Ind vs SA 5ನೇ ಟಿ20: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಳೆಯಿಂದ ಓವರ್‌ಗಳ ಸಂಖ್ಯೆಯಲ್ಲಿ ಇಳಿಕೆ; ಪಂದ್ಯ ವಿಳಂಬ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಿರ್ಣಾಯಕ ಐದನೇ ಪಂದ್ಯ ಇಂದು (ಭಾನುವಾರ, ಜೂನ್ 19) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತದ ಬ್ಯಾಟಿಂಗ್ ಆರಂಭದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಳೆ ಆರಂಭವಾಗಿದೆ. ಹೀಗಾಗಿ ಕೆಲಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಮಳೆ ನಿಂತ ನಂತರ ಪಂದ್ಯ ಆರಂಭಗೊಳ್ಳಲಿದೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ಬೆಂಗಳೂರು ನಗರದಲ್ಲಿ ಸುರಿದ ಮಳೆಯಿಂದಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ವಿಳಂಬವಾಗಿ ಆರಂಭವಾಗಲಿದೆ. ಇದೇ ವೇಳೆ ಪ್ರತಿ ತಂಡದ 20 ಓವರ್‌ಗಳ ಸಂಖ್ಯೆಯನ್ನು 19ಕ್ಕೆ ಇಳಿಸಲಾಗಿದೆ. ಪಂದ್ಯ ಸರಿಯಾಗಿ 7.50ಕ್ಕೆ ಆರಂಭಗೊಳ್ಳಲಿದೆ.
ಟಿ20 ಸರಣಿಯ ಮೊದಲ ಎರಡು ಪಂದ್ಯಗಳನ್ನು ಆಫ್ರಿಕಾ ತಂಡ ಗೆದ್ದರೆ, ಇನ್ನೂಳಿದ ಎರಡು ಪಂದ್ಯಗಳನ್ನು ಭಾರತ ತಂಡ ಗೆದ್ದು ಬೀಗಿದೆ. ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯ ಗೆದ್ದವರು ಸರಣಿ ಜಯಿಸಿ ಸಂಭ್ರಮಿಸಲಿದ್ದಾರೆ. ಇಂದಿನ ಪಂದ್ಯಕ್ಕೆ ಮಳೆ ಅಡಚಣೆಯಾಗುವ ಸಾಧ್ಯತೆ ಹೆಚ್ಚಿದೆ. ಕಳೆದ ಎರಡ್ಮೂರು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಬರುತ್ತಿರುವುದರಿಂದ ಇಂದು ಕೂಡ ಮಳೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಸೂಚಿಸಿತ್ತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೌಲಿಂಗ್ ಆಯ್ಕೆ
ಸರಣಿಯ ನಿರ್ಣಾಯಕ ಐದನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಕೇಶವ್ ಮಹಾರಾಜ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರಿಷಭ್ ಪಂತ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ20 ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ತಲಾ ಎರಡು ಪಂದ್ಯಗಳನ್ನು ಗೆದ್ದಿರುವ ಉಭಯ ತಂಡಗಳು 2-2 ಅಂತರದ ಸಮಬಲ ಕಾಯ್ದುಕೊಂಡಿದ್ದಾರೆ.
ಕೊನೆಯ ಪಂದ್ಯದಲ್ಲಿ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಯತ್ನದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವಿದೆ. ಇನ್ನು ಕಳೆದ ರಾಜಕೋಟ್ ಪಂದ್ಯದಂತೆ ಗೆದ್ದು ಸರಣಿ ತನ್ನದಾಹಗಿಸಿಕೊಳ್ಳಲು ರಿಷಭ್ ಪಂತ್ ಪಡೆ ಯೋಚಿಸುತ್ತಿದೆ.
ಇನ್ನು ಪ್ರವಾಸಿ ದಕ್ಷಿಣ ಆಫ್ರಿಕಾ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದ ನಂತರ ಮೂರು ಮತ್ತು ನಾಲ್ಕನೇ ಪಂದ್ಯಗಳನ್ನು ಸೋತಿತು. ಹೀಗಾಗಿ ಅಂತಿಮ ಪಂದ್ಯ ಎಲ್ಲರ ಗಮನ ಸೆಳೆದಿದ್ದು, ಯಾರ ಬಲ ಮೇಲಾಗಿದೆ ಎಂಬುದನ್ನು ಕಾದು ನೋಡಬೇಕಿದೆ.
ಎರಡು ತಂಡಗಳ ಆಡುವ 11ರ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ: ಕೇಶವ್ ಮಹಾರಾಜ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಡ್ವೇನ್ ಪ್ರಿಟೋರಿಯಸ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಅನ್ರಿಚ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications