Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ದ. ಆಫ್ರಿಕಾ: 2ನೇ ಟೆಸ್ಟ್ ಪಂದ್ಯ: ವಾಂಡರರ್ಸ್ ಪಿಚ್ ರಿಪೋರ್ಟ್, ದಾಖಲೆ, ಹವಾಮಾನ ವರದಿ

Ind vs SA 2nd Test: Wanderers Stadium Pitch Report and Johannesburg Weather Info

ಸೋಮವಾರ ಜೊಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳು ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಸೆಂಚುರಿಯನ್‌ನಲ್ಲಿ ಮೊದಲ ಪಂದ್ಯವನ್ನು 113 ರನ್‌ಗಳ ಅಂತರದಿಂದ ಗೆದ್ದಿರುವ ಟೀಮ್ ಇಂಡಿಯಾ ವಾಂಡರರ್ಸ್ ಕ್ರೀಡಾಂಗಣದಲ್ಲಿಯೂ ಗೆದ್ದು ಸರಣಿಯನ್ನು ವಶಕ್ಕೆ ಪಡೆಯಲು ಹಾತೊರೆಯುತ್ತಿದೆ.

ಜೋಹನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡ ಗೆಲ್ಲು ಸಾಧ್ಯವಾದರೆ ವಿರಾಟ್ ಕೊಹ್ಲಿ ಪಡೆ ಐತಿಹಾಸಿಕ ಸಾಧನೆಯನ್ನು ಮಾಡಿದಂತಾಗುತ್ತದೆ. 2-0 ಅಂತರದಿಂದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯನ್ನು ವಶಕ್ಕೆ ಪಡೆದಂತಾಗುತ್ತದೆ. ಅಲ್ಲದೆ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್‌ನಲ್ಲಿ ಸರಣಿಯನ್ನು ಗೆದ್ದ ಮೊದಲ ಏಷ್ಯಾದ ರಾಷ್ಟ್ರ ಎನಿಸಿಕೊಳ್ಳಲಿದೆ.

ಹೀಗಾಗಿ ಈ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪೈಪೋಟಿ ಸಾಕಷ್ಟು ಕುತೂಹಲ ಮೂಡಿಸಿದೆ. ವಾಂಡರರ್ಸ್ ಕ್ರೀಡಾಂಗಣದ ಪಿಚ್ ರಿಪೋರ್ಟ್, ಹವಾಮಾನ ವರದಿ ಹಾಗೂ ದಾಖಲೆಗಳ ಬಗ್ಗೆ ನೋಡೋಣ..

ವಾಂಡರರ್ಸ್ ಪಿಚ್ ರಿಪೋರ್ಟ್: ವಾಂಡರರ್ಸ್ ಪಿಚ್ ಸಾಮಾನ್ಯವಾಗಿ ಬ್ಯಾಟ್ಸ್‌ಮನ್ ಹಾಗೂ ಬೌಲರ್‌ಗಳು ಇಬ್ಬರಿಗೂ ಸಹಾಯವನ್ನು ನೀಡುತ್ತದೆ. ಬ್ಯಾಟ್ಸ್‌ಮನ್‌ಗಳು ಸಾಕಷ್ಟು ಏಕಾಗ್ರತೆಯ ಪ್ರದರ್ಶನ ನೀಡಿದರೆ ಇಲ್ಲಿ ರನ್‌ಗಳನ್ನು ಗಳಿಸಬಹುದು. ಅಲ್ಲದೆ ಪಿಚ್ ಉತ್ತಮ ಬೌನ್ಸ್ ಹೊಂದಿರುವ ಕಾರಣದಿಂದಾಗಿ ಯಶಸ್ಸು ಪಡೆಯಲಿ ಸಾಧ್ಯವಿದೆ.

ಹವಾಮಾನ ವರದಿ: ಸೆಂಚುರಿಯನ್‌ನಂತೆಯೇ ಜೋಹಾನ್ಸ್‌ಬರ್ಸ್ ಪಂದ್ಯಕ್ಕೂ ಮಳೆಯ ಆತಂಕವಿದೆ. ಪಂದ್ಯದ ಮೊದಲ ದಿನವಾದ ಸೋಮವಾರ (ಜನವರಿ 3) ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆಯಿಲ್ಲ. ಆದರೆ ಉಳಿದ ನಾಲ್ಕು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಗಳಿವೆ. ಹೀಗಾಗಿ ಎಷ್ಟು ಪ್ರಮಾಣದಲ್ಲಿ ಪಂದ್ಯಕ್ಕೆ ಅವಕಾಶ ದೊರೆಯಲಿದೆ ಎಂಬುದು ಕೂಡ ಗಮನಾರ್ಹ ಸಂಗತಿ.

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ: ಇನ್ನು ದಕ್ಷಿಣ ಆಫ್ರಿಕಾ ಹಾಗೂ ಭಾರತ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್‌ಸ್ಟಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ಪಂದ್ಯದ ನೇರಪ್ರಸಾರವಾಗಲಿದೆ.

ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ, ಡುವಾನ್ ಸಿಯಾಂಡರಿಕ್ಸ್, ಬೆಯುರ್ ಸಿಂಡಾರಿಕ್ಸ್, , ಜಾರ್ಜ್ ಲಿಂಡೆ, ಪ್ರೆನೆಲನ್ ಸುಬ್ರಾಯೆನ್, ಕೈಲ್ ವೆರ್ರೆನ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಟೀಮ್ ಇಂಡಿಯಾ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್ (ವಿಕೆಟ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಯಂತ್ ಯಾದವ್, ಎಸ್ ಜಯಂತ್ ಯಾದವ್ , ಹನುಮ ವಿಹಾರಿ, ಪ್ರಿಯಾಂಕ್ ಪಾಂಚಾಲ್, ಇಶಾಂತ್ ಶರ್ಮಾ

Story first published: Monday, January 3, 2022, 11:17 [IST]
Other articles published on Jan 3, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+