Ind vs SA 5ನೇ ಟಿ20: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಮೂವರಿಗೆ ಭಾರೀ ಬೆಂಬಲ ಸಿಗಲಿದೆ; ಆಕಾಶ್ ಚೋಪ್ರಾ

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಸೆಣಸಲಿದೆ. ಜೂನ್ 19ರ ಭಾನುವಾರದಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಿಷಭ್ ಪಂತ್ ನಾಯಕತ್ವದ ಭಾರತ ತಂಡವು ಮೊದಲ ಎರಡು ಸೋಲುಗಳ ನಂತರ ಕೊನೆಯ ಎರಡು ಪಂದ್ಯಗಳನ್ನು ಗೆದ್ದು ಸರಣಿ ಸಮಬಲಗೊಳಿಸಿದ್ದು, ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೈವೊಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದ್ದು, ತವರಿನ ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ಮತ್ತು ಹರ್ಷಲ್ ಪಟೇಲ್ ಅವರಿಗೆ ಈ ಪಂದ್ಯ ಪ್ರಮುಖವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಆರ್‌ಸಿಬಿ ತನ್ನ ಹೃದಯದಲ್ಲಿ ವಿಶೇಷ ಸ್ಥಾನ
ಹಲವಾರು ವರ್ಷಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿಯ ಅತ್ಯಂತ ಸ್ಥಿರ ಆಟಗಾರರಲ್ಲಿ ಒಬ್ಬರಾದ ನಂತರ ಪ್ರೇಕ್ಷಕರ ನೆಚ್ಚಿನ ಯುಜ್ವೇಂದ್ರ ಚಹಲ್ ಕೂಡ ಪ್ರೇಕ್ಷಕರಿಂದ ಬಲವಾದ ಬೆಂಬಲವನ್ನು ನಿರೀಕ್ಷಿಸಲಾಗಿದೆ. 2022ರ ಮೆಗಾ ಹರಾಜಿನಲ್ಲಿ ಯುಜ್ವೇಂದ್ರ ಚಹಲ್ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸೇರ್ಪಡೆಯಾದರು. ಆದರೆ ಆರ್‌ಸಿಬಿ ತನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುತ್ತದೆ ಎಂದು ಅವರು ಯಾವಾಗಲೂ ಸಮರ್ಥಿಸಿಕೊಂಡಿದ್ದಾರೆ.
ಈ ಮೂವರು ನಿರ್ಣಾಯಕ ಆಟಗಾರರ ಬಗ್ಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಮಾತನಾಡುತ್ತಾ, ಈ ಮೂರು ಆಟಗಾರರ ಪರವಾಗಿ ಪ್ರೇಕ್ಷಕರು ಭರ್ಜರಿ ಬೆಂಬಲ ನೀಡಲಿದ್ದಾರೆ ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದರು.

ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್‌ಗೆ ಭಾರೀ ಬೆಂಬಲ
"ಎಂ. ಚಿನ್ನಸ್ವಾಮಿ ಸ್ಟೇಡಿಯಂ ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್ ಮತ್ತು ಯುಜ್ವೇಂದ್ರ ಚಹಲ್‌ಗೆ ಪ್ರೇಕ್ಷಕರು ಹುರಿದುಂಬಿಸಲಿದ್ದು, ಮೊದಲು ಯುಜ್ವೇಂದ್ರ ಚಹಲ್ ಅವರು ಮಾಜಿ ಆರ್‌ಸಿಬಿಯನ್ ಆಗಿದ್ದಾರೆ. ಅದರ ನಂತರ ದಿನೇಶ್ ಕಾರ್ತಿಕ್ ಅವರ ಅದ್ಭುತ ಫಾರ್ಮ್‌ನಿಂದಾಗಿ ಅವರಿಗೆ ಸಂಪೂರ್ಣ ಬೆಂಬಲ ಸಿಗಲಿದೆ. ಸದ್ಯ ಭಾರತೀಯ ತಂಡದಲ್ಲಿ ಆಡುತ್ತಿದ್ದರೂ, ಅವರು ಆರ್‌ಸಿಬಿಯ ಹೆಮ್ಮೆಯೂ ಆಗಿದ್ದಾರೆ. ಹರ್ಷಲ್ ಪಟೇಲ್- ಪರ್ಪಲ್ ಪಟೇಲ್ ಕಳೆದ ವರ್ಷ ಮತ್ತು ಈ ವರ್ಷ ಉತ್ತಮ ಫಾರ್ಮ್‌ನಲ್ಲಿದ್ದರು," ಎಂದು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

ಅಂತಿಮ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡುವ ನಿರೀಕ್ಷೆಯಿಲ್ಲ
ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರೂ, ಆಡುವ ಹನ್ನೊಂದರ ಬಳಗದಲ್ಲಿ ಭಾರತವು ಸರಣಿಯ ಅಂತಿಮ ಪಂದ್ಯದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿಲ್ಲ. ಐರ್ಲೆಂಡ್ ಮತ್ತು ಇಂಗ್ಲೆಂಡ್‌ನ ತಮ್ಮ ಸಾಗರೋತ್ತರ ಪ್ರವಾಸವನ್ನು ಪ್ರಾರಂಭಿಸುವ ಮೊದಲು ಅವರು ಸರಣಿಯ ಅಂತಿಮ ಪಂದ್ಯದಲ್ಲಿ ಉತ್ತಮವಾಗಿ ಬರಲು ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಮತ್ತು ಭುವನೇಶ್ವರ್ ಕುಮಾರ್ ಅವರ ಮೇಲೆ ಭರವಸೆ ಇಡಲಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ 11
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್ ಮತ್ತು ಯುಜ್ವೇಂದ್ರ ಚಾಹಲ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್/ ಟೆಂಬಾ ಬಾವುಮಾ (ನಾಯಕ) ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಎನ್ರಿಕ್ ನೊರ್ಕಿಯಾ, ತಬ್ರೈಜ್ ಶಮ್ಸಿ, ಲುಂಗಿ ಎನ್‌ಗಿಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications