ಪಂತ್ ಅಬ್ಬರದ ಹೊರತಾಗಿಯೂ ಸೋಲಿನತ್ತ ಮುಖ ಮಾಡಿದ ಭಾರತ: 4ನೇ ದಿನ ನಡೆಯುತ್ತಾ ಪವಾಡ!

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಿಡಿತವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವನ್ನು 200 ರನ್‌ಗಳಿಗೆ ಮುನ್ನವೇ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದು ಸಾಧಾರಣ ಗುರಿಯನ್ನು ಪಡೆದುಕೊಂಡಿದೆ. ಇದನ್ನು ದಿಟ್ಟವಾಗಿ ಬೆನ್ನಟ್ಟುವತ್ತ ಹೆಜ್ಜೆ ಹಾಕಿರುವ ಡೀನ್ ಎಲ್ಗರ್ ಪಡೆ ಗೆಲುವಿನ ಕನಸು ಕಾಣುತ್ತಿದೆ.

ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್‌ಗಳಿಗೆ ಟೀಮ್ ಇಂಡಿಯಾ ಆಲೌಟ್ ಆಗಿದ್ದರೂ ದಕ್ಷಿಣ ಆಪ್ರಿಕಾ ತಂಡವನ್ನು ಭಾರತ 210 ರನ್‌ಗಳಿಗೆ ಆಲೌಟ್ ಮಾಡಿತ್ತು. ಹೀಗಾಗಿ ಟೀಮ್ ಇಮಡಿಯಾ ಈ ಪಂದ್ಯದಲ್ಲಿ 13 ರನ್‌ಗಳ ಅಲ್ಪ ಮುನ್ನಡೆಯನ್ನು ಸಾಧಿಸಿತ್ತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಟೀಮ್ ಇಂಡಿಯಾದ ದಾಂಡಿಗರು ಮೊದಲ ಇನ್ನಿಂಗ್ಸ್‌ನಲ್ಲಿ ಮಾಡಿದ ತಪ್ಪನ್ನೇ ಮುಂದುವರಿಸಿದ್ದರು. ಹೀಗಾಗಿ ಅಂದುಕೊಂಡಿದ್ದ ಗುರಿಯನ್ನು ನಿಗದಿಪಡಿಸಲು ಭಾರತ ತಂಡಕ್ಕೆ ಸಾಧ್ಯವಾಗಿಲ್ಲ.

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ IPL 15ನೇ ಸೀಸನ್‌? ಪ್ಲ್ಯಾನ್ ಬಿ ರೆಡಿ ಮಾಡಿಕೊಂಡಿರುವ BCCIದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ IPL 15ನೇ ಸೀಸನ್‌? ಪ್ಲ್ಯಾನ್ ಬಿ ರೆಡಿ ಮಾಡಿಕೊಂಡಿರುವ BCCI

ಹಾಗಾದರೆ ಮೂರನೇ ದಿನ ಭಾರತದ ಪ್ರದರ್ಶನ ಹೇಗಿತ್ತು? ಇಲ್ಲಿದೆ ಹೈಲೈಟ್ಸ್

ಮತ್ತೆ ವಿಫಲವಾದ ಅನುಭವಿ ಜೋಡಿ

ಮತ್ತೆ ವಿಫಲವಾದ ಅನುಭವಿ ಜೋಡಿ

ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನ ಮೊದಲ ಎರಡು ವಿಕೆಟ್‌ಗಳನ್ನು ಎರಡನೇ ದಿನದಾಟದಲ್ಲಿಯೇ ಕಳೆದುಕೊಂಡಿತ್ತು. ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರ ಮೂರನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದರು. ಆದರೆ ಚೇತೇಶ್ವರ್ ಪೂಜಾರ ಮೂರನೇ ದಿನದಾಟ ಆರಂಭವಾದ ಕೆಲ ನಿಮಿಷಗಳಲ್ಲಿಯೇ ವಿಕೆಟ್ ಕಳೆದುಕೊಂಡು ಫೆವಿಲಿಯನ್ ಸೇರಿದರು. ನಂತರ ಬಂದ ಅಜಿಂಕ್ಯಾ ರಹಾನೆ ಕೂಡ ಕಳಪೆ ಆಟವನ್ನು ಮುಂದುವರಿಸಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಈ ಮೂಲಕ ಭಾರತದ ಅನುಭವಿ ಆಟಗಾರರಿಬ್ಬರಿಂದಲೂ ಮತ್ತೊಂದು ಹೀನಾಯ ಪ್ರದರ್ಶನ ಬಂದಿತ್ತು.

ಆಸರೆಯಾದ ಪಂತ್ ಕೊಹ್ಲಿ

ಆಸರೆಯಾದ ಪಂತ್ ಕೊಹ್ಲಿ

ಟೀಮ್ ಇಂಡಿಯಾ ಪೂಜಾರ ಹಾಗೂ ರಹಾನೆ ವಿಕೆಟ್ ಕಳೆದುಕೊಂಡ ಬಳಿಕ ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಉತ್ತಮ ಜೊತೆಯಾಟವನ್ನು ನೀಡಿದರು. ಈ ಜೋಡಿ ಭಾರತ ತಂಡದ ಕುಸಿತವನ್ನು ಒಂದು ಹಂತಕ್ಕೆ ತಡೆಯುವಲ್ಲಿ ಯಶಸ್ವಿಯಾಗಿದ್ದು ಮಾತ್ರವಲ್ಲದೆ ತಂಡದ ರನ್ ಹೆಚ್ಚಳಕ್ಕೂ ಕಾರಣವಾದರು. ರಿಷಭ್ ಪಂತ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಭರ್ಜರಿ 94 ರನ್‌ಗಳ ಜೊತೆಯಾಟವನ್ನು ನೀಡುವ ಮೂಲಕ ಭಾರತ ತಂಡಕ್ಕೆ ಆಸರೆಯಾದರು. ಅತ್ಯಂತ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 143 ಎಸೆತ ಎದುರಿಸಿ 29 ರನ್‌ಗಳಿಸಿ ವಿಕೆಟ್ ಕಳೆದುಕೊಳ್ಳುವ ಮೂಲಕ ಈ ಜೋಡಿ ಬೇರ್ಪಟ್ಟಿತು.

ಭರ್ಜರಿ ಶತಕ ಸಿಡಿಸಿದ ರಿಷಬ್ ಪಂತ್

ಭರ್ಜರಿ ಶತಕ ಸಿಡಿಸಿದ ರಿಷಬ್ ಪಂತ್

ಇನ್ನು ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡ ಬಳಿಕ ಟೀಮ್ ಇಮಡಿಯಾ ಮತ್ತೊಮ್ಮೆ ಕುಸಿತವನ್ನು ಕಾಣುತ್ತಾ ಸಾಗಿತು. ಆದರೆ ಮತ್ತೊಂದು ತುದಿಯಲ್ಲಿದ್ದ ರಿಷಭ್ ಪಂತ್ ತಮ್ಮ ಹೋರಾಟವನ್ನು ಮುಂದುವರಿಸಿದ್ದರು. ಅಂತಿಮ ವಿಕೆಟ್ ರೂಪದಲ್ಲಿ ಬೂಮ್ರಾ ಕ್ರೀಸ್‌ನಲ್ಲಿದ್ದಾಗ ಪಂತ್ ತಮ್ಮ ಶತಕವನ್ನು ಪೂರೈಸುವಲ್ಲಿ ಯಶಸ್ವಿಯಾದರು. ಈ ಮೂಲಕ ಭಾರತ ತಂಡ 200ರ ಸನಿಹಕ್ಕೆ ತಲುಪಿತ್ತು. ಆದರೆ ಪಂತ್ ಶತಕದ ಬಳಿಕ ಬೂಮ್ರಾ ಕೂಡ ವಿಕೆಟ್ ಕಳೆದುಕೊಳ್ಳುವ ಮೂಲಕ ಭಾರತ 198 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 212 ರನ್‌ಗಳಿಸುವ ಸವಾಲು ಪಡೆದುಕೊಂಡಿದೆ.

ಗುರಿ ಬೆನ್ನಟ್ಟಲು ಆರಂಭಿಸಿದ ದ. ಆಫ್ರಿಕಾ

ಗುರಿ ಬೆನ್ನಟ್ಟಲು ಆರಂಭಿಸಿದ ದ. ಆಫ್ರಿಕಾ

ಇನ್ನು ಭಾರತ ತಂಡ ನೀಡಿದ 212 ರನ್‌ಗಳ ಗುರಿಯನ್ನು ಬೆನ್ನಟ್ಟಿರುವ ದಕ್ಷಿಣ ಆಪ್ರಿಕಾ ತಂಡ ಮೂರನೇ ದಿನದಂತ್ಯದಲ್ಲಿ ಗೆಲುವು ಕಾಣುವ ನಿರೀಕ್ಷೆಯೊಂದಿಗೆ ದಿನದಾಟ ಮುಕ್ತಾಯಗೊಳಿಸಿದೆ. 23 ರನ್‌ಗಳಿಗೆ ಮೊದಲ ವಿಕೆಟ್ ಕಲೆದುಕೊಂಡಿದ್ದರೂ ಎರಡನೇ ವಿಕೆಟ್‌ಗೆ ಜೊತೆಯಾದ ನಾಯಕ ಡೀನ್ ಎಲ್ಗರ್ ಹಾಗೂ ಕೀಗನ್ ಪೀಟರ್ಸನ್ ಭಾರತಕ್ಕೆ ಸವಾಲಾದರು. ಈ ಜೋಡಿ 78 ರನ್‌ಗಳ ಜೊತೆಯಾಟವನ್ನು ನೀಡುವ ಮೂಲಕ ಪಂದ್ಯದಲ್ಲಿ ಬಿಗಿ ಹಿಡಿತವನ್ನು ಸಾಧಿಸುವಲ್ಲಿ ಯಶ್ವಿಯಾಗಿದೆ. ಆದರೆ ದಿನದಾಟ ಅಂತ್ಯವಾಗುವ ವೇಳೆಗೆ ಭಾರತ ಡೀನ್ ಎಲ್ಗರ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು ತಂಡಕ್ಕೆ ಸಣ್ಣ ಸಮಾಧಾನ ತಂದಿದೆ. ಇದೀಗ ಟೀಮ್ ಇಂಡಿಯಾ ಅಭಿಮಾನಿಗಳು ನಾಲ್ಕನೇ ದಿನದಾಟದಲ್ಲಿ ಭಾರತೀಯ ಬೌಲರ್‌ಗಳಿಂದ ಪವಾಡವನ್ನು ನಿರೀಕ್ಷಿಸುತ್ತಿದ್ದಾರೆ.

ದಕ್ಷಿಣ ಆಪ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಾಕ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ
ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಸಿಸಂಡಾ ಮಗಾಲಾ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ಬೆಂಚ್: ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಹನುಮ ವಿಹಾರಿ,ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ

For Quick Alerts
ALLOW NOTIFICATIONS
For Daily Alerts
Story first published: Thursday, January 13, 2022, 22:16 [IST]
Other articles published on Jan 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X