Ind vs SA 2nd ODI: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ, ಪ್ಲೇಯಿಂಗ್ 11 LIVE

ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ತಂಡದಲ್ಲಿ ಯಾವುದೇ ಆಟಗಾರರ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ. ಆದ್ರೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ವೇಗಿ ಮಾರ್ಕೊ ಯಾನ್ಸನ್ ಬದಲು ಸಿಸಂದ ಮಗಲಾ ಸ್ಥಾನ ಪಡೆದಿದ್ದಾರೆ.
ಈಗಾಗಲೇ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿರುವ ದಕ್ಷಿಣ ಆಫ್ರಿಕಾ ದ್ವಿತೀಯ ಪಂದ್ಯ ಗೆದ್ದು ಸರಣಿ ಗೆಲುವಿನ ವಿಶ್ವಾಸ ಹೊಂದಿದೆ. ಆದ್ರೆ ಟೀಂ ಇಂಡಿಯಾಗೆ ಸರಣಿಯನ್ನ ಜೀವಂತವಾಗಿರಿಸಲು ಈ ಪಂದ್ಯ ಗೆಲ್ಲಲೇಬೇಕಾಗಿದ್ದು, ಮಾಡು ಇಲ್ಲವೆ ಮಡಿ ಪರಿಸ್ಥಿತಿ ಎದುರಾಗಿದೆ.
ದಕ್ಷಿಣ ಆಫ್ರಿಕಾ ಪರ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ವೇಗಿ ಮಾರ್ಕೊ ಯಾನ್ಸನ್‌ಗೆ ರೆಸ್ಟ್ ನೀಡಲಾಗಿದ್ದು, ಯುವ ವೇಗಿ ಸಿಸಂದ ಮಗಲಾಗೆ ಮಣೆ ಹಾಕಲಾಗಿದೆ. 31 ವರ್ಷದ ಸಿಸಲಾ ಮಗಲಾಗೆ ಇದು ಕೇವಲ ಎರಡನೇ ಏಕದಿನ ಪಂದ್ಯವಾಗಿದ್ದು, 26 ನವೆಂಬರ್ 2021ರಂದು ನೆದರ್ಲೆಂಡ್ಸ್ ವಿರುದ್ಧ ಮೊದಲ ಏಕದಿನ ಪಂದ್ಯವನ್ನಾಡಿದ್ರು. ಡಿಸೆಂಬರ್ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾ ಟೆಸ್ಟ್ ಸ್ಕ್ವಾಡ್‌ನಲ್ಲಿ ಅವಕಾಶ ನೀಡಲಾಯತು.
ಉಭಯ ತಂಡಗಳ ಪ್ಲೇಯಿಂಗ್ 11ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂಬುದನ್ನ ಈ ಕೆಳಗೆ ನೋಡಬಹುದು.
ಭಾರತ ಪ್ಲೇಯಿಂಗ್ 11
ಕೆ.ಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಶಾರ್ದೂಲ್ ಠಾಕೂರ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜವೇಂದ್ರ ಚಹಾಲ್
ಬೆಂಚ್: ದೀಪಕ್ ಚಹಾರ್, ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ನವದೀಪ್ ಸೈನಿ, ಇಶಾನ್ ಕಿಶನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ರುತುರಾಜ್ ಗಾಯಕ್ವಾಡ್
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11
ಕ್ವಿಂಟನ್ ಡಿ ಕಾಕ್, ಜನ್ನೆಮನ್ ಮಲನ್, ಟೆಂಬಾ ಬವುಮಾ (ಸಿ), ಏಡನ್ ಮಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ಸಿಸಂದ ಮಗಲಾ, ಆಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ
ಬೆಂಚ್: ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಜುಬೇರ್ ಹಮ್ಜಾ, ಕೈಲ್ ವೆರ್ರೆನ್ನೆ, ಜಾರ್ಜ್ ಲಿಂಡೆ, ಮಾರ್ಕೊ ಯಾನ್ಸೆನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications