Ind vs SA: ಅಂತಿಮ ಟೆಸ್ಟ್‌ನಲ್ಲಿ ಉತ್ತಮ ಟಾರ್ಗೆಟ್ ನೀಡುತ್ತಾ ಟೀಂ ಇಂಡಿಯಾ LIVE SCORE

ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ ಈಗಾಗಲೇ 70 ರನ್‌ಗಳ ಮುನ್ನಡೆ ಸಾಧಿಸಿದ್ದು ದಕ್ಷಿಣ ಆಫ್ರಿಕಾಗೆ ಉತ್ತಮ ಗುರಿ ನೀಡುವ ಜವಾಬ್ದಾರಿ ನಾಯಕ ವಿರಾಟ್ ಕೊಹ್ಲಿ ಹೆಗಲಿಗೇರಿದೆ.

ಕೇಪ್ ಟೌನ್ ಟೆಸ್ಟ್ ನಲ್ಲಿ ವಿಶಿಷ್ಟ ಶತಕ ಸಿಡಿಸಿದ Virat Kohli | Oneindia Kannada

ದಕ್ಷಿಣ ಆಫ್ರಿಕಾವನ್ನ 210 ರನ್‌ಗಳಿಗೆ ಆಲೌಟ್ ಮಾಡಿದ ಭಾರತ 13ರನ್‌ಗಳ ಅಲ್ಪ ಮುನ್ನಡೆ ಸಾಧಿಸಿತು. ಆದ್ರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬಹುಬೇಗನೆ ಓಪನರ್‌ಗಳಾದ ಕೆ.ಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು. ಕೆ.ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಈ ಪಂದ್ಯದಲ್ಲಿ ಎರಡನೇ ಬಾರಿಯೂ ಉತ್ತಮ ಆರಂಭವನ್ನು ನೀಡಲು ವಿಫಲವಾದರು. ತಂಡದ ಮೊತ್ತ 24 ರನ್‌ ಆಗುವಷ್ಟರಲ್ಲಿ ಇಬ್ಬರು ಕೂಡ ಫೆವಿಲಿಯನ್ ಸೇರಿಕೊಂಡರು. ಮಯಾಂಕ್ ಅಗರ್ವಾಲ್ 7 ರನ್‌ಗಳಿಸಿ ಔಟಾದ್ರೆ, ಕೆಎಲ್ ರಾಹುಲ್ 10 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ IPL 15ನೇ ಸೀಸನ್‌? ಪ್ಲ್ಯಾನ್ ಬಿ ರೆಡಿ ಮಾಡಿಕೊಂಡಿರುವ BCCIದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ IPL 15ನೇ ಸೀಸನ್‌? ಪ್ಲ್ಯಾನ್ ಬಿ ರೆಡಿ ಮಾಡಿಕೊಂಡಿರುವ BCCI

ಆದ್ರೆ ಮೂರನೇ ವಿಕೆಟ್‌ಗೆ ಜೊತೆಯಾಗಿ ನಿಂತ ಕೊಹ್ಲಿ ಪೂಜಾರ ಅಜೇಯರಾಗಿ ಮೂರನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ. ಕೊಹ್ಲಿ ಅಜೇಯ 14, ಪೂಜಾರ ಅಜೇಯ 9ರನ್‌ಗಳಿಸಿದ್ದು ತಂಡದ ಮೊತ್ತವನ್ನ ಹೆಚ್ಚಿಸುವ ಮಹತ್ತರ ಜವಾಬ್ದಾರಿ ಈ ಜೋಡಿ ಮೇಲಿತ್ತು. ಏಕೆಂದರೆ ಅಜಿಂಕ್ಯ ರಹಾನೆ ಮತ್ತು ರಿಷಭ್ ಪಂತ್ ಕಳಪೆ ಫಾರ್ಮ್ ಮುಂದುವರಿಸಿದ್ದು ಮತ್ತೆ ಭಾರತಕ್ಕೆ ಕೈ ಕೊಟ್ಟರೂ ಆಶ್ಚರ್ಯವಿಲ್ಲ. ಹೀಗಾಗಿ ಕೊಹ್ಲಿ-ಪೂಜಾರ ಜೋಡಿ ಉತ್ತಮ ಜೊತೆಯಾಟ ನೀಡಿ ಭಾರತವನ್ನ ಸುಭದ್ರ ಸ್ಥಿತಿಗೆ ತಲುಪಿಸುವ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ದಿನದ ಮೊದಲೆರಡು ಓವರ್‌ಗಳಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದ್ದಾರೆ.

ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಮೂರನೇ ದಿನದಾಟದಲ್ಲಿ ಪಂದ್ಯ ಯಾವ ದಿಕ್ಕಿನಲ್ಲಿ ಸಾಗಬಹುದು ಮತ್ತು ಕೊಹ್ಲಿ ಎಷ್ಟು ರನ್‌ ಕಲೆಹಾಕಬಹುದು ಎಂಬುದನ್ನ ಈ ಕೆಳಗಿನ ಲೈವ್ ಸ್ಕೋರ್‌ಕಾರ್ಡ್‌ ಮೂಲಕ ತಿಳಿಯಿರಿ

1
51801

ದಕ್ಷಿಣ ಆಫ್ರಿಕಾವನ್ನ 210 ರನ್‌ಗಳಿಗೆ ಕಟ್ಟಿಹಾಕಿದ ಭಾರತ
ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ಭಾರತದೆದುರು ಮುನ್ನಡೆ ಸಾಧಿಸುವ ಕನಸಿನಿಂದ ಹಿಂದೆ ಸರಿಯಿತು. ಟೆಸ್ಟ್ ಕ್ರಿಕೆಟ್‌ನಲ್ಲಿ ಏಳನೇ ಬಾರಿಗೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಬಾರಿಗೆ ಐದು ವಿಕೆಟ್ ಪಡೆದ ಬುಮ್ರಾ ಆಫ್ರಿಕನ್ನರ ಬ್ಯಾಟಿಂಗ್ ಬಲವನ್ನ ಅಡಗಿಸಿದ್ರು. ಬುಮ್ರಾಗೆ ವಿಕೆಟ್ ಒಪ್ಪಿಸಿದ ಐವರು ಆಪ್ರಿಕನ್ ಬ್ಯಾಟರ್‌ಗಳ ಪೈಕಿ ನಾಯಕ ಡೀನ್ ಎಲ್ಗರ್, ಏಡನ್ ಮಾರ್ಕ್ರಮ್ ಹಾಗೂ ಕೀಗನ್ ಪೀಟರ್ಸನ್ ಕೂಡ ಸೇರಿದ್ದಾರೆ. ಉಳಿದಂತೆ ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಶಮಿ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು. ಶಾರ್ದೂಲ್ ಠಾಕೂರ್‌ಗೆ ಒಂದು ವಿಕೆಟ್ ಲಭಿಸಿದೆ.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ

ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂದಾ ಮಗಾಲಾ, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಭಾರತ ಪ್ಲೇಯಿಂಗ್ 11: ಆಡುತ್ತಿರುವವರು: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್

ಬೆಂಚ್: ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಮೊಹಮ್ಮದ್ ಸಿರಾಜ್, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ

For Quick Alerts
ALLOW NOTIFICATIONS
For Daily Alerts
Story first published: Thursday, January 13, 2022, 14:07 [IST]
Other articles published on Jan 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X