ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs SA 3rd T20I : ಕೊಹ್ಲಿ, ರಾಹುಲ್ ಅನುಪಸ್ಥಿತಿ; ಸಂಭಾವ್ಯ ತಂಡಗಳು, ಸಮಯ, ಎಲ್ಲಿ ವೀಕ್ಷಣೆ?

IND vs SA 3rd T20: India vs South Africa Prediction Playing 11 Teams, Time, Where To Watch?

ಮಂಗಳವಾರ (ಅಕ್ಟೋಬರ್ 4) ಇಂದೋರ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡು ತಂಡಗಳು ಮೂರು ಪಂದ್ಯಗಳ ಸರಣಿಯ ಅಂತಿಮ ಪಂದ್ಯದಲ್ಲಿ ಎದುರಾಗಲಿವೆ. ಟಿ20 ವಿಶ್ವಕಪ್ 2022ರ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧ ಮತ್ತೊಂದು ಕಠಿಣ ಪರೀಕ್ಷೆಯನ್ನು ಎದುರಿಸಲು ಭಾರತೀಯ ಬೌಲರ್‌ಗಳು ಕಾಯುತ್ತಿದ್ದಾರೆ.

ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಸರಣಿಯನ್ನು ವಶಪಡಿಸಿಕೊಂಡ ನಂತರ, ಭಾರತ ತಂಡದ ಮ್ಯಾನೇಜ್‌ಮೆಂಟ್ ತನ್ನ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಉಪನಾಯಕ ಕೆಎಲ್ ರಾಹುಲ್‌ಗೆ ಅಂತಿಮ ಪಂದ್ಯಕ್ಕೆ ವಿಶ್ರಾಂತಿ ನೀಡಲು ನಿರ್ಧರಿಸಿದೆ.

IND vs SA: ಒಂದೇ ಪಂದ್ಯದಲ್ಲಿ 3 ದಾಖಲೆ ಉಡೀಸ್ ಮಾಡಿದ ಸೂರ್ಯಕುಮಾರ್ ಯಾದವ್IND vs SA: ಒಂದೇ ಪಂದ್ಯದಲ್ಲಿ 3 ದಾಖಲೆ ಉಡೀಸ್ ಮಾಡಿದ ಸೂರ್ಯಕುಮಾರ್ ಯಾದವ್

"ಹೌದು, ಅಂತಿಮ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಇಬ್ಬರಿಗೂ ವಿಶ್ರಾಂತಿ ನೀಡಲಾಗಿದೆ," ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಪಂದ್ಯದ ನಂತರ, ಕೊಹ್ಲಿ ಮತ್ತು ರಾಹುಲ್ ಮುಂಬೈನಲ್ಲಿ ತಂಡದೊಂದಿಗೆ ಸಂಪರ್ಕ ಸಾಧಿಸುತ್ತಾರೆ. ಅಲ್ಲಿಂದ ತಂಡವು ಅಕ್ಟೋಬರ್ 6ರಂದು ಟಿ20 ವಿಶ್ವಕಪ್ 2022ಗಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ರೋಹಿತ್ ಶರ್ಮಾ ಜೊತೆಗೆ ಯಾರು ಇನ್ನಿಂಗ್ಸ್ ಅರಂಭಿಸಲಿದ್ದಾರೆ?

ರೋಹಿತ್ ಶರ್ಮಾ ಜೊತೆಗೆ ಯಾರು ಇನ್ನಿಂಗ್ಸ್ ಅರಂಭಿಸಲಿದ್ದಾರೆ?

ಆಡುವ 11ರ ಬಳಗದಲ್ಲಿ ಅಂತಿಮ ಪಂದ್ಯಕ್ಕೆ ಕೊಹ್ಲಿ ಬದಲಿಗೆ ಸ್ಟ್ಯಾಂಡ್‌ಬೈ ಬ್ಯಾಟರ್ ಶ್ರೇಯಸ್ ಅಯ್ಯರ್ ಆಡುವ ನಿರೀಕ್ಷೆಯಿದೆ. ರಾಹುಲ್ ಕೂಡ ವಿಶ್ರಾಂತಿ ಪಡೆದಿದ್ದು, ರೋಹಿತ್ ಶರ್ಮಾ ಜೊತೆಗೆ ಸೂರ್ಯಕುಮಾರ್ ಯಾದವ್ ಅಥವಾ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ತಂಡದಲ್ಲಿ ಯಾವುದೇ ಎರಡನೇ ಮೀಸಲು ಬ್ಯಾಟರ್ ಇಲ್ಲದ ಕಾರಣ, ಶಹಬಾಜ್ ಅಹ್ಮದ್ ಅಥವಾ ಮೊಹಮ್ಮದ್ ಸಿರಾಜ್ ಅಥವಾ ಉಮೇಶ್ ಯಾದವ್ ಅವರಲ್ಲಿ ಒಬ್ಬರು ತಂಡದಲ್ಲಿ ಸ್ಥಾನ ಪಡೆಯಬಹುದು.

12 ತಿಂಗಳ ಹಿಂದೆ ಟಿ20 ವಿಶ್ವಕಪ್‌ನಿಂದ ಭಾರತ ತಂಡ ಆರಂಭಿಕ ನಿರ್ಗಮನದಿಂದ, ಭಾರತೀಯ ಬ್ಯಾಟಿಂಗ್ ಬಹಳ ದೂರ ಸಾಗಿದೆ ಮತ್ತು ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ಮುಂದಿನ ಆವೃತ್ತಿಯ ಮುಂದೆ ಅಸಾಧಾರಣವಾಗಿ ಕಾಣುತ್ತದೆ. ಯುಎಇ ಆವೃತ್ತಿಯಿಂದ ಹೆಚ್ಚಿನ ಬ್ಯಾಟರ್‌ಗಳು ಒಂದೇ ಆಗಿರುತ್ತವೆ. ಆದರೆ ತನ್ನ ಬ್ಯಾಟಿಂಗ್ ವಿಧಾನದಲ್ಲಿ ತೀವ್ರ ಬದಲಾವಣೆಯಾಗಿದೆ.

ಪಂದ್ಯದ ವಿವರಗಳು

ಪಂದ್ಯದ ವಿವರಗಳು

ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ ಅಕ್ಟೋಬರ್ 4 ಮಂಗಳವಾರ ನಡೆಯಲಿದೆ.

ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ ಇಂದೋರ್‌ನಲ್ಲಿ ನಡೆಯಲಿದೆ.

ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 630 IST ಕ್ಕೆ ನಡೆಯಲಿದೆ.

ಭಾರತದಲ್ಲಿ ಟಿವಿಯಲ್ಲಿ ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯವನ್ನು ನೀವು ಎಲ್ಲಿ ವೀಕ್ಷಿಸಬಹುದು?
ಭಾರತ vs ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ ಮತ್ತು ಲೈವ್ ಸ್ಟ್ರೀಮಿಂಗ್ ಡಿಸ್ನಿ+ ಹಾಟ್‌ಸ್ಟಾರ್ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.

ಭಾರತ vs ದಕ್ಷಿಣ ಆಫ್ರಿಕಾ ಸಂಭಾವ್ಯ ಆಡುವ 11ರ ಬಳಗ

ಭಾರತ vs ದಕ್ಷಿಣ ಆಫ್ರಿಕಾ ಸಂಭಾವ್ಯ ಆಡುವ 11ರ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಯುಜ್ವೇಂದ್ರ ಚಾಹಲ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್

ದಕ್ಷಿಣ ಆಫ್ರಿಕಾ: ಡೇವಿಡ್ ಮಿಲ್ಲರ್, ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್, ವೇಯ್ನ್ ಪಾರ್ನೆಲ್, ಕ್ವಿಂಟನ್ ಡಿ ಕಾಕ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ಕೇಶವ್ ಮಹಾರಾಜ್

Story first published: Tuesday, October 4, 2022, 12:34 [IST]
Other articles published on Oct 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X