ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind Vs SA T20: ಸರಣಿಯ ಅಂತಿಮ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ, ಸರಣಿ ಗೆದ್ದ ಟೀಂ ಇಂಡಿಯಾ

Ind vs SA 3rd t20 : South Africa Won By 49 Runs, Team India Won The Series By 2-1

ಇಂದೋರ್‌ನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 49 ರನ್‌ಗಳ ಜಯ ಸಾಧಿಸಿದೆ. ಕೊನೆಯ ಪಂದ್ಯದಲ್ಲಿ ಸೋತರೂ ಟೀಂ ಇಂಡಿಯಾ 2-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ.

ದಕ್ಷಿಣ ಆಫ್ರಿಕಾ ನೀಡಿದ 228 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ 18.3 ಓವರ್ ಗಳಲ್ಲಿ 178 ರನ್‌ಗಳಿಗೆ ಆಲೌಟ್ ಆಗುವ ಮೂಲಕ 49 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು ಆದರೆ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಸಣ್ಣ ಮೈದಾನದಲ್ಲಿ ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

Ind Vs SA T20: ಕ್ರೀಸ್‌ನಲ್ಲೇ ಇರು ಎಂದು ಟ್ರಿಸ್ಟಾನ್ ಸ್ಟಬ್ಸ್‌ಗೆ ವಾರ್ನ್‌ ಮಾಡಿದ ದೀಪಕ್ ಚಾಹರ್Ind Vs SA T20: ಕ್ರೀಸ್‌ನಲ್ಲೇ ಇರು ಎಂದು ಟ್ರಿಸ್ಟಾನ್ ಸ್ಟಬ್ಸ್‌ಗೆ ವಾರ್ನ್‌ ಮಾಡಿದ ದೀಪಕ್ ಚಾಹರ್

ನಾಯಕ ಟೆಂಬಾ ಬವುಮಾ ಮತ್ತೊಮ್ಮೆ ವೈಫಲ್ಯ ಅನುಭವಿಸಿದರು ಕೂಡ ತಂಡಕ್ಕೆ ಆಘಾತವುಂಟಾಗದಂತೆ ನೋಡಿಕೊಂಡಿದ್ದು ಕ್ವಿಂಟನ್ ಡಿಕಾಕ್. ರೊಸ್ಸೊ ಅವರೊಂದಿಗೆ ಎರಡನೇ ವಿಕೆಟ್‌ಗೆ 90 ರನ್‌ಗಳ ಜೊತೆಯಾಟ ಆಡಿದ ಡಿ ಕಾಕ್ 43 ಎಸೆತಗಳಲ್ಲಿ 68 ರನ್‌ಗಳಿಸಿ ರನೌಟ್ ಮೂಲಕ ವಿಕೆಟ್ ಕಳೆದುಕೊಂಡರು.

ಬಳಿಕ ಟ್ರಿಸ್ಟನ್ ಸ್ಟಬ್ಸ್ ಜೊತೆಗೆ ಮತ್ತೊಂದು ಅಮೋಘ ಜೊತೆಯಾಟವನ್ನು ನೀಡಿದರು ರೊಸ್ಸೋ. ಸ್ಪೋಟಕವಾಗಿ ಬ್ಯಾಟಿಂಗ್ ನಡೆಸಿದ ಅವರು ಕೇವಲ 48 ಎಸೆತಗಳಲ್ಲಿ 100 ರನ್‌ಗಳನ್ನು ಗಳಿಸಿ ಭರ್ಜರಿ ಶತಕವನ್ನು ದಾಖಲಿಸಿದರು.

228ರನ್‌ಗಳ ಗುರಿ ನೀಡಿದ ದ. ಆಫ್ರಿಕಾ

228ರನ್‌ಗಳ ಗುರಿ ನೀಡಿದ ದ. ಆಫ್ರಿಕಾ

ಕ್ವಿಂಟನ್ ಡಿ ಕಾಕ್ 43 ಎಸೆತಗಳಲ್ಲಿ 68 ರನ್ ಗಳಿಸಿ ಮಿಂಚಿದರೆ, ರಿಲೀ ರೊಸೊವ್ ಭರ್ಜರಿ ಶತಕ ಗಳಿಸಿ ಮಿಂಚಿದರು. 48 ಎಸೆತಗಳಲ್ಲಿ 7 ಬೌಂಡರಿ 8 ಸಿಕ್ಸರ್ ಸಹಿತ ಅಜೇಯ 100 ರನ್ ಗಳಿಸಿದರು. 5 ಬಾಲ್‌ಗಳಲ್ಲಿ ಡೇವಿಡ್ ಮಿಲ್ಲರ್ 19 ರನ್ ಗಳಿಸಿದ್ದರಿಂದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 227 ರನ್ ಗಳಿಸಿತು.

ಅರ್ಶ್‌ದೀಪ್ ಸಿಂಗ್ ಬೆನ್ನು ನೋವಿನ ಸಮಸ್ಯೆಯಿಂದ ಆಡದೇ ಇದ್ದದ್ದು ಭಾರತಕ್ಕೆ ದುಬಾರಿಯಾಯಿತು. ಅಶ್ವಿನ್ ಹೊರತು ಪಡಿಸಿ ಉಳಿದ ಎಲ್ಲಾ ಬೌಲರ್ ಗಳು ಭಾರಿ ರನ್‌ಗಳನ್ನು ಬಿಟ್ಟುಕೊಟ್ಟರು.

ಮಹಿಳಾ ಏಷ್ಯಾ ಕಪ್ 2022: ಯುಎಇ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ: ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಶೂನ್ಯಕ್ಕೆ ಪೆವಿಲಿಯನ್ ಸೇರಿದ ನಾಯಕ

ಶೂನ್ಯಕ್ಕೆ ಪೆವಿಲಿಯನ್ ಸೇರಿದ ನಾಯಕ

228 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ರೋಹಿತ್ ಶರ್ಮಾ ಎರಡು ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು.

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದಲ್ಲಿ ಅವಕಾಶ ಪಡೆದ ಶ್ರೇಯಸ್ ಅಯ್ಯರ್ ಕೂಡ 1 ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ ರಿಷಬ್ ಪಂತ್ 14 ಎಸೆತಗಳಲ್ಲಿ 27 ರನ್ ಗಳಿಸಿ ಬೇಗನೆ ವಿಕೆಟ್ ಒಪ್ಪಿಸಿದರು.

ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದು ಮಿಂಚಿದ ಡಿಕೆ

ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದು ಮಿಂಚಿದ ಡಿಕೆ

ಶ್ರೇಯಸ್ ಅಯ್ಯರ್ ಔಟ್ ಆಗುತ್ತಿದ್ದಂತೆ ನಾಲ್ಕನೇ ಕ್ರಮಾಂಕದಲ್ಲಿ ಅಚ್ಚರಿ ಎಂಬಂತೆ ಬ್ಯಾಟಿಂಗ್ ಮಾಡಲು ಬಂದ ದಿನೇಶ್ ಕಾರ್ತಿಕ್ ಅಬ್ಬರಿಸಿದರು. ಮೊದಲನೇ ಎಸೆತವನ್ನೇ ಬೌಂಡರಿ ಗಳಿಸುವ ಮೂಲಕ ಭರ್ಜರಿ ಆರಂಭ ಪಡೆದರು.

21 ಎಸೆತಗಳಲ್ಲಿ 4 ಬೌಂಡರಿ 4 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ 46 ಕಲೆ ಹಾಕಿದ ದಿನೇಶ್ ಕಾರ್ತಿಕ್ ಕೇಶವ್ ಮಹಾರಾಜ್ ಬೌಲಿಂಗ್‌ನಲ್ಲಿ ಸ್ವಿಚ್ ಹಿಟ್ ಹೊಡೆಯಲು ಹೋಗಿ ಬೌಲ್ಡ್ ಆದರು. ತಾವು ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧ ಎಂದು ಅವರು ಸಾಬೀತು ಪಡಿಸಿದರು.

ಎರಡೂ ತಂಡಗಳ ಆಡುವ ಬಳಗ

ಎರಡೂ ತಂಡಗಳ ಆಡುವ ಬಳಗ

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರಿಲೇ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ

ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

Story first published: Tuesday, October 4, 2022, 22:59 [IST]
Other articles published on Oct 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X