
ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ದಿನೇಶ್ ಕಾರ್ತಿಕ್ ಅಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ. ಕೇವಲ 26 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿರುವ ಡಿಕೆ ಬ್ಯಾಟಿಂಗ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ದಿನೇಶ್ ಕಾರ್ತಿಕ್ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 15 ವರ್ಷವೇ ಕಳೆದು ಹೋಗಿದೆ. ಹೀಗಿರುವಾಗ ಟೀಂ ಇಂಡಿಯಾ ಪರ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವ ಕಾರ್ತಿಕ್ ಅಬ್ಬರದ ಆಟವಾಡುತ್ತಿದ್ದು, ಚೊಚ್ಚಲ ಅರ್ಧಶತಕ ದಾಖಲಿಸಿದ್ರು. 27 ಎಸೆತಗಳಲ್ಲಿ 55 ರನ್ ಚಚ್ಚಿದ ಕಾರ್ತಿಕ್ 203.70 ಸ್ಟ್ರೈಕ್‌ರೇಟ್‌ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಸಿದ್ದಾರೆ.
ಕಾರ್ತಿಕ್‌ಗೆ ಉತ್ತಮ ಸಾಥ್ ಕೊಟ್ಟ ಹಾರ್ದಿಕ್ ಪಾಂಡ್ಯ 31 ಎಸೆತಗಳಲ್ಲಿ 46ರನ್ ಕಲೆಹಾಕಿದ್ರು. ಐದನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿದ ಈ ಜೋಡಿ ಅಬ್ಬರದಿಂದಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿತು.
ದಿನೇಶ್ ಕಾರ್ತಿಕ್ ಆಟದ ಇನ್ನೊಂದು ವಿಶೇಷ ಅಂದ್ರೆ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಫಿಫ್ಟಿ ದಾಖಲಿಸಿದ ಅತಿ ಹಿರಿಯ ಆಟಗಾರ ಎಂಬ ಸಾಧನೆಯು ಇವರ ಹೆಸರಿಗೆ ದಾಖಲಾಗಿದೆ. 37ನೇ ವಯಸ್ಸಿನಲ್ಲಿ ಚೊಚ್ಚಲ ಅರ್ಧಶತಕ ದಾಖಲಿಸಿರುವ ದಿನೇಶ್ ಕಾರ್ತಿಕ್ ಭಾರತದ ಮೊಟ್ಟ ಮೊದಲ ಟಿ20 ಪಂದ್ಯದ ಸದಸ್ಯರಾಗಿದ್ದರು ಅನ್ನೋದು ಸಹ ವಿಶೇಷವಾಗಿದೆ.
ಡಿಸೆಂಬರ್ 1, 2006ರಲ್ಲಿ ಭಾರತ ಮೊದಲ ಅಂತರಾಷ್ಟ್ರೀಯ ಟಿ20 ಪಂದ್ಯವನ್ನ ಇದೇ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದು, ಟೀಂ ಇಂಡಿಯಾ ಆರು ವಿಕೆಟ್‌ಗಳ ಗೆಲುವು ಸಾಧಿಸಿತು. ಹರಿಣಗಳ 127ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಪರ ಅಂದು ಸಹ ದಿನೇಶ್ ಕಾರ್ತಿಕ್ ಉತ್ತಮ ಆಟವಾಡಿದ್ದು 28 ಎಸೆತಗಳಲ್ಲಿ ಅಜೇಯ 31ರನ್ ಕಲೆಹಾಕಿದ್ದರು.
ಒಟ್ಟಿನಲ್ಲಿ ಟೀಂ ಇಂಡಿಯಾ ಪರ ದಶಕಗಳ ಬಳಿಕ ಟಿ20 ಕ್ರಿಕೆಟ್‌ಗೆ ಮರಳಿರುವ ಡಿಕೆ ಇಷ್ಟೊಂದು ಸೊಗಸಾದ ಇನ್ನಿಂಗ್ಸ್ ಆಡಿರುವುದು ಅಭಿಮಾನಿಗಳಲ್ಲಿ ಖುಷಿ ದುಪ್ಪಟ್ಟಾಗಿಸಿದೆ.
ಭಾರತ-ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11
ಟೀಂ ಇಂಡಿಯಾ
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಮಾರ್ಕೊ ಜಾನ್ಸೆನ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ, ಅನ್ರಿಕ್ ನೊರ್ಕಿಯಾ