IND vs SA 3ನೇ ಟಿ20: ವಿಶಾಖಪಟ್ಟಣ ಕ್ರೀಡಾಂಗಣದಲ್ಲಿ ಭಾರತ ಎಷ್ಟು ಪಂದ್ಯ ಗೆದ್ದಿದೆ, ಎಷ್ಟು ಸೋತಿದೆ? ಇಲ್ಲಿದೆ ವಿವರ

ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿ ಮುಕ್ತಾಯವಾದ ಬೆನ್ನಲ್ಲೇ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಮುಖಾಮುಖಿಯಾಗಿದ್ದು, ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿವೆ.
ಮೊದಲಿಗೆ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಜಯ ಸಾಧಿಸಿದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ನಂತರ ಕಟಕ್ ನಗರದ ಬಾರಬತಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿಯೂ ಗೆದ್ದು ಬೀಗಿ ಸರಣಿಯಲ್ಲಿ 2 - 0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಹೀಗೆ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ದಕ್ಷಿಣ ಆಫ್ರಿಕಾ ಸರಣಿ ಕೈ ವಶಪಡಿಸಿಕೊಳ್ಳಲು ಉಳಿದ 3 ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯವನ್ನು ಗೆದ್ದರೂ ಸಾಕಾಗಿದ್ದು, ಇತ್ತ 2 ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕೆಂದರೆ ಉಳಿದ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸಬೇಕಾದ ಒತ್ತಡಕ್ಕೆ ಸಿಲುಕಿಕೊಂಡಿದೆ.
ಹೀಗಾಗಿ ಇತ್ತಂಡಗಳ ನಡುವೆ ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಸರಣಿ ಗೆಲ್ಲುವ ತನ್ನ ಆಸೆಯನ್ನು ಜೀವಂತವಾಗಿರಿಸಿಕೊಳ್ಳುತ್ತಾ ಅಥವಾ ಈ ಪಂದ್ಯದಲ್ಲಿಯೂ ಸೋತು ಸರಣಿ ಗೆಲ್ಲುವ ತನ್ನ ಆಸೆಯನ್ನು ಕೈ ಬಿಡುತ್ತಾ ಎಂಬ ಪ್ರಶ್ನೆಗೆ ಉತ್ತರ ಇಂದು ( ಜೂನ್ 14 ) ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಸಿಗಲಿದೆ. ಈ ಪಂದ್ಯ ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬಹುದಿನಗಳ ನಂತರ ವಿಶಾಖಪಟ್ಟಣಂ ಕ್ರಿಕೆಟ್ ಅಭಿಮಾನಿಗಳು ಅಂತರರಾಷ್ಟ್ರೀಯ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ. ಹಾಗೂ ಇಲ್ಲಿ ನಡೆದಿರುವ ಟಿ ಟ್ವೆಂಟಿ ಪಂದ್ಯಗಳೆಷ್ಟು, ಈ ಪೈಕಿ ಎಷ್ಟು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿದೆ ಮತ್ತು ಈ ಕ್ರೀಡಾಂಗಣದಲ್ಲಿ ಹರಿದುಬಂದಿರುವ ಅತ್ಯಧಿಕ ರನ್ ಎಷ್ಟು ಎಂಬುದರ ಕುರಿತಾದ ವಿವರ ಕೆಳಕಂಡಂತಿದೆ.

ಡಾ ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದ ಟಿಟ್ವೆಂಟಿ ಅಂಕಿ ಅಂಶ
ವಿಶಾಖಪಟ್ಟಣಂನ ಡಾ ವೈ ಎಸ್ ರಾಜಶೇಖರರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ಒಟ್ಟು 2 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳು ನಡೆದಿವೆ. ಈ ಎರಡೂ ಪಂದ್ಯಗಳಲ್ಲಿಯೂ ಮೊದಲು ಬ್ಯಾಟಿಂಗ್ ಮಾಡಿದ ತಂಡ ಸೋತಿದ್ದು ಚೇಸಿಂಗ್ ಮಾಡಿದ ತಂಡ ಗೆಲುವನ್ನು ಸಾಧಿಸಿದೆ.
ಇಲ್ಲಿ ದಾಖಲಾದ ಅತ್ಯಧಿಕ ರನ್: ಆಸ್ಟ್ರೇಲಿಯಾ 127/7 vs ಭಾರತ, 2019
ದಾಖಲಾದ ಕಡಿಮೆ ಮೊತ್ತ: ಶ್ರೀಲಂಕಾ 82ಕ್ಕೆ ಆಲ್ ಔಟ್ vs ಭಾರತ, 2016
ಅಧಿಕ ರನ್ ಬಾರಿಸಿರುವ ಆಟಗಾರ: ಗ್ಲೆನ್ ಮ್ಯಾಕ್ಸ್‌ವೆಲ್ 56 vs ಭಾರತ
ಅಧಿಕ ವಿಕೆಟ್ ಪಡೆದ ಆಟಗಾರ: ರವಿಚಂದ್ರನ್ ಅಶ್ವಿನ್ 8 ರನ್‌ಗೆ 4 ವಿಕೆಟ್ vs ಶ್ರೀಲಂಕಾ
ಸಿಕ್ಸರ್ ಸಂಖ್ಯೆ: ಈ ಕ್ರೀಡಾಂಗಣದಲ್ಲಿ ನಡೆದಿರುವ ಒಟ್ಟು 2 ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಪೈಕಿ 7 ಸಿಕ್ಸರ್ ಹರಿದುಬಂದಿದೆ ಹಾಗೂ 38 ಬೌಂಡರಿಗಳು ಕೂಡ ಹರಿದಿವೆ.
ಹೆಚ್ಚು ಸಿಕ್ಸರ್ ಮತ್ತು ಬೌಂಡರಿ ಬಾರಿಸಿದರು: ಈ ಕ್ರೀಡಾಂಗಣದಲ್ಲಿ 2 ಸಿಕ್ಸರ್ ಬಾರಿಸಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ ಮತ್ತು 6 ಬೌಂಡರಿ ಬಾರಿಸಿರುವ ಕೆಎಲ್ ರಾಹುಲ್ ಅತಿ ಹೆಚ್ಚು ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಡಾ ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಅಂಕಿ ಅಂಶ
ಇನ್ನು ಈ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಒಟ್ಟು 2 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದು, 2016ರಲ್ಲಿ ಶ್ರೀಲಂಕಾ ವಿರುದ್ಧ ಜಯ ಸಾಧಿಸಿತ್ತು ಹಾಗೂ 2019ರಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸೋಲನ್ನು ಅನುಭವಿಸಿತ್ತು.
ಈ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಪರ ಇನ್ನಿಂಗ್ಸ್‌ವೊಂದರಲ್ಲಿ ಅತ್ಯಧಿಕ ರನ್ ಗಳಿಸಿರುವ ಆಟಗಾರ: ಕೆಎಲ್ ರಾಹುಲ್ 50 ರನ್
ಹಾಗೂ ಈ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದಿರುವ ಬೌಲರ್ ರವಿಚಂದ್ರನ್ ಅಶ್ವಿನ್ ( 1 ಇನ್ನಿಂಗ್ಸ್‌ನಲ್ಲಿ 4 ವಿಕೆಟ್ )

ಸಂಭಾವ್ಯ ಆಡುವ ಬಳಗಗಳು
ಈ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಇತ್ತಂಡಗಳ ಸಂಭಾವ್ಯ ಆಡುವ ಬಳಗ ಈ ಕೆಳಕಂಡಂತಿದೆ.
ಭಾರತ: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್
ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ (ನಾಯಕ), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ತಬ್ರೈಜ್ ಶಮ್ಸಿ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications