Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs SA, 3ನೇ ಟಿ20 ಪಂದ್ಯ: ರೊಸ್ಸೋ ಅಬ್ಬರದ ಶತಕ: ಭಾರತಕ್ಕೆ ಬೃಹತ್ ಗುರಿ ನೀಡಿದ ದ. ಆಫ್ರಿಕಾ

Ind vs SA 3rd t20, India need 228 runs to win against South Africa in last match of the series

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿ ಭರ್ಜರಿಯಾಗಿ ಪ್ರದರ್ಶನ ನೀಡಿದೆ. ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಹಾಗೂ ರೈಲೀ ರೊಸ್ಸೋ ಅಮೋಘ ಪ್ರದರ್ಶನ ನೀಡಿದ್ದಾರೆ. ಕ್ವಿಂಟನ್ ಡಿಕಾಕ್ ಅರ್ಧ ಶತಕ ಸಿಡಿಸಿದ್ದರೆ ರೈಲೀ ರೊಸ್ಸೋ ಅಮೋಘ ಶತಕ ಸಿಡಿಸಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಗೆಲ್ಲಲು 216 ರನ್‌ಗಳ ಗುರಿ ನಿಗದಿಪಡಿಸಿದೆ.

ನಾಯಕ ಟೆಂಬಾ ಬವುಮಾ ಮತ್ತೊಮ್ಮೆ ವೈಫಲ್ಯ ಅನುಭವಿಸಿದರು ಕೂಡ ತಂಡಕ್ಕೆ ಆಘಾತವುಂಟಾಗದಂತೆ ನೋಡಿಕೊಂಡಿದ್ದು ಕ್ವಿಂಟನ್ ಡಿಕಾಕ್. ರೊಸ್ಸೊ ಅವರೊಂದಿಗೆ ಎರಡನೇ ವಿಕೆಟ್‌ಗೆ 90 ರನ್‌ಗಳ ಜೊತೆಯಾಟ ನೀಡಿದ ಡಿಕಾಕ್ 43 ಎಸೆತಗಳಲ್ಲಿ 68 ರನ್‌ಗಳಿಸಿ ರನೌಟ್ ಮೂಲಕ ವಿಕೆಟ್ ಕಳೆದುಕೊಂಡರು. ಬಳಿಕ ಟ್ರಿಸ್ಟನ್ ಸ್ಟಬ್ಸ್ ಜೊತೆಗೆ ಮತ್ತೊಂದು ಅಮೋಘ ಜೊತೆಯಾಟವನ್ನು ನೀಡಿದರು ರೊಸ್ಸೋ. ಸ್ಪೋಟಕವಾಗಿ ಬ್ಯಾಟಿಂಗ್ ನಡೆಸಿದ ಅವರು ಕೇವಲ 48 ಎಸೆತಗಳಲ್ಲಿ 100 ರನ್‌ಗಳನ್ನು ಗಳಿಸಿ ಭರ್ಜರಿ ಶತಕವನ್ನು ದಾಖಲಿಸಿದ್ದಾರೆ. ಈ ಅಬ್ಬರದ ಇನ್ನಿಂಗ್ಸ್‌ನಲ್ಲಿ8 ಸಿಕ್ಸರ್ ಹಾಗೂ 7 ಬೌಂಡರಿ ಒಳಗೊಂಡಿತ್ತು ಎಂಬುದು ಗಮನಾರ್ಹ.

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರಿಲೇ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ

ಬೆಂಚ್: ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಅನ್ರಿಚ್ ನಾರ್ಟ್ಜೆ

ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಯುಜ್ವೇಂದ್ರ ಚಹಾಲ್, ಶಹಬಾಜ್ ಅಹ್ಮದ್, ಅರ್ಷದೀಪ್ ಸಿಂಗ್

Story first published: Tuesday, October 4, 2022, 21:10 [IST]
Other articles published on Oct 4, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+