IND vs SA 4ನೇ ಟಿ20: ಈ ಮೈಲಿಗಲ್ಲುಗಳ ಮೇಲೆ ಪಂತ್, ದಿನೇಶ್ ಕಾರ್ತಿಕ್ ಮತ್ತು ಭುವನೇಶ್ವರ್ ಕುಮಾರ್ ಕಣ್ಣು

ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸೆಣಸಾಟವನ್ನು ನಡೆಸುತ್ತಿದೆ. ಜೂನ್ 14ರಂದು ವಿಶಾಖಪಟ್ಟಣದಲ್ಲಿ ನಡೆದ ಇತ್ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಇನ್ನು ಇದಕ್ಕೂ ಮುನ್ನ ನಡೆದಿದ್ದ ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ದಕ್ಷಿಣ ಆಫ್ರಿಕಾ ಸದ್ಯ ಸರಣಿಯಲ್ಲಿ 2 - 1 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ.
ದಕ್ಷಿಣ ಆಫ್ರಿಕಾ ಸರಣಿಯನ್ನು ಕೈವಶಪಡಿಸಿಕೊಳ್ಳಬೇಕೆಂದರೆ ಉಳಿದೆರಡು ಪಂದ್ಯಗಳಲ್ಲಿ ಯಾವುದಾದರೂ ಒಂದು ಪಂದ್ಯವನ್ನು ಗೆದ್ದರೂ ಸಾಕಾಗಿದ್ದು, ಟೀಮ್ ಇಂಡಿಯಾ ಸರಣಿ ಗೆದ್ದು ತವರಿನಲ್ಲಿ ಮುಖಭಂಗದಿಂದ ಪಾರಾಗಬೇಕೆಂದರೆ ಉಳಿದ ಎರಡೂ ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಇತ್ತಂಡಗಳ ನಡುವಿನ ಈ ನಾಲ್ಕನೇ ಪಂದ್ಯ ನಾಳೆ ( ಜೂನ್ 17) ರಾಜ್‌ಕೋಟ್ ನಗರದ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇತ್ತಂಡಗಳ ಕೆಲ ಆಟಗಾರರು ಈ ಪಂದ್ಯದ ಮೂಲಕ ಈ ಕೆಳಕಂಡ ಮೈಲಿಗಲ್ಲುಗಳನ್ನು ಸೃಷ್ಟಿಸುವ ಸಾಧ್ಯತೆಗಳಿವೆ.

ಈ ಮೈಲಿಗಲ್ಲುಗಳತ್ತ ಕ್ವಿಂಟನ್ ಡಿಕಾಕ್ ಕಣ್ಣು
ಪ್ರಥಮ ಟಿ ಟ್ವೆಂಟಿ ಪಂದ್ಯ ಮುಕ್ತಾಯವಾದ ನಂತರ ಗಾಯದ ಸಮಸ್ಯೆಗೆ ಸಿಲುಕಿ ತದನಂತರ ನಡೆದ 2 ಮತ್ತು 3ನೇ ಟಿ ಟ್ವೆಂಟಿ ಪಂದ್ಯಗಳಿಂದ ಹೊರಗುಳಿದಿದ್ದ ಕ್ವಿಂಟನ್ ಡಿ ಕಾಕ್ ಇದೀಗ ಚೇತರಿಸಿಕೊಂಡಿದ್ದು ನಾಲ್ಕನೇ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಡಿಕಾಕ್ ಕಣಕ್ಕಿಳಿದರೆ ಈ ಕೆಳಕಂಡ ಮೈಲಿಗಲ್ಲುಗಳನ್ನು ಮುಟ್ಟುವ ಸಾಧ್ಯತೆಗಳಿವೆ.
• ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್, ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಈ ಪಂದ್ಯದಲ್ಲಿ ಒಂದೇ ಒಂದು ಕ್ಯಾಚ್ ಪಡೆದರೂ 50 ಅಂತರಾರಾಷ್ಟ್ರೀಯ ಟಿ ಟ್ವೆಂಟಿ ಕ್ಯಾಚ್ ಪಡೆದ ಆಟಗಾರ ಎಂಬ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ಅಂತರರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 192 ಬೌಂಡರಿಗಳನ್ನು ಬಾರಿಸಿರುವ ಡಿ ಕಾಕ್ ಈ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ 200 ಅಂತರರಾಷ್ಟ್ರೀಯ ಟಿ ಟ್ವೆಂಟಿ ಬೌಂಡರಿ ಬಾರಿಸಿದ ಆಟಗಾರ ಎಂಬ ಮೈಲಿಗಲ್ಲನ್ನು ತಲುಪಲಿದ್ದಾರೆ.
• ಕ್ವಿಂಟನ್ ಡಿಕಾಕ್ ಇಲ್ಲಿಯವರೆಗೂ ಅಂತರರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 1849 ರನ್ ಕಲೆಹಾಕಿದ್ದು, ದಕ್ಷಿಣ ಆಫ್ರಿಕಾ ಪರ ಅಂತರರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಜೆಪಿ ಡ್ಯುಮಿನಿ ( 1934 ರನ್ ) ದಾಖಲೆ ಮುರಿಯಲು 86 ರನ್ ಬಾರಿಸಬೇಕಾದ ಅಗತ್ಯವಿದೆ.

ಈ ಮೈಲಿಗಲ್ಲುಗಳತ್ತ ಪಂತ್, ಭುವನೇಶ್ವರ್ ಮತ್ತು ದಿನೇಶ್ ಕಾರ್ತಿಕ್ ಚಿತ್ತ
• ಟೀಮ್ ಇಂಡಿಯಾ ನಾಯಕ ರಿಷಭ್ ಪಂತ್ 99 ಅಂತರರಾಷ್ಟ್ರೀಯ ಸಿಕ್ಸರ್ ಬಾರಿಸಿದ್ದು, ಇನ್ನೊಂದು ಸಿಕ್ಸರ್ ಬಾರಿಸಿದರೆ 100 ಅಂತರರಾಷ್ಟ್ರೀಯ ಸಿಕ್ಸರ್ ಬಾರಿಸಿದ ಆಟಗಾರ ಎಂಬ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• ದಿನೇಶ್ ಕಾರ್ತಿಕ್ ಈ ಪಂದ್ಯದಲ್ಲಿ 6 ಬೌಂಡರಿಗಳನ್ನು ಬಾರಿಸಿದರೆ 50 ಅಂತರರಾಷ್ಟ್ರೀಯ ಟಿ ಟ್ವೆಂಟಿ ಬೌಂಡರಿಗಳ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
• 63 ಅಂತರಾಷ್ಟ್ರೀಯ ಟಿ ಟ್ವೆಂಟಿ ವಿಕೆಟ್‌ಗಳನ್ನು ಪಡೆದಿರುವ ಭುವನೇಶ್ವರ್ ಕುಮಾರ್ ಈ ಪಂದ್ಯದಲ್ಲಿ 4 ವಿಕೆಟ್ ಪಡೆದರೆ ಜಸ್ ಪ್ರೀತ್ ಬೂಮ್ರಾ ಅವರನ್ನು ಹಿಂದಿಕ್ಕಲಿದ್ದಾರೆ. ಜಸ್ ಪ್ರೀತ್ ಬುಮ್ರಾ ಒಟ್ಟು 67 ಟಿ ಟ್ವೆಂಟಿ ವಿಕೆಟ್ ಪಡೆದಿದ್ದಾರೆ.

ಸಂಭಾವ್ಯ ಆಡುವ ಬಳಗಗಳು
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications