IND vs SA T20: ಮತ್ತೊಂದು ಸರಣಿ ಗೆಲುವಿನ ವಿಶ್ವಾಸದಲ್ಲಿ ಭಾರತ, ದಾಖಲೆಯ ಸನಿಹದಲ್ಲಿ ಅರ್ಷದೀಪ್
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಜೋಹಾನ್ಸ್‌ಬರ್ಗ್‌ನಲ್ಲಿ ಶುಕ್ರವಾರ ನಾಲ್ಕನೇ ಟಿ20 ಪಂದ್ಯವನ್ನು ಆಡಲಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಈ ಪಂದ್ಯವನ್ನು ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ಕನಸಿನಲ್ಲಿ ಸೂರ್ಯ ಪಡೆ ಇದೆ. ಇನ್ನು ಆತಿಥೇಯ ತಂಡ ಈ ಪಂದ್ಯ ಗೆದ್ದು ಸರಣಿಯನ್ನು ಸಮನಾಗಿಸುವ ಲೆಕ್ಕಾಚಾರದಲ್ಲಿದೆ. ಹೀಗಾಗಿಯೇ ಈ ಪಂದ್ಯ ಕುತೂಹಲ ಹೆಚ್ಚಿಸಿದೆ. ನಾಲ್ಕನೇ ಟಿ20 ಪಂದ್ಯಕ್ಕೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಬಗ್ಗೆ ಮಾಹಿತಿ ಇಲ್ಲಿದೆ.
ಟೀಮ್ ಇಂಡಿಯಾ ಪಾಲಿಗೆ ಪ್ರಸಕ್ತ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅಮೋಘವಾಗಿದೆ. ಈ ವರ್ಷ ಭಾರತ ಒಟ್ಟು 25 ಟಿ20 ಪಂದ್ಯಗಳನ್ನು ಆಡಿದ್ದು, 23 ರಲ್ಲಿ ಜಯ ಸಾಧಿಸಿದೆ. ಅಫ್ಘಾನಿಸ್ತಾನ್, ಬಾಂಗ್ಲಾದೇಶ ತಂಡವನ್ನು ತವರಿನಲ್ಲಿ ಟೀಮ್ ಇಂಡಿಯಾ ವೈಟ್ ವಾಷ್ ಮಾಡಿದರೆ, ಶ್ರೀಲಂಕಾ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗು ಬಡೆದಿದೆ. ಜಿಂಬಾಬ್ವೆ ಪ್ರವಾಸದಲ್ಲಿ ಒಂದು ಸೋಲು ಕಂಡಿದ್ದು, ಆ ಸರಣಿಯನ್ನು ಸಹ 4-1ರಿಂದ ಗೆದ್ದು ಬೀಗಿದೆ. ಇನ್ನು ಟಿ20 ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಟೀಮ್ ಇಂಡಿಯಾ ಪ್ರಸಕ್ತ ವರ್ಷ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 8 ಬಾರಿ 200ಕ್ಕೂ ಹೆಚ್ಚು ರನ್ ಕಲೆ ಹಾಕಿದ ಕೀರ್ತಿ ಪಡೆದಿದೆ.

ಒತ್ತಡದಲ್ಲಿ ಸಂಜು, ಸೂರ್ಯ
ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ನಂತರ ಎರಡೂ ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರ ಮೇಲೆ ನಿಶ್ಚಿತವಾಗಿ ಒತ್ತಡವಿದೆ. ಇನ್ನು ರನ್ ಬರ ಅನುಭವಿಸುತ್ತಿದ್ದ ಅಭಿಷೇಕ್ ಶರ್ಮಾ ಲಯಕ್ಕೆ ಮರಳಿರುವುದು ತಂಡದ ಖುಷಿ ಹೆಚ್ಚಿಸಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಅಮೋಘ ಶತಕ ಬಾರಿಸಿರುವ ತಿಲಕ್ ವರ್ಮಾ, ಮತ್ತೊಮ್ಮೆ ಜವಾಬ್ದಾರಿಯುತ ಆಟವನ್ನು ಆಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಪ್ ಆರ್ಡರ್‌ನಲ್ಲಿ ಯಾವುದೇ ಬದಲಾವಣೆ ಕಾಣಿಸಿಕೊಳ್ಳುವುದು ಅನಮಾನ.
ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡುತ್ತಿಲ್ಲ. ನಾಲ್ಕನೇ ಪಂದ್ಯದಲ್ಲಾದರೂ ಇವರ ಬ್ಯಾಟ್‌ನಿಂದ ಬಿಗ್ ಇನಿಂಗ್ಸ್ ಬರುವ ಅನಿವಾರ್ಯತೆ ಇದೆ. ಇನ್ನು ಫಿನಿಷರ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ರಿಂಕು ಸಿಂಗ್ ಸಹ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದು, ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಬೇಕಿದೆ.

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸ್ಥಿರ ಆಟದ ಪ್ರದರ್ಶನ ನೀಡಬೇಕಿದೆ. ನಾಲ್ಕನೇ ಪಂದ್ಯದಲ್ಲೂ ರಮಣ್ ದೀಪ್ ಕಣಕ್ಕೆ ಇಳಿಯುವ ಸಾಧ್ಯತೆ ಹೆಚ್ಚಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳು ಇಲ್ಲ.
ದಾಖಲೆಯ ಸನಿಹದಲ್ಲಿ ಅರ್ಷದೀಪ್
ಟೀಮ್ ಇಂಡಿಯಾದ ಸ್ಟಾರ್ ಪೇಸ್ ಬೌಲರ್ ಅರ್ಷದೀಪ್ ಸಿಂಗ್ ಈ ಪಂದ್ಯದಲ್ಲಿ ದಾಖಲೆಯನ್ನು ಬರೆಯುವ ಸನಿಹದಲ್ಲಿದ್ದಾರೆ. ಇವರು ನಾಲ್ಕನೇ ಟಿ20 ಪಂದ್ಯದಲ್ಲಿ ಐದು ವಿಕೆಟ್ ಪಡೆದಿದ್ದೇ ಆದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ ದಾಖಲೆಯನ್ನು ಇವರು ಬರೆಯಲಿದ್ದಾರೆ.
ಭಾರತದ ಸಂಭಾವ್ಯ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ರಮಣದೀಪ್ ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್ ಮತ್ತು ಅವೇಶ್ ಖಾನ್.
ದಕ್ಷಿಣ ಆಫ್ರಿಕಾ ಸಂಭಾವ್ಯ ತಂಡ: ರಿಯಾನ್ ರಿಕೆಲ್ಟನ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ಕ್ಯಾಪ್ಟನ್), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್ / ಲುಥೋ ಸಿಪಾಮ್ಲಾ, ಮಾರ್ಕೊ ಜೆನ್ಸನ್, ಕೇಶವ್ ಮಹಾರಾಜ್, ಓಟ್ನಿಯಲ್ ಬಾರ್ಟ್‌ಮನ್, ಜೆರಾಲ್ಡ್ ಕೋಟ್ಜಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications