Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಎಷ್ಟು ರನ್‌ಗಳಿಸಲಿದೆ ಎಂದು ಭವಿಷ್ಯ ನುಡಿದ ಆಕಾಶ್ ಚೋಪ್ರ

Ind vs SA: Aakash Chopra predicted Team India 1st innings score

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಂಚೂರಿಯನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲಿ ಭಾರತೀಯ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿದೆ. ಮೊದಲ ದಿನದಾಟದ ಅಂತ್ಯದಲ್ಲಿ ಭಾರತ 3 ವಿಕೆಟ್ ಕಳೆದುಕೊಂಡು 272 ರನ್‌ಗಳಿಸಿತ್ತು. ಎರಡನೇ ದಿನವೂ ಭಾರತ ತನ್ನ ಬ್ಯಾಟಿಂಗ್ ಮುಂದುವರಿಸಲಿದ್ದು ದಕ್ಷಿಣ ಆಫ್ರಿಕಾದಲ್ಲಿ ಬೃಹತ್ ಮೊತ್ತಗಳಿಸುವ ವಿಶ್ವಾಸವನ್ನು ಮೂಡಿಸಿದೆ. ಕ್ರೀಸ್‌ನಲ್ಲಿ ಶತಕ ಸಿಡಿಸಿರುವ ಕೆಎಲ್ ರಾಹುಲ್ ಹಾಗೂ ಅಜಿಂಕ್ಯಾ ರಹಾನೆ ಇದ್ದು ಈ ಜೋಡಿಯಿಂದ ಮತ್ತಷ್ಟು ರನ್‌ಗಳ ಕೊಡುಗೆಯನ್ನು ನಿರೀಕ್ಷಿಸಲಾಗುತ್ತಿದೆ.

ಇನ್ನು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಮತ್ತಷ್ಟು ಬಿಗಿಹಿಡಿತವನ್ನು ಸಾಧಿಸುತ್ತಾ ಮುನ್ನುಗ್ಗಬೇಕಾದರೆ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಗಳಿಸುವ ರನ್ ಬಹಳ ಮುಖ್ಯವಾಗುತ್ತದೆ. ಹೀಗಾಗಿ ಎರಡನೇ ದಿನದಾಟದಲ್ಲಿ ಟೀಮ್ ಇಂಡಿಯಾ ಯಾವ ರೀತಿಯ ಪ್ರದರ್ಶನ ಮುಂದುವರಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಮೊದಲ ಇನ್ನಿಂಗ್ಸ್‌ನ್ಲಲಿ ಟೀಮ್ ಇಂಡಿಯಾ ಎಷ್ಟು ರನ್‌ಗಳಿಸಲಿದೆ ಎಂಬ ಬಗ್ಗೆ ಮಾತನಾಡಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಂಆತನಾಡಿರುವ ಆಕಾಶ್ ಚೋಪ್ರ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 350ಕ್ಕೂ ಅಧಿಕ ರನ್‌ಗಳಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಭಾರತೀಯ ಬ್ಯಾಟಿಂಗ್ ಪಡೆಯ ಪ್ರದರ್ಶನ ಅಮೋಘವಾಗಿದೆ ಎಂದಿದ್ದಾರೆ ಚೋಪ್ರ.

ಮುಂದುವರಿದು ಮಾತನಾಡಿದ ಚೋಪ್ರ ಈ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಕೂಡ ಅಡುತ್ತಿರುವುದರಿಂದಾಗಿ ಅಂತಿಮ ಹಂತದಲ್ಲಿ ಆರ್ ಅಶ್ವಿನ್ ಹಾಗೂ ಶಾರ್ದೂಲ್ ಠಾಕೂರ್ ಕೂಡ ಉತ್ತಮ ಮೊತ್ತವನ್ನು ಗಳಿಸಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇನ್ನು ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿರುವ ನಿರ್ಧಾರದ ಬಗ್ಗೆ ಮಾತನಾಡಿದ ಚೋಪ್ರ ಇದೊಂದು ಧೈರ್ಯಶಾಲಿ ನಡೆ ಎಂದಿದ್ದು ಇಂದು ತಂಡಕ್ಕೆ ಅನುಕೂಲವಾಗಬಹುದು ಎಂದು ಕೂಡ ಹೇಳಿದ್ದಾರೆ.

ಕಗಿಸೋ ರಬಾಡ ಎರಡು ವಿಕೆಟ್ ಪಡೆಯಲಿದ್ದಾರೆ ಎಂದ ಚೋಪ್ರ: ಇನ್ನು ದಕ್ಷಿಣ ಆಫ್ರಿಕಾ ತಂಡದ ಪ್ರಮುಖ ವೇಗದ ಬೌಲರ್ ಆಗಿರುವ ಕಗಿಸೋ ರಬಾಡ ಮೊದಲ ದಿನದಾಟದಲ್ಲಿ ನೀರಸ ಪ್ರದರ್ಶನ ನೀಡಿದ್ದು ಒಂದೂ ವಿಕೆಟ್ ಪಡೆಯಲು ವಿಫಲವಾಗಿದ್ದರೆ. ಆದರೆ ಎರಡನೇ ದಿನದಾಟದಲ್ಲಿ ಭಾರತದ ಎರಡು ವಿಕೆಟ್ ಕಗಿಸೋ ರಬಾಡ ಪಾಲಾಗಲಿದೆ ಎಂದು ಆಕಾಶ್ ಚೋಪ್ರ ಭವಿಷ್ಯ ನುಡಿದಿದ್ದಾರೆ.

ಭಾರತ ಆಡುವ ಬಳಗ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರಿಷಬ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಶ್ರೇಯಸ್ ಅಯ್ಯರ್, ಜಯಂತ್ ಯಾದವ್, ಹನುಮ ವಿಹಾರಿ, ಪ್ರಿಯಾಂಕ್ ಪಾಂಚಾಲ್, ಇಶಾಂತ್ ಶರ್ಮಾ

ದಕ್ಷಿಣ ಆಫ್ರಿಕಾ ಆಡುವ XI : ಡೀನ್ ಎಲ್ಗರ್ (ನಾಯಕ), ಏಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸಮೊದಲ ದಿನದ ಗೌರವ ಸಂಪಾದಿಸಿದ ಭಾರತ ನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್,ಲುಂಗಿ ಎನ್ಗಿಡಿ
ಬೆಂಚ್: ಡುವಾನ್ನೆ ಒಲಿವಿಯರ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂಡಾ ಮಗಾಲಾ, ಪ್ರೆನೆಲನ್ ಸುಬ್ರಾಯೆನ್, ಜಾರ್ಜ್ ಲಿಂಡೆ, ಕೈಲ್ ವೆರ್ರೆನ್, ಸರೆಲ್ ಎರ್ವೀ, ರಿಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

Story first published: Monday, December 27, 2021, 13:22 [IST]
Other articles published on Dec 27, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+