IND vs SA 3rd ODI: ದಕ್ಷಿಣ ಆಫ್ರಿಕಾ ಸೋಲಿಸಿ ಆಸ್ಟ್ರೇಲಿಯಾದ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಭಾರತ

ಮಂಗಳವಾರ, ಅಕ್ಟೋಬರ್ 11ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದ ಭಾರತ ತಂಡವು ಆಸ್ಟ್ರೇಲಿಯಾದ 19 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿತು.
2003ರಲ್ಲಿ ಆಸ್ಟ್ರೇಲಿಯಾ ತಂಡ ಮೂರನೇ ಬಾರಿಗೆ 50 ಓವರ್‌ಗಳ ವಿಶ್ವಕಪ್ ಗೆದ್ದಾಗ, ಅವರು 38 ಪಂದ್ಯಗಳನ್ನು ಗೆದ್ದರು ಮತ್ತು ಇದು ಕ್ಯಾಲೆಂಡರ್ ವರ್ಷವೊಂದರಲ್ಲಿ ರಾಷ್ಟ್ರವೊಂದರಿಂದ ಅತಿ ಹೆಚ್ಚು ಗೆಲುವುಗಳನ್ನು ದಾಖಲಿಸಿದ ದಾಖಲೆಯಾಗಿತ್ತು. ಇದೀಗ 19 ವರ್ಷಗಳ ನಂತರ ಭಾರತ ತನ್ನ 38ನೇ ಪಂದ್ಯವನ್ನು ಗೆಲ್ಲುವ ಮೂಲಕ ಆಸೀಸ್ ದಾಖಲೆಯನ್ನು ಸರಿಗಟ್ಟಿದೆ.

ಭಾರತ ತಂಡಕ್ಕೆ ದಾಖಲೆಯನ್ನು ಮುರಿಯುವ ಅವಕಾಶ
ಅಕ್ಟೋಬರ್ 23ರ ಭಾನುವಾರದಂದು ಪ್ರಸಿದ್ಧ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (ಎಂಸಿಜಿ)ನಲ್ಲಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನದ ವಿರುದ್ಧ ಟಿ20 ವಿಶ್ವಕಪ್ 2022ರ ಸೂಪರ್ 12 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳನ್ನು ಎದುರಿಸುವಾಗ ಭಾರತ ತಂಡವು ದಾಖಲೆಯನ್ನು ಮುರಿಯುವ ಅವಕಾಶವನ್ನು ಹೊಂದಿರುತ್ತದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಆಟಕ್ಕೆ ಸಂಬಂಧಿಸಿದಂತೆ, ಮೆನ್ ಇನ್ ಬ್ಲೂ ತಮ್ಮ ಕರಾರುವಕ್ಕಾದ ಬೌಲಿಂಗ್ ದಾಳಿಯಿಂದ ಪ್ರವಾಸಿ ತಂಡವನ್ನು 27.1 ಓವರ್‌ಗಳಲ್ಲಿ 99 ರನ್‌ಗಳಿಗೆ ಔಟ್ ಮಾಡಿದರು. ಕುಲದೀಪ್ ಯಾದವ್ ನಾಲ್ಕು ವಿಕೆಟ್ ಪಡೆದು ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಲೈನ್‌ಅಪ್‌ನ ಬಲವನ್ನು ಮುರಿದರು.

ಇನ್ನು 185 ಎಸೆತಗಳು ಬಾಕಿ ಇರುವಂತೆಯೇ ಭಾರತಕ್ಕೆ ಜಯ
42 ಎಸೆತಗಳಲ್ಲಿ 34 ರನ್ ಗಳಿಸಿದ ಹೆನ್ರಿಕ್ ಕ್ಲಾಸೆನ್ ಹೊರತುಪಡಿಸಿ, ದಕ್ಷಿಣ ಆಫ್ರಿಕಾದ ಯಾವ ಬ್ಯಾಟರ್‌ಗಳು ಭಾರತದ ಬೌಲರ್‌ಗಳ ವಿರುದ್ಧ ಹೋರಾಟ ತೋರಲಿಲ್ಲ. ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಮತ್ತು ಶಹಬಾಜ್ ಅಹ್ಮದ್ ತಲಾ ಎರಡು ವಿಕೆಟ್ ಪಡೆದರು.
ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡ ನಂತರ 19.1 ಓವರ್‌ಗಳಲ್ಲಿ ಗುರಿಯನ್ನು ಬೆನ್ನಟ್ಟಿತು ಮತ್ತು ಏಕದಿನ ಪಂದ್ಯದಲ್ಲಿ ತನ್ನ ಐದನೇ ಅತಿದೊಡ್ಡ ಗೆಲುವನ್ನು ದಾಖಲಿಸಿತು. ಇನ್ನು 185 ಎಸೆತಗಳು ಬಾಕಿ ಇರುವಂತೆಯೇ ಶಿಖರ್ ಧವನ್ ನಾಯಕತ್ವದ ತಂಡ ಪಂದ್ಯವನ್ನು ಗೆದ್ದರು. ಶ್ರೇಯಸ್ ಅಯ್ಯರ್ ಅವರು ಮಾರ್ಕೊ ಜಾನ್ಸೆನ್ ಅವರ ಬೌಲಿಂಗ್‌ನಲ್ಲಿ ಗೆಲುವಿನ ಸಿಕ್ಸರ್ ಬಾರಿಸಿದರು ಮತ್ತು ಭಾರತದ ಗೆಲುವನ್ನು ಖಚಿತಪಡಿಸಿಕೊಂಡರು.

ಮೂರು ಪಂದ್ಯಗಳ ಸರಣಿಯನ್ನು 2-1ರಲ್ಲಿ ವಶ
ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿಫಲವಾದ ನಂತರ ಶುಭಮನ್ ಗಿಲ್ ಅರ್ಧಶತಕ ಗಳಿಸುವ ಹಾದಿಯಲ್ಲಿದ್ದರು, ಆದರೆ ಕೇವಲ ಒಂದು ರನ್‌ಗಳಿಂದ ಅರ್ಧಶತಕ ವಂಚಿತರಾದರು. ಲುಂಗಿ ಎನ್‌ಗಿಡಿ ಅವರ ಬೌಲಿಂಗ್‌ನಲ್ಲಿ ವಿಕೆಟ್ ನೀಡಿದರು.
ಭಾರತ ತಂಡವು ಆರಂಭಿಕ ಏಕದಿನ ಪಂದ್ಯದಲ್ಲಿ ಸೋತಿತು, ಆದರೆ ಎರಡು ಮತ್ತು ಮೂರನೇ ಪಂದ್ಯವನ್ನು ಗೆಲ್ಲುವುದರ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1ರಲ್ಲಿ ವಶಪಡಿಸಿಕೊಂಡಿತು.

ಉಭಯ ತಂಡಗಳ ಆಡುವ 11ರ ಬಳಗ
ಟೀಂ ಇಂಡಿಯಾ: ಶಿಖರ್ ಧವನ್(ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಜನ್ನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್(ನಾಯಕ), ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೋರ್ನ್ ಫಾರ್ಟುಯಿನ್, ಲುಂಗಿ ಎನ್‌ಗಿಡಿ, ಎನ್ರಿಕ್ ನೊರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications