ಭಾರತ vs ದ. ಆಫ್ರಿಕಾ: 3ನೇ ಟಿ20 ಪಂದ್ಯದಲ್ಲಿ ಯಾರಿಗೆ ಅವಕಾಶ? ಯಾರಿಗೆ ವಿಶ್ರಾಂತಿ? ಪಿಚ್ ರಿಪೋರ್ಟ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡು ಪಂದ್ಯಗಳು ಅಂತ್ಯವಾಗಿದ್ದು ಎರಡರಲ್ಲಿಯೂ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಕುಡ ತನ್ನ ವಶಕ್ಕೆ ಪಡೆದುಕೊಂಡಂತಾಗಿದೆ. ಈ ಮೂಲಕ ಈ ವರ್ಷ ಭಾರತದ ಟಿ20 ಸರಣಿ ಗೆಲುವಿನ ಓಟ ಮತ್ತಷ್ಟು ಮುಂದುವರಿದಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಪಂದ್ಯದಲ್ಲಿಯೂ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗದಿಂದ ತೃಪ್ತಿಕರ ಪ್ರದರ್ಶನ ಬಂದಿರುವುದು ಸಮಾಧಾನ ಮೂಡಿಸಿದೆ. ಆದರೆ ಬೌಲಿಂಗ್ ವಿಭಾಗದ ಅಸ್ಥಿರ ಪ್ರದರ್ಶನ ಕಳವಳ ಮೂಡಿಸಿದ್ದರೂ ತಪ್ಪನ್ನು ತಿದ್ದಿಕೊಳ್ಳುವ ವಿಶ್ವಾಸದೊಂದಿಗೆ ಇಂದೋರ್‌ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಇನ್ನು ಈಗಾಗಲೇ ಸರಣಿ ಗೆಲುವು ಸಾಧಿಸಿರುವ ಕಾರಣ ಅಂತಿಮ ಪಂದ್ಯದಲ್ಲಿ ಕೆಲ ಬದಲಾವಣೆಗಳು ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.

ಪಿಚ್ ರಿಪೋರ್ಟ್
ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯಕ್ಕೆ ಆತಿಥ್ಯ ವಹಿಸಿಕೊಳ್ಳಲಿದೆ. ಇದರ ಪಿಚ್ ಗಟ್ಟಿಯಾಗಿದ್ದು ಬೌನ್ಸಿಯಾಗಿದ್ದರೂ ಬ್ಯಾಟರ್‌ಗಳಿಗೆ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಪೂರಕವಾಗಿರುತ್ತದೆ. ಇನ್ನು ಈ ಕ್ರೀಡಾಂಗಣದ ಬೌಂಡರಿ ಕೂಡ ಸನಿಹದಲ್ಲಿರುವ ಕಾರಣ ಬೌಲರ್‌ಗಳಿಗೆ ದೊಡ್ಡ ಸವಾಲಾಗಿರುತ್ತದೆ. ಈ ಹಿಂದೆ ಇಲ್ಲಿ ಆಯೋಜನೆಯಾಗಿರುವ ಪಂದ್ಯಗಳಲ್ಲಿ ದೊಡ್ಡ ಮೊತ್ತದ ರನ್ ಹರಿದು ಬಂದಿತ್ತು. ಮಂಗಳವಾರ ನಡೆಯಲಿರುವ ಪಂದ್ಯ ಕೂಡ ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆಯಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ ಸಂಭಾವ್ಯ XI: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್
ದಕ್ಷಿಣ ಆಫ್ರಿಕಾ ಸಂಭಾವ್ಯ XI: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ

ಸಂಪೂರ್ಣ ಸ್ಕ್ವಾಡ್ ಹೀಗಿದೆ
ಟೀಮ್ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೋಸ್ಸೌ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಡ್ವೈನ್ ಪ್ರಿಟೋರಿಯಸ್, ತಬ್ರೈಜ್ ಶಮ್ಸಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications