ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಫ್ರಿಕಾ: ಅಗ್ನಿ ಪರೀಕ್ಷೆಗೆ ಸಿದ್ಧವಾಗಿದ್ದಾರೆ ಟೀಮ್ ಇಂಡಿಯಾದ ಮೂವರು ಆಟಗಾರು

Ind vs SA: Big Challenge for These 3 Indian cricketers in T20 series against South Africa ahead of T20 World Cup

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಬುಧವಾರದಿಂದ ಆರಂಭವಾಗಲಿದೆ. ಟಿ20 ವಿಶ್ವಕಪ್‌ಗೆ ಮುನ್ನ ಭಾರತ ಭಾಗಿಯಾಗುತ್ತಿರುವ ಅಂತಿಮ ಟಿ20 ಸರಣಿ ಇದಾಗಿದ್ದು ಈ ಸರಣಿಯಲ್ಲಿ ಟೀಮ್ ಇಂಡಿಯಾ ತನ್ನ ಅಂತಿಮ ಸಿದ್ಧತೆ ಮಾಡಿಕೊಳ್ಳಲಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಗೆಲುವು ಸಾಧಿಸಿದ್ದರೂ ಕೆಲ ವಿಭಾಗಗಳಲ್ಲಿ ಹುಳುಕು ಸ್ಪಷ್ಟವಾಘಿದ್ದು ಅದನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸರಣಿ ನಿರ್ಣಾಯಕವಾಗಿರಲಿದೆ.

ಕಳೆದ ಏಷ್ಯಾಕಪ್‌ನಲ್ಲಿ ನೀರಸ ಪ್ರದರ್ಶನ ನೀಡಿರುವ ಭಾರತ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಆ ಮಹತ್ವದ ಟೂರ್ನಿಯಲ್ಲಿ ಮಾಡಿದ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಭಾರತದ ಮೂವರು ಆಟಗಾರರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಯಾರು ಆ ಮೂವರು ಆ ಆಟಗಾರರು ಮುಂದೆ ಓದಿ..

ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್

ಯುವ ವೇಗಿ ಅರ್ಷದೀಪ್ ಸಿಂಗ್

ಯುವ ವೇಗಿ ಅರ್ಷದೀಪ್ ಸಿಂಗ್

ಭಾರತದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ವಿಶ್ವಕಪ್‌ನ ತಂಡಕ್ಕೆ ಆಯ್ಕೆಯಾಘಿದ್ದರೂ ಕಳೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾಗುಯಾಗಿರಲಿಲ್ಲ. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಎನ್‌ಸಿಎನಲ್ಲಿ ಫಿಟ್‌ನೆಸ್ ಕುರಿತಾದ ಚಟುವಟಿಯಲ್ಲಿ ಭಾಗಿಯಾಗಿದ್ದು ಮಹತ್ವದ ಟೂರ್ನಿಗೆ ಸಜ್ಜಾಗಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಆರ್ಷದೀಪ್ ಸಿಂಗ್ ಕಣಕ್ಕಿಳಿಯಲಿದ್ದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಚಿತ್ತ ಅರ್ಚದೀಪ್ ಮೇಲಿದೆ. ಭಾರತದ ವೇಗದ ಬೌಲಿಂಗ್ ವಿಭಾಗ ಮಂಕಾದಂತೆ ಕಂಡು ಬಂದಿದ್ದು ಅದರಲ್ಲೂ ಡೆತ್ ಓವರ್‌ನಲ್ಲಿ ಭಾರತ ತಂಡ ಪ್ರಮುಖ ಆಟಗಾರರಾದ ಹರ್ಷಲ್ ಪಟೇಲ್ ಹಾಗೂ ಭುವನೇಶ್ವರಗ್ ಕುಮಾರ್ ನೀಡಿರುವ ಪ್ರದರ್ಶನ ನಿರಾಸೆ ಮೂಡಿಸಿದೆ. ಹೀಗಾಗಿ ಯುವ ವೇಗಿ ಅರ್ಷದೀಪ್ ಸಿಂಗ್ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿರುವ ಕಾರಣದಿಂದಾಗಿ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಮಹತ್ವ ಪಡೆದುಕೊಳ್ಳಲಿದೆ.

ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್

ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್

ವಿಕೆಟ್ ಕೀಪರ್ ಬ್ಯಾಟರ್ ವಿಚಾರವಾಗಿ ಟೀಮ್ ಇಂಡಿಯಾದಲ್ಲಿ ಗೊಂದಲ ಮುಂದುವರಿದಿದೆ. ಸದ್ಯಕ್ಕೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಈ ಸ್ಥಾನಕ್ಕೆ ರಿಷಭ್ ಪಂತ್ ಬದಲಿಗೆ ದಿನೇಶ್ ಕಾರ್ತಿಕ್ ಅವರನ್ನೇ ಆಯ್ಕೆ ಮಾಡಿಕೊಂಡು ಬರುತ್ತಿದೆ. ಆದರೆ ಇದೇ ನಿರ್ಧಾರಕ್ಕೆ ಅಂಟಿಕೊಳ್ಳಲಿದೆ ಎಂಬುದನ್ನು ಖಚಿತಪಡಿಸಲು ಸಾಧ್ಯವಿಲ್ಲ. ಟಿ20 ವಿಶ್ವಕಪ್‌ಗೆ ಮುನ್ನ ನಾಯಕ ರೋಹಿತ್ ಶರ್ಮಾ ಯುವ ಆಟಗಾರ ರಿಷಭ್ ಪಂತ್‌ಗೆ ಕೂಡ ಅಗತ್ಯವಾದ ಅಭ್ಯಾಸದ ಪಂದ್ಯಗಳನ್ನು ನೀಡುವ ಜವಾಬ್ಧಾರಿಯಿರುವ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವಕಾಶ ಪಡೆಯುವ ಸಾಧ್ಯತೆಯೂ ಇದೆ. ಈ ಸಂದರ್ಭದಲ್ಲಿ ಪಂತ್ ಅವಕಾಶವನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವ ಅಗತ್ಯವಿದೆ. ಇಲ್ಲವಾದರೆ ಮುಂಬರುವ ವಿಶ್ವಕಪ್‌ನಲ್ಲಿ ಬೆಂಚ್ ಕಾಯುವ ಅನಿವಾರ್ಯತೆ ಉಂಟಾಗಬಹುದು.

ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್

ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಚಾಹಲ್ ಪ್ರದರ್ಶನ ಕಳಗುಂದಿದ್ದು ಹಿಂದಿನಂತೆ ಪರಿಣಾಮಕಾರಿಯಾಗಿಲ್ಲ. ಆದರೆ ಮತ್ತೋರ್ವ ಸ್ಪಿನ್ನರ್ ಅಕ್ಷರ್ ಪಟೇಲ್ ಟೀಮ್ ಇಂಡಿಯಾದಲ್ಲಿ ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ವೇಗಿಗಳು ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಆಡುವ ಬಳಗದಲ್ಲಿ ಓರ್ವ ಸ್ಪಿನ್ನರ್‌ಗೆ ಮಾತ್ರವೇ ಅವಕಾಶ ದೊರೆಯುವ ಸಾಧ್ಯತೆಯಿದೆ. ಹಾಗಾಗಿ ಯುಜುವೇಂದ್ರ ಚಾಹಲ್ ಈ ಸರಣಿಯಲ್ಲಿ ಮುಂಚಿ ಆಡುವ ಬಳಗದಲ್ಲಿ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಅನಿವಾರ್ಯತೆಯಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

Story first published: Tuesday, September 27, 2022, 15:45 [IST]
Other articles published on Sep 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X