For Quick Alerts
ALLOW NOTIFICATIONS  
For Daily Alerts
 

Ind vs SA T20I:ಅಂತಿಮ ಟಿ20 ಪಂದ್ಯದಲ್ಲಿ ತೆಂಬಾ ಬವುಮಾ ಏಕೆ ಆಡುತ್ತಿಲ್ಲ? ಕಾರಣ ಇಲ್ಲಿದೆ

Temba bavuma

ಅಂತಿಮ ಟಿ20 ಪಂದ್ಯದಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಟಾಸ್‌ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದು, ಟೀಂ ಇಂಡಿಯಾವನ್ನ ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಆದ್ರೆ ದಕ್ಷಿಣ ಆಫ್ರಿಕಾದ ನಾಯಕ ತೆಂಬಾ ಬವುಮಾ ಈ ಪಂದ್ಯಕ್ಕೆ ಅಲಭ್ಯರಾಗಿದ್ದು, ಸ್ಪಿನ್ನರ್ ಕೇಶವ್ ಮಹಾರಾಜ್ ಹರಿಣಗಳ ಪಡೆಯನ್ನು ಮುನ್ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಪರ ಮೂರು ಬದಲಾವಣೆ ಆಗಿದ್ದು, ತೆಂಬಾ ಬವುಮಾ ಬದಲು ರೀಜಾ ಹೆಂಡ್ರಿಕ್ಸ್‌ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದು, ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ.

ದಕ್ಷಿಣ ಆಫ್ರಿಕಾದ ನಾಯಕ ತೆಂಬಾ ಬವುಮಾ ಅಂತಿಮ ನಿರ್ಣಾಯಕ ಪಂದ್ಯದಲ್ಲಿ ಆಡದಿರಲು ಪ್ರಮುಖ ಕಾರಣ ಇಂಜ್ಯುರಿ. ಗಾಯದ ಕಾರಣದಿಂದ ಅವರು ಪ್ಲೇಯಿಂಗ್ ಇಲೆವೆನ್‌ನಿಂದ ತಪ್ಪಿಸಿಕೊಂಡಿದ್ದಾರೆ. ನಾಲ್ಕನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ತೆಂಬಾ ಬವುಮಾ ಗಾಯಗೊಂಡು ರಿಟೈರ್ಡ್ ಹರ್ಟ್‌ ಆಗಿ ಹೊರಗುಳಿದರು. ಮತ್ತೆ ತೆಂಬಾ ಬ್ಯಾಟಿಂಗ್ ಬರದೇ ಇರುವುದು ಗಾಯದ ಪ್ರಮಾಣವನ್ನ ತೋರಿಸಿತು.

ತೆಂಬಾ ಬವುಮಾ ಕೈ ಊತ ಇನ್ನೂ ಕಡಿಮೆಯಾಗಿಲ್ಲ ಎಂದು ವರದಿಯಾಗಿದ್ದು, ಹೀಗಾಗಿ ಅಂತಿಮ ಪಂದ್ಯದಲ್ಲಿ ತೆಂಬಾ ಬದಲು ರೀಜಾ ಹೆಂಡ್ರಿಕ್ಸ್‌ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಕೇಶವ್ ಮಹಾರಾಜ್ ಸ್ಟ್ಯಾಂಡ್-ಇನ್ ನಾಯಕರಾಗಿದ್ದಾರೆ.

"ಟ್ರಿಸ್ಟಾನ್ ಸ್ಟಬ್ಸ್, ರೀಜಾ ಹೆಂಡ್ರಿಕ್ಸ್ ಮತ್ತು ಕಗಿಸೊ ರಬಾಡ ಅವರು ಟೆಂಬಾ ಬವುಮಾ, ಮಾರ್ಕೊ ಜಾನ್ಸೆನ್ ಮತ್ತು ಶಮ್ಸಿ ಬದಲು ಸ್ಥಾನ ಪಡೆದಿದ್ದಾರೆ. ನಾವು ಹೆಚ್ಚುವರಿ ಬ್ಯಾಟರ್‌ಗಾಗಿ ಹೋಗಿದ್ದೇವೆ, ಆಶಾದಾಯಕವಾಗಿ, ಮುಂಚೂಣಿಯಲ್ಲಿ ಬ್ಯಾಟಿಂಗ್ ಮಾಡುವಾಗ ಅದನ್ನು ಬಳಸಿಕೊಳ್ಳಲು ನಾವು ನೋಡುತ್ತೇವೆ'' ಟಾಸ್ ಬಳಿಕ ಕೇಶವ್ ಮಹಾರಾಜ್ ಹೇಳಿದರು.

ಮಳೆಯಿಂದಾಗಿ ಪಂದ್ಯ ನಿಧಾನಗತಿಯಲ್ಲಿ ಪ್ರಾರಂಭಗೊಂಡು ಒಂದು ಓವರ್ ಕಡಿತಗೊಂಡು 19 ಓವರ್‌ಗೆ ನಿಗದಿಯಾಯಿತು. ಆದ್ರೆ ಟೀಂ ಇಂಡಿಯಾ 3.3 ಓವರ್‌ಗಳಿಗೆ 2 ವಿಕೆಟ್ ನಷ್ಟಕ್ಕೆ 28 ರನ್ ಕಲೆಹಾಕಿದ್ದು ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದ್ದು, ಮತ್ತಷ್ಟು ಓವರ್‌ಗಳ ಕಡಿತದ ಸಾಧ್ಯತೆ ಹೆಚ್ಚಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ದಕ್ಷಿಣ ಆಫ್ರಿಕಾ
ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ಕೇಶವ್ ಮಹಾರಾಜ್(ನಾಯಕ), ಲುಂಗಿ ಎನ್‌ಗಿಡಿ, ಅನ್ರಿಕ್ ನೊರ್ಕಿಯಾ

ಟೀಂ ಇಂಡಿಯಾ
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜವೇಂದ್ರ ಚಾಹಲ್, ಅವೇಶ್ ಖಾನ್

Story first published: Sunday, June 19, 2022, 20:58 [IST]
Other articles published on Jun 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+