ಆತನ ಬ್ಯಾಟಿಂಗ್ ಯಾವತ್ತಿಗೂ ನಮಗೆ ಕಳವಳವನ್ನುಂಟು ಮಾಡಿರಲಿಲ್ಲ: ಬ್ಯಾಟಿಂಗ್ ಕೋಚ್ ರಾಥೋರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದೆ. ಮೊದಲ ದಿನ ದಿನ ಟೀಮ್ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಸ್ಪಷ್ಟ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಭಾರತ 223 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರವಾಗಿ ನಾಯಕ ವಿರಾಟ್ ಕೊಹ್ಲಿ ಮಾತ್ರವೇ ಉತ್ತ, ಪ್ರದರ್ಶನ ನಿಡಿದ್ದು 79 ರನ್‌ಗಳಿಸಿದ್ದಾರೆ. ಈ ಪಂದ್ಯದ ಮೊದಲ ದಿನದಾಟ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರದರ್ಶನಕ್ಕೆ ಸಂತಸ ವ್ಯಕ್ತಪಪಡಿಸಿದ್ದಾರೆ. ಅಲ್ಲದೆ ಮೊದಲ ದಿನದಾಟದಲ್ಲಿ ಕೊಹ್ಲಿ ಯ ಹೊಡೆತಗಳ ಆಯ್ಕೆಯ ಬಗ್ಗೆ ಮಾತನಾಡಿದ ರಾಥೋರ್ ಇತ್ತೀಚಿನ ಪಂದ್ಯಗಳಿಗೆ ಹೋಲಿಸಿದರೆ ಕೊಹ್ಲಿಯ ಹೊಡೆತಗಳು ಆಯ್ಕೆ ಅತ್ಯುತ್ತಮವಾಗಿತ್ತು ಎಂದಿದ್ದಾರೆ.
ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಎರಡನೇ ಅತ್ಯಂತ ನಿಧಾನಗತಿಯ ಅರ್ಥ ಶತಕವನ್ನು ದಾಖಲಿಸಿದ್ದಾರೆ. 201 ಎಸೆತಗಳನ್ನು ಎದುರಿಸಿದ ಕೊಹ್ಲಿ 79 ರನ್‌ಗಳಿಸಿ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡರು. ಕೊಹ್ಲಿಯ ಈ ಪ್ರದರ್ಶನದಿಂದಾಗಿ ಭಾರತ ಮೊದಲ ದಿನ 223 ರನ್‌ಗಳನ್ನು ಗಳಿಸಿ ಆಲೌಟ್ ಆಗಿದೆ.
ಮೊದಲ ದಿನದಾಟ ಮುಕ್ತಾಯದ ಬಳಿಕ ಮಾತನಾಡಿದ ವಿಕ್ರಂ ರಾಥೋರ್ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಫಾರ್ಮ್ ಯಾವತ್ತಿಗೂ ಟೀಮ್ ಮ್ಯಾನೇಜ್‌ಮೆಂಟ್‌ಗೆ ಕಳವಳವನ್ನುಂಟು ಮಾಡಿಯೇ ಇಲ್ಲ ಎಂದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ ಅದಾಗಲೇ ಎರಡು ವರ್ಷ ದಾಟಿದೆ. ಹೀಗಾಗಿ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇದೆ.
"ನಾವು ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಗ್ಗೆ ಯಾವತ್ತಿಗೂ ಕಳವಳವನ್ನು ಹೊಂದಿಯೇ ಇಲ್ಲ. ಅವರು ಯಾವಾಗಲೂ ಉತ್ತಮವಾಗಿ ಬ್ಯಾಟಿಂಗ್ ಮಾಡಿಕೊಂಡು ಬಂದಿದ್ದಾರೆ. ಬ್ಯಾಟಿಂಗ್ ಕೋಚ್ ಆಗಿಯೂ ನಾನು ಆತ ಬ್ಯಾಟಿಂಗ್ ಉತ್ತಮವಾಗಿ ಮಾಡುತ್ತಿಲ್ಲ ಎಂಬ ಆತಂಕಕ್ಕೆ ಒಳಗಾಗಿಲ್ಲ" ಎಂದು ರಾಥೋರ್ ಹೇಳಿದ್ದಾರೆ. "ಆತ ನೆಟ್ಸ್‌ನಲ್ಲಿ ಉತ್ತಮವಾಗಿ ಆಡಿದ್ದರು. ಪಂದ್ಯದಲ್ಲಿಯೂ ಅದ್ಭುತವಾದ ಪ್ರದರ್ಶನ ನೀಡಿದ್ದಾರೆ. ಅವರು ಉತ್ತಮ ಆರಂಭವನ್ನು ಪಡೆದರು. ಇಂದಿನ ಪಂದ್ಯದಲ್ಲಿ ಉತ್ತಮ ಬಲದಾವನೆಯೆಂದರೆ ಅವರು ಈ ಪಂದ್ಯದಲ್ಲಿ ಮತ್ತಷ್ಟು ಶಿಸ್ತಿನಿಂದ ಆಡಿದ್ದಾರೆ. ಆತ ಉತ್ತಮವಾಗಿ ಆಡುತ್ತಿದ್ದರು, ಸ್ವಲ್ಪ ಅದೃಷ್ಠವಿದ್ದರೆ ಆತನಿಂದ ದೊಡ್ಡ ಮೊತ್ತವನ್ನು ನಿರೀಕ್ಷಿಸಬಹುದಾಗಿತ್ತು. ಆದರೆ ಆತ ಇಂದು ಆಡಿದ ರೀತಿಯಿಂದ ನಾನು ಸಂತಸಗೊಂಡಿದ್ದೇನೆ" ಎಂದು ವಿಕ್ರಂ ರಾಥೋರ್ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ಕೊಹ್ಲಿ ಕಳೆದ 2 ವರ್ಷಗಳಿಂದ ಶತಕವನ್ನು ಗಳಿಸಲು ವಿಫಲವಾಗುತ್ತಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕಗಳಿಸುವ ಅತ್ಯುತ್ತಮ ಅವಕಾಶವನ್ನು ಹೊಂದಿದ್ದರು. ಆದರೆ 79 ರನ್‌ಗಳಿಸಿದ್ದ ವೇಳೆ ಕೊಹ್ಲಿ ವಿಕೆಟ್ ಕಳೆದುಕೊಳ್ಳುವ ಮೂಲಕ ಈ ಅವಕಾಶವನ್ನು ಕಳೆದುಕೊಂಡರು. ಆರಂಭದಿಂದಲೇ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ನಾಯಕ ಕೊಹ್ಲಿ ದಕ್ಷಿಣ ಆಫ್ರಿಕಾ ವೇಗಿಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಆದರೆ ಮೂರಂಕಿ ತಲುಪಲು ವಿರಾಟ್ ಮತ್ತೊಮ್ಮೆ ವಿಫಲವಾಗಿದ್ದಾರೆ.
ಭಾರತ ಆಡುವ ಬಳಗ: ಆಡುತ್ತಿರುವವರು: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್
ಬೆಂಚ್ ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಹನುಮ ವಿಹಾರಿ, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಕೀಗನ್ ಪೀಟರ್ಸನ್, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ
ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂದಾ ಮಗಾಲಾ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ಜಾರ್ಜ್ ಲಿಂಡೆ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications