IND vs SA: ತೃತೀಯ ಟಿ20 ಪಂದ್ಯ ಗೆಲ್ಲಲು ನಿಮ್ಮ ಡ್ರೀಮ್ ತಂಡ ಹೀಗಿರಬೇಕು; ಈತನಿಗೆ ನಾಯಕತ್ವ ನೀಡಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯ ನಾಳೆ ( ಜೂನ್ 14 )ವಿಶಾಖಪಟ್ಟಣದ ಡಾ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೀಮ್ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.
ಹೌದು, ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ಸೆಣಸಾಟ ನಡೆಸುತ್ತಿದ್ದು, ಈಗಾಗಲೇ ಇತ್ತಂಡಗಳ ನಡುವೆ ಮೊದಲ 2 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ದಕ್ಷಿಣ ಆಫ್ರಿಕಾ ದೆಹಲಿಯಲ್ಲಿ ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯ ಹಾಗೂ ಕಟಕ್ ನಗರದಲ್ಲಿ ನಡೆದ ಎರಡನೇ ಟಿ ಟ್ವೆಂಟಿ ಪಂದ್ಯ ಎರಡರಲ್ಲಿಯೂ ಜಯ ಸಾಧಿಸಿದ್ದು, ಸರಣಿಯಲ್ಲಿ 2 - 0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ಸರಣಿಯನ್ನು ಕೈವಶಪಡಿಸಿಕೊಳ್ಳಬೇಕೆಂದರೆ ಉಳಿದ ಯಾವುದಾದರೊಂದು ಪಂದ್ಯದಲ್ಲಿ ಗೆದ್ದರೂ ಸಾಕಾಗಿದ್ದು, ಟೀಮ್ ಇಂಡಿಯಾ ಸರಣಿ ಗೆಲ್ಲಬೇಕೆಂದರೆ ಉಳಿದ ಎಲ್ಲಾ ಪಂದ್ಯಗಳನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ.
ಹೀಗಾಗಿ ನಾಳೆ ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯ ರಿಷಭ್ ಪಂತ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದ್ದು, ಈ ಪಂದ್ಯದಲ್ಲಿ ಯಾವ ತಂಡ ಜಯ ಸಾಧಿಸಲಿದೆ ಎಂಬುದನ್ನು ಊಹಿಸುವಲ್ಲಿ ಕೆಲ ಕ್ರಿಕೆಟ್ ಪ್ರೇಮಿಗಳು ನಿರತರಾಗಿದ್ದರೆ, ಇನ್ನೂ ಕೆಲ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ತಮ್ಮದೇ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಹೀಗೆ ಫ್ಯಾಂಟಸಿ ಕ್ರಿಕೆಟ್ ಆಟಕ್ಕಾಗಿ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡ ಸಲಹೆಗಳಂತೆ ತಂಡಗಳನ್ನು ರಚಿಸಿದರೆ ಉತ್ತಮ ಫ್ಯಾಂಟಸಿ ಅಂಕಗಳನ್ನು ಹೊಂದಬಹುದಾಗಿದೆ.

ಡ್ರೀಮ್ ಟೀಮ್ 1
ಇಶಾನ್ ಕಿಶನ್, ಹೆನ್ರಿಚ್ ಕ್ಲಾಸೆನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೇಯ್ನ್ ಪಾರ್ನೆಲ್, ಭುವನೇಶ್ವರ್ ಕುಮಾರ್, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ಅವೇಶ್ ಖಾನ್.
ನಾಯಕ: ಭುವನೇಶ್ವರ್ ಕುಮಾರ್ ಉಪನಾಯಕ: ಹೆನ್ರಿಚ್ ಕ್ಲಾಸೆನ್

ಡ್ರೀಮ್ ಟೀಮ್ 2
ಇಶಾನ್ ಕಿಶನ್, ತೆಂಬಾ ಬವುಮಾ, ರಿಷಬ್ ಪಂತ್, ಹೆನ್ರಿಚ್ ಕ್ಲಾಸೆನ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ದಿನೇಶ್ ಕಾರ್ತಿಕ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಭುವನೇಶ್ವರ್ ಕುಮಾರ್.
ನಾಯಕ: ಡೇವಿಡ್ ಮಿಲ್ಲರ್ ಉಪನಾಯಕ: ದಿನೇಶ್ ಕಾರ್ತಿಕ್

ಸಂಭಾವ್ಯ ಆಡುವ ಬಳಗಗಳು
ಭಾರತ: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್
ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ (ನಾಯಕ), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ತಬ್ರೈಜ್ ಶಮ್ಸಿ, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications