For Quick Alerts
ALLOW NOTIFICATIONS  
For Daily Alerts
 

ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಟೆಸ್ಟ್‌: 2ನೇ ದಿನದಾಟದ ಆರಂಭದಲ್ಲೇ ದಕ್ಷಿಣ ಆಫ್ರಿಕಾ ವಿಕೆಟ್ ಪತನ LIVE SCORE

South africa

ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮೊದಲ ದಿನದಾಟದ ಮೇಲುಗೈ ಸಾಧಿಸಿದ್ದು, ಇಂದು ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ ಕಂಬ್ಯಾಕ್ ಮಾಡುವ ನಿರೀಕ್ಷೆ ಇಟ್ಟುಕೊಂಡಿದೆ.

ಮೊದಲ ದಿನದಾಟದಲ್ಲಿ ಟಾಸ್‌ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಭಾರತ ಸಿಕ್ಕ ಅವಕಾಶವನ್ನ ಕೈ ಚೆಲ್ಲಿತು. ಟೀಮ್ ಇಂಡಿಯಾ ಆರಂಭಿಕ ಜೋಡಿಯಾದ ಮಯಾಂಕ್ ಅಗರ್ವಾಲ್ ಹಾಗೂ ಕೆ.ಎಲ್ ರಾಹುಲ್ ಆತ್ಮವಿಶ್ವಾಸದಿಂದ ಇನ್ನಿಂಗ್ಸ್ ಆರಂಭಿಸಿದ್ರೂ ಕೂಡ ದೊಡ್ಡ ಜೊತೆಯಾಟವನ್ನು ನೀಡಲು ವಿಫಲವಾದರು. ಉಪ ನಾಯಕ ಕೆ.ಎಲ್ ರಾಹುಲ್ 12 ರನ್‌ಗಳಿಸಿ ಔಟಾಗಿ ಪೆವಿಲಿಯನ್ ಸೇರಿಕೊಂಡ್ರೆ, ಮಯಾಂಕ್ ಅಗರ್ವಾಲ್ 15 ರನ್‌ಗಳಿಗೆ ಆಟ ಮುಗಿಸಿದರು.

ಇನ್ನು ಈ ಪಂದ್ಯದಲ್ಲಿ ಅನುಭವಿ ಚೇತೇಶ್ವರ್ ಪೂಜಾರ 43 ರನ್‌ಗಳ ಕೊಡುಗೆ ನೀಡಿ ನಾಯಕ ವಿರಾಟ್ ಕೊಹ್ಲಿ ಜೊತೆಗೆ ಅರ್ಧ ಶತಕದ ಜೊತೆಯಾಟ ನೀಡಿದ್ದಾರೆ. ಆದರೆ ನಂತರ ಬಂದ ಅನುಭವಿ ಅಜಿಂಕ್ಯಾ ರಹಾನೆ ಮತ್ತೊಂದು ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿ 9 ರನ್‌ಗಳಿಗೆ ಔಟಾದ್ರು. ಆದ್ರೆ ಭಾರತ ಪರ ಒಂದೆಡೆ ವಿಕೆಟ್ ಉರುಳಿದ್ರೆ, ತನ್ನ ಮಾಸ್ಟರ್ ಕ್ಲಾಸ್ ಇನ್ನಿಂಗ್ಸ್‌ ಆಡಿದ ಕಿಂಗ್ಸ್ ಕೊಹ್ಲಿ ತಾಳ್ಮೆಯ 79 ರನ್ ಕಲೆಹಾಕಿದ್ರು.

ಕೊಹ್ಲಿ ಉತ್ತಮ ಸಾಥ್ ನೀಡುವಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್(27) ಮತ್ತೊಮ್ಮೆ ಎಡವಿದ್ದಾರೆ. ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಸಹ ಭಾರತದ ಸ್ಕೋರ್ ಹೆಚ್ಚಿಸುವಲ್ಲಿ ವಿಫಲಗೊಂಡ್ರು. ಅಶ್ವಿನ್ 2, ಶಾರ್ದೂಲ್ ಠಾಕೂರ್ 12, ಬುಮ್ರಾ 0, ಉಮೇಶ್ ಯಾದವ್ ಅಜೇಯ 4, ಶಮಿ 7 ರನ್‌ ಗಳಿಸಿದ್ರು. ಅಂತಿಮವಾಗಿ ಭಾರತ 223 ರನ್‌ಗಳಿಗೆ ಆಲೌಟ್ ಆಗಿದೆ.

ಇದಕ್ಕುತ್ತರಾಗಿ ಮೊದಲ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ ನಾಯಕ ಡೀನ್ ಎಲ್ಗರ್ ವಿಕೆಟ್ ಕಳೆದುಕೊಂಡು 17ರನ್ ಕಲೆಹಾಕಿತು. ಇದೀಗ ಎರಡನೇ ದಿನದಾಟದ ಆರಂಂಭದಲ್ಲೇ ಬುಮ್ರಾ ದಾಳಿಯಲ್ಲಿ ಮತ್ತೊಬ್ಬ ಓಪನರ್ ಏಡನ್ ಮಕ್ರಾಮ್ ವಿಕೆಟ್ ಕಳೆದುಕೊಂಡಿದೆ. ಪಂದ್ಯದ ಲೈವ್ ಸ್ಕೋರ್ ಈ ಕೆಳಗಿದೆ.

1
51801

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ
ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂದಾ ಮಗಾಲಾ, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಭಾರತ ಪ್ಲೇಯಿಂಗ್ 11: ಆಡುತ್ತಿರುವವರು: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ಬೆಂಚ್: ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಮೊಹಮ್ಮದ್ ಸಿರಾಜ್, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ

Virat Kohli ಶ್ರೇಷ್ಠ ಆಟಗಾರ ಆಗಿದ್ದರೂ ಈ ವಿಚಾರದಲ್ಲಿ ಹಿಂದೆ | Oneindia Kannada

Story first published: Wednesday, January 12, 2022, 14:35 [IST]
Other articles published on Jan 12, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+