For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ ದಾಖಲೆ: T20 ಕ್ರಿಕೆಟ್‌ನಲ್ಲಿ 11,000 ರನ್ ಕಲೆಹಾಕಿದ ಭಾರತದ ಮೊದಲ ಬ್ಯಾಟರ್

Virat kohli

ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 16ರನ್‌ಗಳ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಗೆದ್ದಿದೆ. ವಿಶೇಷ ಏನಂದ್ರೆ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಮೊದಲ ಟಿ20 ಸರಣಿ ಜಯ ಇದಾಗಿದೆ.

ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 237ರನ್ ಕಲೆಹಾಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಟಾಪ್ ಆರ್ಡರ್ ಬ್ಯಾಟರ್ಸ್‌ ಬೃಹತ್ ಮೊತ್ತ ಕಲೆಹಾಕಿಕೊಟ್ಟರು. ಇದು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಫಾರ್ಮೆಟ್‌ನಲ್ಲಿ ಅತಿ ದೊಡ್ಡ ಸ್ಕೋರ್ ಆಗಿದೆ.

16 ರನ್‌ಗಳಿಂದ ಪಂದ್ಯ ಗೆದ್ದ ಭಾರತ

16 ರನ್‌ಗಳಿಂದ ಪಂದ್ಯ ಗೆದ್ದ ಭಾರತ

ಭಾರತ ನೀಡಿದ್ದ 238ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಗೆಲುವಿನ ದಡ ತಲುಪಲು ಸಾಧ್ಯವಾಗಲಿಲ್ಲ. ಆದ್ರೆ ಹರಿಣಗಳ ಪರ ಅಮೋಘ ಆಟವಾಡಿದ ಡೇವಿಡ್ ಮಿಲ್ಲರ್ 46 ಎಸೆತಗಳಲ್ಲಿ ಶತಕ ಹಾಗೂ ಕ್ವಿಂಟನ್ ಡಿಕಾಕ್ ಅರ್ಧಶತಕ ತಂಡದ ಸ್ಕೋರನ್ನು 200ರ ಗಡಿದಾಟಿಸಿತು. ದಕ್ಷಿಣ ಆಫ್ರಿಕಾ 3 ವಿಕೆಟ್ ನಷ್ಟಕ್ಕೆ 221 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರತ 16ರನ್‌ಗಳ ಅಲ್ಪ ಅಂತರದ ಗೆಲುವು ಸಾಧಿಸಿ ಸರಣಿ ಜಯ ಸಾಧಿಸಿತು.

ರಾಹುಲ್, ಕೊಹ್ಲಿ, ಸೂರ್ಯಕುಮಾರ್ ಅಬ್ಬರದ ಬ್ಯಾಟಿಂಗ್!

ರಾಹುಲ್, ಕೊಹ್ಲಿ, ಸೂರ್ಯಕುಮಾರ್ ಅಬ್ಬರದ ಬ್ಯಾಟಿಂಗ್!

ಟೀಂ ಇಂಡಿಯಾ ಬ್ಯಾಟಿಂಗ್ ಹೈಲೈಟ್ಸ್‌ನಲ್ಲಿ ಕೆ.ಎಲ್ ರಾಹುಲ್ 24 ಎಸೆತಗಳಲ್ಲಿ ಅರ್ಧಶತಕ, ವಿರಾಟ್ ಕೊಹ್ಲಿ ಅಜೇಯ 49 ರನ್ ಹಾಗೂ ಸೂರ್ಯಕುಮಾರ್ ಯಾದವ್ 18 ಎಸೆತಗಳಲ್ಲಿ ಅರ್ಧಶತಕದ ಜೊತೆಗೆ ಸ್ಫೋಟಕ 61ರನ್ ಅಭಿಮಾನಿಗಳನ್ನ ಸಾಕಷ್ಟು ರಂಜಿಸಿತು. ಒಂದೆಡೆ ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿ ಶತಕದ ಜೊತೆಯಾಟದ ಬಳಿಕ ಸೂರ್ಯ 61 ರನೌಟ್‌ ಗಳಿಸಿ ರನೌಟ್ ಆದ್ರು. ವಿರಾಟ್ ಕೊಹ್ಲಿ ಎಲ್ಲಿಯೂ ತನ್ನ ಸ್ವಾರ್ಥ ತೋರದೆ ದಿನೇಶ್ ಕಾರ್ತಿಕ್‌ಗೆ ಸ್ಟ್ರೈಕ್‌ ಅನ್ನು ಬಿಟ್ಟು, ಕೇವಲ ಒಂದು ರನ್‌ನಿಂದ ಅರ್ಧಶತಕ ವಂಚಿತರಾದ್ರು.

ಸೂರ್ಯಕುಮಾರ್ ಅಬ್ಬರ, ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗದ 1000 ರನ್‌ ದಾಖಲೆ

ಟಿ20 ಕ್ರಿಕೆಟ್‌ನಲ್ಲಿ 11,000ರನ್ ದಾಖಲಿಸಿದ ವಿರಾಟ್!

ಟಿ20 ಕ್ರಿಕೆಟ್‌ನಲ್ಲಿ 11,000ರನ್ ದಾಖಲಿಸಿದ ವಿರಾಟ್!

ವಿರಾಟ್ ತನ್ನ ಖಾತೆಗೆ ಮತ್ತೊಂದು ಅರ್ಧಶತಕ ಸೇರಿಸದಿದ್ದರೂ, ಅಮೋಘ ದಾಖಲೆಯೊಂದನ್ನ ಈ ವೇಳೆಯಲ್ಲಿ ಮಾಡಿದ್ದಾರೆ. ಅದೇನಂದ್ರೆ ಟಿ20 ಫಾರ್ಮೆಟ್‌ನಲ್ಲಿ ವಿರಾಟ್ ಕೊಹ್ಲಿ 11,000 ರನ್ ಗಡಿದಾಟುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ ಮತ್ತು ಐಪಿಎಲ್‌ ಎರಡು ಫಾರ್ಮೆಟ್ ಅನ್ನು ಸೇರಿಸಿ 11 ಸಾವಿರ ರನ್ ಗಡಿಯನ್ನ ಕೊಹ್ಲಿ ಏರಿದ್ದಾರೆ.

ವಿರಾಟ್ ಕೊಹ್ಲಿ ಒಟ್ಟಾರೆ ಟಿ20 ಫಾರ್ಮೆಟ್‌ನ 354 ಪಂದ್ಯ, 337 ಇನ್ನಿಂಗ್ಸ್‌ನಲ್ಲಿ 40ಕ್ಕೂ ಹೆಚ್ಚು ಸರಾಸರಿಯಲ್ಲಿ 11 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಒಟ್ಟು 6 ಶತಕ, 81 ಅರ್ಧಶತಕ ದಾಖಲಿಸುವುದರ ಜೊತೆಗೆ 132.78 ಸ್ಟ್ರೈಕ್‌ರೇಟ್ ಹೊಂದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ ಅಜೇಯ 49 ರನ್ ಕಲೆಹಾಕಿದ್ದು, 175ರ ಸ್ಟ್ರೈಕ್‌ರೇಟ್‌ನಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಿಡಿಸಿದ್ರು.

Ind Vs SA T20: ವೈಯಕ್ತಿಕ ದಾಖಲೆಗಿಂತ ತಂಡ ಗೆಲ್ಲುವುದು ಮುಖ್ಯ, ಕೊಹ್ಲಿ ವರ್ತನೆಗೆ ಭಾರಿ ಮೆಚ್ಚುಗೆ

ಭಾರತ-ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್

ಭಾರತ-ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್

ಟೀಂ ಇಂಡಿಯಾ: ಕೆ.ಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್

ಬೆಂಚ್: ಯುಜವೇಂದ್ರ ಚಹಾಲ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಏಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ

ಬೆಂಚ್: ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಡ್ವೈನ್ ಪ್ರಿಟೋರಿಯಸ್, ತಬ್ರೈಜ್ ಶಮ್ಸಿ

Story first published: Monday, October 3, 2022, 10:26 [IST]
Other articles published on Oct 3, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+