಗಿ ಟೀಂ ಇಂಡಿಯಾ ಸೇರಿದ್ದು, ಬಂದಷ್ಟೇ ವೇಗವಾಗಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡುವ ಅವಕಾಶ ಪಡೆದಿದ್ದಾರೆ.
ಉಭಯ ತಂಡಗಳಿಗೂ ಬಹುಮುಖ್ಯವಾದ ಈ ಪಂದ್ಯದಲ್ಲಿ ಯಾವೆಲ್ಲಾ ಆಟಗಾರರು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ ಎಂಬುದನ್ನ ಈ ಕೆಳಗೆ ಕಾಣಬಹುದು.

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್
ಶಿಖರ್ ಧವನ್(ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್
ಬೆಂಚ್: ರುತುರಾಜ್ ಗಾಯಕ್ವಾಡ್, ರವಿ ಬಿಷ್ಣೋಯ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್
ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್(ನಾಯಕ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡ, ಎನ್ರಿಕ್ ನೊರ್ಕಿಯಾ
ಬೆಂಚ್: ಟೆಂಬಾ ಬವುಮಾ, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ, ಮಾರ್ಕೊ ಜಾನ್ಸೆನ್, ಆಂಡಿಲೆ ಫೆಹ್ಲುಕ್ವಾಯೊ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications