
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೊದಲ ಇನ್ನಿಂಗ್ಸ್‌ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸುತ್ತಿರುವ ಟೀಮ್ ಇಂಡಿಯಾ ಹಿನ್ನೆಡೆಯನ್ನು ಅನುಭವಿಸಿದೆ. ಆರಂಭದಲ್ಲಿಯೇ ಭಾರತ ತನ್ನ ವಿಕೆಟ್‌ಗಳನ್ನು ಕಳೆದುಕೊಳ್ಳಲು ಆರಂಭಿಸಿತ್ತು. ನಾಯಕ ಕೆಎಲ್ ರಾಹುಲ್ ಮಾತ್ರವೇ ನೆಲಕಚ್ಚಿ ನಿಲ್ಲುವ ಪ್ರಯತ್ನ ನಡೆಸಿದರಾದರೂ ಅವರ ಪ್ರದರ್ಶನ ಕೂಡ 50 ರನ್‌ಗಳಿಗೆ ಅಂತ್ಯವಾಗಿದೆ. ಹೀಗಾಗಿ ಮೊದಲ ದಿನದಾಟದಲ್ಲಿ ಭಾರತ ಹಿನ್ನೆಡೆಯನ್ನು ಅನುಭವಿಸಿದೆ.
ಅದರಲ್ಲೂ ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಮತ್ತೊಂದು ಇನ್ನಿಂಗ್ಸ್‌ನಲ್ಲಿಯೂ ಕೆಟ್ಟ ಪ್ರದರ್ಶನ ನೀಡಿದ್ದಾರೆ. ಟೀಮ್ ಅನುಭವಿ ಆಟಗಾರರಾದ ಸಂಕಷ್ಟದ ಸಂದರ್ಭದಲ್ಲಿ ನೆರವಾಗಬೇಕಿದ್ದ ಈ ಆಟಗಾರರು ಪದೇ ಪದೇ ಕಳಪೆ ಪ್ರದರ್ಶನ ನೀಡಿ ವಿಕೆಟ್ ಕಳೆದುಕೊಳ್ಳುವ ಮೂಲಕ ಇತರ ಆಟಗಾರರ ಮೇಲೆ ಒತ್ತಡ ಹೆಚ್ಚುವಂತೆ ಮಾಡುತ್ತಿದ್ದಾರೆ. ತಂಡದ ಮ್ಯಾನೇಜ್‌ಮೆಂಟ್ ಹಾಗೂ ಆಯ್ಕೆಗಾರರು ಕೂಡ ಪದೇ ಪದೇ ಈ ಆಟಗಾರರಿಗೆ ಅವಕಾಶ ನೀಡುತ್ತಿರುವುದಕ್ಕೆ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್‌ನ ದಿಗ್ಗಜ ಆಟಗಾರ ಹಾಗೂ ಕಾಮೆಂಟೇಟರ್ ಸುನಿಲ್ ಗವಾಸ್ಕರ್ ಈ ಇಬ್ಬರು ಆಟಗಾರರ ಪ್ರದರ್ಶನಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ್ ಪೂಜಾರ ಇಬ್ಬರಿಗೂ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಎರಡನೇ ಇನ್ನಿಂಗ್ಸ್‌ಈ ಇಬ್ಬರು ಆಟಗಾರರು ತಮ್ಮ ಟೆಸ್ಟ್ ವೃತ್ತಿಜೀವನವನ್ನು ಉಳಿಸಿಕೊಳ್ಳಲು ಎರಡನೇ ಇನ್ನಿಂಗ್ಸ್ ಅಂತಿಮ ಅವಕಾಶ ಎಂದು ಎಚ್ಚರಿಕೆ ನೀಡಿದ್ದಾರೆ.
"ಈ ಎರಡು ಔಟಾದ ರೀತಿಯನ್ನು ನೋಡಿದ ನಂತರ ಯಾರಾದರು ಕೂಡ ಒಂದು ವಿಷಯ ಅರ್ಥ ಮಾಡಿಕೊಳ್ಳಬಹುದು. ಪೂಜಾರ ಹಾಗೂ ರಹಾನೆಗೆ ಮುಂದಿನ ಇನ್ನಿಂಗ್ಸ್ ಟೆಸ್ಟ್ ವೃತ್ತಿ ಜೀವನವನ್ನು ಉಳೀದಿಕೊಳ್ಳಲು ಇರುವ ಅವಕಾಶವಾಗಿದೆ" ಎಂದು ಲಿಟಲ್ ಮಾಸ್ಟರ್ ಖ್ಯಾತಿಯ ಸುನಿಲ್ ಗವಾಸ್ಕರ್ ಖಡಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಮೆಂಟರಿ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
"ಈ ಒಬ್ಬರು ಆಟಗಾರರ ಸ್ಥಾನದ ಬಗ್ಗೆ ಈಗ ಸಾಕಷ್ಟು ಪ್ರಶ್ನೆಗಳು ಏಳುತ್ತಿದೆ. ಅವರಲ್ಲಿ ಈಗ ಕೇವಲ ಒಂದು ಇನ್ನಿಂಗ್ಸ್ ಮಾತ್ರವೇ ಉಳಿದುಕೊಂಡಿದೆ. ಭಾರತ ಆಡುತ್ತಿರುವ ರೀತಿಯನ್ನು ನೋಡಿದರೆ ಮತ್ತೊಂದು ಅವಕಾಶ ಅವಕಾಶ ದೊರೆಯಲಿದೆ. ಈ ಅವಕಾಶವನ್ನು ಬಳಸಿಕೊಂಡು ಈ ಆಟಗಾರರು ರನ್‌ಗಳಿಸಿದರೆ ಮಾತ್ರವೇ ತಂಡದಲ್ಲಿ ಸ್ಥಾನ ಉಳಿಯುವುದು ಸಾಧ್ಯ" ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಇನ್ನು ಟೀಮ್ ಇಂಡಿಯಾ ಮೊದಲ ದಿನ ಕಳಪೆ ಪ್ರದರ್ಶನ ನಿಡಿದ್ದು ಕೆಎಲ್ ರಾಹುಲ್ ಹೊರತುಪಡಿಸಿ ಅಗ್ರ ಹಾಗೂ ಮಧ್ಯಮ ಕ್ರಮಾಂಕದ ಆಟಗಾರರೆಲ್ಲರೂ ಕೂಡ ಸಂಪೂರ್ಣ ವೈಫಲ್ಯವನ್ನು ಅನುಭವಿಸಿದ್ದಾರೆ. ಹೀಗಾಗಿ ಭಾರತ ಈ ಪಂದ್ಯದಲ್ಲಿ ಭಾರತ ಭಾರೀ ಹಿನ್ನಡೆಯನ್ನು ಅನುಭವಿಸಿದೆ. ಆತಿಥೇಯ ತಂಡದ ಬೌಲರ್‌ಗಳು ಭಾರತೀಯ ಬ್ಯಾಟರ್‌ಗಳನ್ನು ಅಗ್ಗಕ್ಕೆ ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದರೆ. ಅದರಲ್ಲೂ ನಾಯಕ ವಿರಾಟ್ ಕೊಹ್ಲಿ ಕೂಡ ಈ ಪಂದ್ಯದಲ್ಲಿ ಅಲಭ್ಯವಾಗಿರುವುದು ತಂಡಕ್ಕಾದ ದೊಡ್ಡ ಹಿನ್ನಡೆಯಾಗಿದೆ.
ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ನಾಯಕ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್(ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ(ಡಬ್ಲ್ಯೂ), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್‌ಗಿಡಿ