
ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ನಾಯಕ ವಿರಾಟ್ ಕೊಹ್ಲಿ ಹೊರತುಪಡಿಸಿ ಉಳಿದ ಎಲ್ಲಾ ಆಟಗಾರರು ಕೂಡ ನೀರಸ ಪ್ರದರ್ಶನ ನೀಡಿದ್ದಾರೆ. ಕೊಹ್ಲಿ ಹೊರತುಪಡಿಸಿದರೆ ಅನುಭವಿ ಚೇತೇಶ್ವರ್ ಪೂಜಾರ 43 ರನ್‌ಗಳಗ ಕೊಡುಗೆ ನೀಡಿದ್ದಾರೆ. ಉಳಿದಂತೆ ಭಾರತೀಯ ತಂಡದ ಯಾವ ಬ್ಯಾಟರ್‌ಗಳಿಂದಲೂ ಉಪಯುಕ್ತ ಪ್ರದರ್ಶನ ಬರಲಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಭಾರತ ಕೇವಲ 223 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಗಿದೆ.
ಟಾಸ್ ಗೆದ್ದ ಭಾರತ, ಉತ್ತಮ ಆರಂಭ ಪಡೆಯಲು ವಿಫಲ: ಭಾರತ ಈ ಪಂದ್ಯದಲ್ಲಿಯೂ ಟಾಸ್ ಗೆಲ್ಲುವಲ್ಲಿ ಸಫಲವಾಗಿತ್ತು. ಹೀಗಾಗಿ ಟೀಮ್ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಮ್ ಇಂಡಿಯಾ ಆರಂಭಿಕ ಜೋಡಿಯಾದ ಮಯಾಂಕ್ ಅಗರ್ವಾಲ್ ಹಾಗೂ ಕೆಎಲ್ ರಾಹುಲ್ ಆತ್ಮವಿಶ್ವಾಸದಿಂದ ಇನ್ನಿಂಗ್ಸ್ ಆರಂಭಿಸಿದರೂ ದೊಡ್ಡ ಜೊತೆಯಾಟವನ್ನು ನೀಡಲು ವಿಫಲವಾದರು. ಉಪ ನಾಯಕ ಕೆಎಲ್ ರಾಹುಲ್ 12 ರನ್‌ಗಳಿಸಿ ಔಟಾಗಿ ಫೆವಿಲಿಯನ್ ಸೇರಿದರೆ ಮಯಾಂಕ್ ಅಗರ್ವಾಲ್ 15 ರನ್‌ಗಳಿಗೆ ಆಟ ಮುಗಿಸಿದರು.
ಸಾಥ್ ನೀಡಿದ ಪೂಜಾರ ರಹಾನೆ ಮತ್ತೊಂದು ಫ್ಲಾಪ್ ಶೋ: ಇನ್ನು ಈ ಪಂದ್ಯದಲ್ಲಿ ಅನುಭವಿ ಚೇತೇಶ್ವರ್ ಪೂಜಾರ 43 ರನ್‌ಗಳ ಕೊಡುಗೆ ನೀಡಿ ನಾಯಕ ವಿರಾಟ್ ಕೊಹ್ಲಿ ಜೊತೆಗೆ ಅರ್ಧ ಶತಕದ ಜೊತೆಯಾಟ ನೀಡಿದ್ದಾರೆ. ಆದರೆ ನಂತರ ಬಂದ ಅನುಭವಿ ಅಜಿಂಕ್ಯಾ ರಹಾನೆ ಮತ್ತೊಂದು ನೀರಸ ಬ್ಯಾಟಿಂಗ್ ಪ್ರದರ್ಶನ ನಿಡಿ ಫೆವಿಲಿಯನ್ ಸೇರಿಕೊಂಡರು. ರಹಾನೆ ಈ ಪಂದ್ಯದಲ್ಲಿ ಕೇವಲ 9 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡರು.
ಕೈಕೊಟ್ಟ ಪಂತ್, ಸಾಥ್ ನೀಡದ ಅಶ್ವಿನ್, ಠಾಕೂರ್: ಇನ್ನು ಟೀಮ್ ಇಂಡಿಯಾದ ಕೆಳ ಕ್ರಮಾಂಕ ಕೂಡ ಈ ಪಂದ್ಯದಲ್ಲಿ ವೈಫಲ್ಯವನ್ನು ಅನುಭವಿಸಿತು. ರಿಷಭ್ ಪಂತ್ ನಾಯಲ ವಿರಾಟ್ ಕೊಹ್ಲಿಗೆ ಕೆಲ ಕಾಲ ಸಾರ್ತ ನೀಡಿದರೂ ದೊಡ್ಡ ಮೊತ್ತ ಗಳಿಸಲು ವಿಫಲವಾಗಿ ಫೆವಿಲಿಯನ್ ಸೇರಿಕೊಂಡರು. ಪಂತ್ ಗಳಿಸಿದ್ದ 27 ರನ್. ನಂತರ ಬಂದ ಆರ್ ಅಶ್ವಿನ್ ಹಾಗೂ ಶಾರ್ದೂಲ್ ಠಾಕೂರ್ ಕೂಡ ನಿರೀಕ್ಷಿತ ಪ್ರದರ್ಶನ ನಿಡಲು ಸಾಧ್ಯವಾಗಲಿಲ್ಲ.
ಕೊಹ್ಲಿ ಅಭಿಮಾನಿಗಳ ಕನಸು ಮತ್ತೊಮ್ಮೆ ಭಗ್ನ: ಇನ್ನು ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ಶತಕವನ್ನು ಗಳಿಸಲು ವಿಫಲವಾಗುತ್ತಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕಗಳಿಸುವ ಮತ್ತೊಂದು ಅವಕಾಶವನ್ನು ಹೊಂದಿದ್ದರು. ಆದರೆ 79 ರನ್‌ಗಳಿಸಿದ್ದ ವೇಲೆ ಕೊಹ್ಲಿ ವಿಕೆಟ್ ಕಳೆದುಕೊಳ್ಳುವ ಮೂಲಕ ಈ ಅವಕಾಶವನ್ನು ಮತ್ತೊಮ್ಮೆ ಕಳೆದುಕೊಂಡಿದ್ದಾರೆ. ಆರಂಭದಿಂದಲೇ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವೇಗಿಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಆದರೆ ಮೂರಂಕಿ ತಲುಪಲು ಕೊಹ್ಲಿ ಮತ್ತೊಮ್ಮೆ ವಿಫಲವಾಗಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅಬಿಮಾನಿಗಳು ನಿರಾಸೆ ಅನುಭವಿಸಿದರು.
ಇನ್ನು ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಪ್ರಮುಖ ವೇಗಿ ಕಗಿಸೋ ರಬಾಡ ನಾಲ್ಕು ವಿಕೆಟ್ ಕಬಳಿಸಿ ಮಿಂಚಿದರು. ಅಲ್ಲದೆ ಮ್ಯಾಕ್ರೋ ಜಾನ್ಸನ್ ಕೂಡ ಮೂರು ವಿಕೆಟ್ ಸಂಪಾದಿಸಿದ್ದಾರೆ. ಒಲಿವಿಯರ್, ಲುಂಗಿ ಎನ್‌ಗಿಡಿ ಹಾಗೂ ಕೇಶವ್ ಮಹಾರಾಜ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಸಫಲವಾದರು.
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ
ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂದಾ ಮಗಾಲಾ, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್
ಭಾರತ ಆಡುವ ಬಳಗ: ಆಡುತ್ತಿರುವವರು: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ಬೆಂಚ್ ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಮೊಹಮ್ಮದ್ ಸಿರಾಜ್, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ