Ind vs SA 2nd ODI: ಶ್ರೇಯಸ್ ಅಯ್ಯರ್ ಭರ್ಜರಿ ಶತಕ; ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಜಯಭೇರಿ

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಮಣಿಸಿದ್ದು, ಈ ಮೂಲಕ ಮೂರು ಏಕದಿನ ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.
ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ಬಲಗೈ ಬ್ಯಾಟರ್ ಶ್ರೇಯಸ್ ಅಯ್ಯರ್ (113) ಭರ್ಜರಿ ಶತಕ ಸಿಡಿಸಿದರೆ, ಎಡಗೈ ಬ್ಯಾಟರ್ ಇಶಾನ್ ಕಿಶನ್ (93) ಕೂಡ ಭರ್ಜರಿ ಅರ್ಧಶತಕ ಬಾರಿಸಿದರು. ಇವರಿಬ್ಬರು ಮೂರನೇ ವಿಕೆಟ್ ಜೊತೆಯಾಟದಲ್ಲಿ 161 ರನ್ ಕೊಡುಗೆ ನೀಡಿ ವಿಜಯಲಕ್ಷ್ಮಿಯನ್ನು ಭಾರತದ ಕಡೆಗೆ ತಿರುಗಿಸಿದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ, ಭಾರತದ ಪ್ರಬಲ ಬೌಲಿಂಗ್ ದಾಳಿಗೆ 300ರ ಗಡಿ ಮುಟ್ಟಲು ಸಾಧ್ಯವಾಗದೆ 7 ವಿಕೆಟ್ ನಷ್ಟಕ್ಕೆ 278ರನ್ ಕಲೆಹಾಕಿತು. ಸವಾಲಿನ ಗುರಿ ಬೆನ್ನತ್ತಿದ ಭಾರತ 45.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 282 ರನ್ ಗಳಿಸಿ ಗೆಲುವಿನ ಗುರಿ ತಲುಪಿದರು.

ಶ್ರೇಯಸ್ ಅಯ್ಯರ್- ಇಶಾನ್ ಕಿಶನ್ 161 ರನ್‌ಗಳ ಜೊತೆಯಾಟ
ಭಾರತದ ಆರಂಭಿಕರಾದ ಶಿಖರ್ ಧವನ್(13) ಮತ್ತು ಶುಭಮನ್ ಗಿಲ್(28) ಇಬ್ಬರೂ ಔಟಾದ ನಂತರ ಭಾರತವು ಒಂದು ಹಂತದಲ್ಲಿ 2 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿತ್ತು. ಆದರೆ ಈ ಹಂತದಲ್ಲಿ ಜೊತೆಗೂಡಿದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ನಡುವಿನ 161 ರನ್‌ಗಳ ಜೊತೆಯಾಟವು ಭಾರತವು ಇನ್ನೂ 25 ಎಸೆತಗಳು ಬಾಕಿ ಇರುವಂತೆಯೇ ತವರಿಗೆ ತಂದಿತ್ತರು.
ಇದಕ್ಕೂ ಮೊದಲು ಟೆಂಬಾ ಬವುಮಾ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಕೇಶವ್ ಮಹಾರಾಜ್ ಮೊದಲು ಬ್ಯಾಟಿಂಗ್ ಆಯ್ದುಕೊಂಡ ನಿರ್ಧಾರಕ್ಕೆ ಟಾಪ್ ಆರ್ಡರ್ ಬ್ಯಾಟರ್‌ಗಳು ನೀರಸ ಪ್ರತಿಕ್ರಿಯೆ ನೀಡಿದರು. ಮೊದಲಿಗೆ ಇನ್‌ಫಾರ್ಮ್ ಬ್ಯಾಟರ್ ಕ್ವಿಂಟನ್ ಡಿಕಾಕ್ ಕೇವಲ 5 ರನ್ ಗಳಿಸಿ ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಆರಂಭಿಕ ಹಿನ್ನಡೆ ಅನುಭವಿಸಿದರು.

ಐಡೆನ್ ಮಾರ್ಕ್ರಾಮ್ (79) ಮತ್ತು ರೀಜಾ ಹೆಂಡ್ರಿಕ್ಸ್ (74)
ಜನೆಮನ್ ಮಲನ್ 25 ರನ್ ಗಳಿಸುವ ಮೂಲಕ ಭರವಸೆಯ ಆರಂಭವನ್ನು ಮಾಡಿದರು, ಆದರೆ ಮುಂದುವರಿಸುವಲ್ಲಿ ವಿಫಲರಾದರು. ಅದರ ನಂತರ, ಐಡೆನ್ ಮಾರ್ಕ್ರಾಮ್ (79) ಮತ್ತು ರೀಜಾ ಹೆಂಡ್ರಿಕ್ಸ್ (74) ಮೂರನೇ ವಿಕೆಟ್‌ಗೆ 129 ರನ್‌ಗಳ ಜೊತೆಯಾಟ ನಡೆಸಿ ಪ್ರವಾಸಿ ತಂಡಕ್ಕೆ ನೆರವಾದರು. 74 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದ್ದ ರೀಜಾ ಹೆಂಡ್ರಿಕ್ಸ್ ಅವರನ್ನು ಔಟ್ ಮಾಡಿದ ನಂತರ ಮೊಹಮ್ಮದ್ ಸಿರಾಜ್ ಭಾರತಕ್ಕೆ ಬ್ರೇಕ್ ಥ್ರೂ ನೀಡಿದರು.
ಮಾರ್ಕ್ರಾಮ್ ಕೂಡ 89 ಎಸೆತಗಳಲ್ಲಿ 79 ರನ್ ಗಳಿಸಿದರು. ಹೆನ್ರಿಚ್ ಕ್ಲಾಸೆನ್ ಎರಡು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಹೊಡೆದು 30 ರನ್ ಗಳಿಸಿದ ನಂತರ ಕುಲದೀಪ್ ಯಾದವ್ ಅವರನ್ನು ಔಟ್ ಮಾಡಿದರು. ಕೊನೆಯಲ್ಲಿ ಡೇವಿಡ್ ಮಿಲ್ಲರ್ ಅಜೇಯ 34 ಎಸೆತಗಳಲ್ಲಿ 35 ರನ್ ಗಳಿಸಿದರ ನೆರವಿನಿಂದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 278 ರನ್ ಗಳಿಸಿತು.
ಇನ್ನು ಭಾರತದ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ 10 ಓವರ್‌ಗಳಲ್ಲಿ 38ಕ್ಕೆ 3 ವಿಕೆಟ್ ಕಬಳಿಸಿದರೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಕುಲದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಇಶಾನ್ ಕಿಶನ್ 93 ರನ್
ವೇಯ್ನ್ ಪರ್ನೆಲ್ ಮತ್ತು ಕಗಿಸೊ ರಬಾಡ ಅವರು ಶಿಖರ್ ಧವನ್ ಮತ್ತು ಶುಭ್‌ಮನ್ ಗಿಲ್ ಅವರನ್ನು ಔಟ್ ಮಾಡುತ್ತಿದ್ದಂತೆಯೇ ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಲು ಯತ್ನಿಸಿದರು. ಆದರೆ ಅಲ್ಲಿಂದ ಮುಂದೆ, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರು ಮೆನ್ ಇನ್ ಬ್ಲೂ ತಂಡ ಬಿಕ್ಕಟ್ಟಿಗೆ ಒಳಗಾಗದಂತೆ ನೋಡಿಕೊಂಡರು.

ಎರಡನೇ ಏಕದಿನ ಶತಕ ಗಳಿಸಿದ ಶ್ರೇಯಸ್ ಅಯ್ಯರ್
ಎಡಗೈ ಬ್ಯಾಟರ್ ಇಶಾನ್ ಕಿಶನ್ 93 ರನ್ ಗಳಿಸಿ ಕೇವಲ 7 ರನ್‌ಗಳಿಂದ ಶತಕ ವಂಚಿತರಾದರು. ಫೋರ್ಚುಯಿನ್ ಬೌಲಿಂಗ್‌ನಲ್ಲಿ ರೀಜಾ ಹೆಂಡ್ರಿಕ್ಸ್‌ಗೆ ಕ್ಯಾಚ್ ನೀಡಿ ಹೊರನಡೆದರು. ಆದಾಗ್ಯೂ, ಶ್ರೇಯಸ್ ತನ್ನ ಸಂಯಮವನ್ನು ಕಳೆದುಕೊಳ್ಳಲಿಲ್ಲ ಮತ್ತು 103 ಎಸೆತಗಳಲ್ಲಿ ತನ್ನ ಎರಡನೇ ಏಕದಿನ ಶತಕವನ್ನು ಗಳಿಸಿದರು. ಅವರು 113 ರನ್ ಗಳಿಸಿ ಅಜೇಯರಾಗಿ ಉಳಿದರು.
ಈ ವೇಳೆ ಭಾರತವು ಇನ್ನೂ 25 ಎಸೆತಗಳು ಬಾಕಿ ಇರುವಂತೆಯೇ ಗುರಿಯನ್ನು ಬೆನ್ನಟ್ಟಿತು. ಕೊನೆಯಲ್ಲಿ ಸಂಜು ಸ್ಯಾಮ್ಸನ್ 36 ಎಸೆತಗಳಲ್ಲಿ 29 ರನ್ ಗಳಿಸಿದ ನಂತರ ತಮ್ಮ ಉತ್ತಮ ಫಾರ್ಮ್ ಅನ್ನು ನಡೆಸಿದರು.
ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವು ಮಂಗಳವಾರ, ಅಕ್ಟೋಬರ್ 11ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications