Ind vs SA 3rd Test: ದಕ್ಷಿಣ ಆಫ್ರಿಕಾ ಗೆಲುವಿಗೆ 111ರನ್, ಭಾರತಕ್ಕೆ ಬೇಕು 8 ವಿಕೆಟ್ LIVE SCORE

ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯ ಕುತೂಹಲ ಘಟ್ಟಕ್ಕೆ ಬಂದು ತಲುಪಿದ್ದು, ನಾಲ್ಕನೇ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ ಇನ್ನು 111 ರನ್‌ಗಳು ಬಾಕಿ ಉಳಿದಿವೆ. ಅದೇ ಭಾರತದ ಗೆಲುವಿಗೆ 8 ವಿಕೆಟ್‌ಗಳ ಅವಶ್ಯಕತೆಯಿದ್ದು, ಪಂದ್ಯ ಜಯಿಸಿದ ತಂಡ ಮೂರು ಪಂದ್ಯಗಳ ಸರಣಿಯನ್ನ ಗೆದ್ದು ಬೀಗಲಿದೆ.

ಸದ್ಯ ಕ್ರೀಸ್‌ನಲ್ಲಿ ಉತ್ತಮ ಆಟವಾಡಿದ್ದ ಕೀಗನ್ ಪೀಟರ್ಸನ್ ಅಜೇಯ 48 ರನ್‌ಗಳಿಸಿ ನಾಲ್ಕನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದು, ರಾಸ್ಸಿ ವ್ಯಾನ್ ಡರ್ ಡುಸ್ಸೆನ್ ಪೀಟರ್ಸನ್‌ ಜೊತೆಗೆ ಕಣಕ್ಕಿಳಿದಿದ್ದಾರೆ. ಹೀಗಾಗಿ ಅಂತಿಮ ದಿನದಾಟದಲ್ಲಿ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿವೆ.

ಭಾರತದ ಪರ ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ತಲಾ 1 ವಿಕೆಟ್ ಪಡೆದು ಮಿಂಚಿದ್ರು. ಅದರಲ್ಲೂ ಮೂರನೇ ದಿನದಾಟದ ಕೊನೆಯ ಎಸೆತದಲ್ಲಿ 96 ಎಸೆತಗಳಲ್ಲಿ ಮೂರು ಬೌಂಡರಿಗಳೊಂದಿಗೆ 30 ರನ್ ಗಳಿಸಿದ ಎಲ್ಗರ್ ಅವರನ್ನು ಜಸ್ಪ್ರೀತ್ ಬುಮ್ರಾ ಔಟ್‌ ಮಾಡಿದರು. ಎರಡನೇ ಟೆಸ್ಟ್ ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿ ಪಂದ್ಯ ಗೆಲ್ಲಿಸಿದ್ದ ಡೀನ್ ಎಲ್ಗರ್ ವಿಕೆಟ್ ಪಡೆದ ತೃಪ್ತಿಯಲ್ಲಿ ಟೀಂ ಇಂಡಿಯಾ 'ಡಿಸೈಡರ್ ಡೇ' ನಲ್ಲಿ ಆತ್ಮವಿಶ್ವಾಸದಿಂದ ಬೌಲಿಂಗ್ ಮಾಡಲಿದೆ.

ಅತ್ತ ದಕ್ಷಿಣ ಆಫ್ರಿಕಾ ಪರ ಕೀಗನ್ ಪೀಟರ್ಸನ್ ಉತ್ತಮವಾಗಿ ಬ್ಯಾಟ್‌ ಬೀಸಿ ತನ್ನ ಸಾಮರ್ಥ್ಯ ಪ್ರದರ್ಶಿಸಿದ್ದು, ಮೊದಲ ಸೆಷನ್‌ನಲ್ಲಿ ಭಾರತದ ಪ್ರಬಲ ದಾಳಿಯನ್ನ ವಿಕೆಟ್ ಉಳಿಸಿಕೊಳ್ಳುತ್ತಾರ ಕಾದು ನೋಡ್ಬೇಕು. ಪಂದ್ಯದ ನಾಲ್ಕನೇ ದಿನದಾಟದ ಲೈವ್ ಸ್ಕೋರ್ ಈ ಕೆಳಗಿದೆ.

1
51801

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ

ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂದಾ ಮಗಾಲಾ, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಭಾರತ ಪ್ಲೇಯಿಂಗ್ 11: ಆಡುತ್ತಿರುವವರು: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್

ಬೆಂಚ್: ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಮೊಹಮ್ಮದ್ ಸಿರಾಜ್, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, January 14, 2022, 14:06 [IST]
Other articles published on Jan 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X