ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಇಂದಿನಿಂದ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಈಗಾಗಲೇ ಮುಕ್ತಾಯವಾಗಿರುವ ಟೆಸ್ಟ್ ಸರಣಿಯಲ್ಲಿ ಭಾರತ ನಿರಾಸೆಯನ್ನು ಅನುಭವಿಸಿತ್ತು. ಸರಣಿ 2-1 ಅಂತರದಿಂದ ಆತಿಥೇಯ ದಕ್ಷಿಣ ಆಫ್ರಿಕಾದ ಪಾಲಾಗಿದೆ. ಹೀಗಾಗಿ ಸೀಮಿತ ಓವರ್ಗಳ ಮಾದರಿಯ ಸರಣಿಯಲ್ಲಾದರೂ ಜಯ ಗಳಿಸಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಕೆಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾ ಕಣಕ್ಕಿಳಿಯಲು ಸಜ್ಜಾಗಿದೆ.
ಕೆಎಲ್ ರಾಹು್ ನಾಯಕತ್ವ: ಇನ್ನು ಈ ಸರಣಿಗೆ ರೋಹಿತ್ ಶರ್ಮಾ ಅಲಭ್ಯವಾಗಿದ್ದಾರೆ. ಫಿಟ್ನೆಸ್ ಕಾರಣದಿಂದಾಗಿ ಏಕದಿನ ಸರಣಿಯಲ್ಲಿಯೂ ರೋಹಿತ್ ಶರ್ಮಾ ಭಾಗವಹಿಸುತ್ತಿಲ್ಲ. ಹೀಗಾಗಿ ಕೆಎಲ್ ರಾಹುಲ್ಗೆ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ. ಇನ್ನು ಉಪ ನಾಯಕನಾಗಿ ಜಸ್ಪ್ರೀತ್ ಬೂಮ್ರಾ ಭಡ್ತಿ ಪಡೆದುಕೊಂಡಿದ್ದಾರೆ.
ನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್ಮನ್ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿ
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿಲ್ಲದಿದ್ದರೂ ಬ್ಯಾಟರ್ ಆಗಿ ತಮ್ಮ ಕೊಡುಗೆಯನ್ನು ನೀಡಲಿದ್ದಾರೆ. ಇನ್ನು ಇತ್ತೀಚೆಗಷ್ಟೇ ಅಂತ್ಯವಾದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಇದೇ ಫಾರ್ಮ್ಅನ್ನು ಏಕದಿನ ಸರಣಿಯಲ್ಲಿಯೂ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಕೊನೆಯ ಬಾರಿಗೆ ಏಕದಿನ ಸರಣಿಯಲ್ಲಿ ಆಡಿದ್ದು ಕಳೆದ ಮಾರ್ಚ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ. ಇದೀಗ ದಕ್ಷಿಣ ಆಪ್ರಿಕಾ ನೆಲದಲ್ಲಿ ಕೊಹ್ಲಿ ಬ್ಯಾಟಿಂಗ್ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.
ಇನ್ನು ಈ ಏಕದಿನ ಸರಣಿ ಮೂಲಕ ಭಾರತ ತಂಡ 2023ರ ಏಕದಿನ ವಿಶ್ವಕಪ್ಗೆ ಸಿದ್ಧತೆಯನ್ನು ಆರಂಭಿಸಲಿದೆ. ಹೊಸತನದೊಂದಿಗೆ ಭಾರತೀಯ ತಂಡ ತನ್ನ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸುವ ಉತ್ಸಾಹದಲ್ಲಿದೆ. ಈ ಸರಣಿಯ ಮೂಲಕ ಈ ವರ್ಷವನ್ನು ಅದ್ಭುತವಾಗಿ ಆರಂಭಿಸುವ ಲೆಕ್ಕಾಚಾರದಲ್ಲಿದೆ ಭಾರತ ತಂಡ.
ಇನ್ನು ದಕ್ಷಿಣ ಆಫ್ರಿಕಾ ತಂಡವನ್ನು ಟೆಂಬಾ ಬವುಮಾ ಏಕದಿನ ಮಾದರಿಯಲ್ಲಿ ಮುನ್ನಡೆಸಲಿದ್ದಾರೆ. ಟೆಸ್ಟ್ ಸರಣಿಯಲ್ಲಿ ಕೆಲ ಅದ್ಭುತ ಇನ್ನಿಂಗ್ಸ್ ಆಡಿರುವ ಬವುಮಾ ಏಕದಿನ ಸರಣಿಯಲ್ಲಿಯೂ ಈ ಫಾರ್ಮ್ ಮುಂದುವರಿಸುವ ಆತ್ಮವಿಶ್ವಾಸವನ್ನು ಹೊಂದಿದ್ದಾರೆ. ಅಲ್ಲದೆ ಭಾರತ ವಿರುದ್ಧಧ ಟೆಸ್ಟ್ ಸರಣಿಯ ಮೊದಲ ಪಂದ್ಯದ ಬಳಿಕ ಟೆಸ್ಟ್ ಮಾದರಿಗೆ ವಿದಾಯ ಹೇಳಿ ಕ್ವಿಂಟನ್ ಡಿಕಾಕ್ ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಿದ್ಧವಾಗಿದ್ದಾರೆ. ಇನ್ನು ಟೆಸ್ಟ್ ಸರಣಿಯಲ್ಲಿ ಭಾರತದ ವಿರುದ್ಧ ಅಬ್ಬರದ ಪ್ರದರ್ಶನ ನೀಡಿ ಆಘಾತ ನೀಡಿದ್ದ ವೇಗಿ ಕಗಿಸೋ ರಬಾಡ ಈ ಸರಣಿಯಿಂದ ಹೊರಗುಳಿದಿದ್ದಾರೆ. ಒತ್ತಡವನ್ನು ಕಡಿಮೆ ಮಾಡಲು ದಕ್ಷಿಣ ಆಫ್ರಿಕಾ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ.
ಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿ
ಭಾರತ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ, ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್, ಯುಜ್ವೇಂದ್ರ ಚಾಹಲ್ ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಎಂಡಿ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.
ದಕ್ಷಿಣ ಆಫ್ರಿಕಾದ ಏಕದಿನ ತಂಡ: ಟೆಂಬಾ ಬವುಮಾ (ನಾಯಕ), ಕೇಶವ್ ಮಹಾರಾಜ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಜುಬೇರ್ ಹಮ್ಜಾ, ಮಾರ್ಕೊ ಜಾನ್ಸೆನ್, ಜನೆಮನ್ ಮಲನ್, ಸಿಸಂಡಾ ಮಾಗಲಾ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ವೇಯ್ನ್ ಪಾರ್ನೆಲ್, ಪ್ರೀ ಆಂಡಿಲ್ ಫೀಲ್ಯೂಕ್, ಡಿವಾಹ್ಲಿನ್ವೇ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ.