ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

4 ಬದಲಾವಣೆ ಮಾಡಿದರೂ ಈ ಆಟಗಾರನಿಗಿಲ್ಲ ಅವಕಾಶ: ಕೆಎಲ್ ರಾಹುಲ್ ಸ್ವಾರ್ಥಿ ಎಂದ ನೆಟ್ಟಿಗರು

Ind vs SA: cricket fans slam Team India skipper KL Rahul said he is selfish

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಕೇಪ್‌ಟೌನ್‌ನಲ್ಲಿ ನಡೆಯುತ್ತಿದೆ. ಈ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಭಾರತ ಸರಣಿಯನ್ನು ಈಗಾಗಲೇ ಆತಿಥೇಯರ ವಶಕ್ಕೆ ಒಪ್ಪಿಸಿದೆ. ಅಂತಿಮ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವೈಟ್‌ವಾಶ್ ಅವಮಾನದಿಂದ ಪಾರಾಗಲಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತ ಬರೊಬ್ಬರಿ ನಾಲ್ಕು ಬದಲಾವಣೆಯೊಂದಿಗೆ ಕಣಕ್ಕಿಳಿದಿತ್ತು. ಆದರೆ ಈ ನಾಲ್ಕು ಬದಲಾವನೆಯ ಹೊರತಾಗಿಯೂ ಓರ್ವ ಆಟಗಾರನಿಗೆ ಅವಕಾಶ ನಿಡದಿರುವ ಬಗ್ಗೆ ನೆಟ್ಟಿಗರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಐಪಿಎಲ್ 2021 ಆವರತ್ತಿಯ ಆರೆಂಜ್ ಟ್ರೋಫಿ ವಿಜೇತ ಆಟಗಾರ, ದೇಶೀಯ ಕ್ರಿಕೆಟ್ ಋತುವಿನಲ್ಲಿಯೂ ಅಮೋಘ ಪ್ರದರ್ಶನ ನೀಡಿದ ಋತುರಾಜ್ ಗಾಯಕ್ವಾಡ್ ಮತ್ತೊಮದು ಪಂದ್ಯದಲ್ಲಿಯೂ ಅವಕಾಶದಿಂದ ವಂಚಿತವಾಗಿದ್ದಾರೆ. ಸತತ ಎರಡನೇ ಸೀಮಿತ ಓವರ್‌ಗಳ ಸರಣಿಯಲ್ಲಿಯೂ ಋತುರಾಜ್ ಗಾಯಕ್ವಾಡ್ ಒಂದೂ ಅವಕಾಶ ಪಡೆಯುವಲ್ಲಿ ಸಫಲವಾಗಲಿಲ್ಲ.

ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇವರೇ, ಇದಕ್ಕೆಲ್ಲಾ ವಿರಾಟ್ ಭಯ ಪಡಬಾರದು: ಮಾಜಿ ಕ್ರಿಕೆಟಿಗ!ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇವರೇ, ಇದಕ್ಕೆಲ್ಲಾ ವಿರಾಟ್ ಭಯ ಪಡಬಾರದು: ಮಾಜಿ ಕ್ರಿಕೆಟಿಗ!

ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಲ್ಕು ಬದಲಾವಣೆ ಮಾಡಿಕೊಂಡಿದೆ. ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ಪ್ರಸಿದ್ಧ್ ಕೃಷ್ಣ ಹಾಗೂ ದೀಪಕ್ ಚಾಹರ್ ಈ ಪಂದ್ಯದಲ್ಲಿ ವೆಂಕಟೇಶ್ ಐಯ್ಯರ್, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್ ಹಾಗೂ ಶಾರ್ದೂಲ್ ಠಾಕೂರ್ ಸ್ಥಾನದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಋತುರಾಜ್ ಗಾಯಕ್ವಾಡ್‌ಗೆ ಅವಕಾಶ ನೀಡದಿರುವ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಅಸಮಾಧಾನಹೊಂದಿದ್ದಾರೆ. ಈ ವಿಚಾರವಾಗಿ ಬಿಸಿಸಿಐ ಹಾಗು ತಂಡದ ನಾಯಕ ಕೆಎಲ್ ರಾಹುಲ್ ಅವರನ್ನು ನೆಟ್ಟಿಗರು ನೇರವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಸ್ವಾರ್ಥದ ನಿರ್ಧಾರ ಎಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.

ಭಾರತ vs ದ.ಆಫ್ರಿಕಾ 3ನೇ ಏಕದಿನ: ಕಳಪೆ ಆಟವಾಡಿದ್ದ ಈ ಮೂವರು ಟೀಮ್ ಇಂಡಿಯಾದಿಂದ ಔಟ್!ಭಾರತ vs ದ.ಆಫ್ರಿಕಾ 3ನೇ ಏಕದಿನ: ಕಳಪೆ ಆಟವಾಡಿದ್ದ ಈ ಮೂವರು ಟೀಮ್ ಇಂಡಿಯಾದಿಂದ ಔಟ್!

ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಜಯಂತ್ ಯಾದವ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್
ಬೆಂಚ್: ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ವೆಂಕಟೇಶ್ ಅಯ್ಯರ್, ಭುವನೇಶ್ವರ್ ಕುಮಾರ್

ಸರಣಿ ಸೋತ ಬಳಿಕ Rahul ಹೇಳಿದ್ದೇನು | Oneindia Kannada

ದಕ್ಷಿಣ ಆಫ್ರಿಕಾ ಆಡುವ ಬಳಗ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಡ್ವೈನ್ ಪ್ರಿಟೋರಿಯಸ್, ಸಿಸಂದಾ ಮಗಾಲಾ
ಬೆಂಚ್: ವೇಯ್ನ್ ಪಾರ್ನೆಲ್, ಜಾರ್ಜ್ ಲಿಂಡೆ, ಕೈಲ್ ವೆರ್ರೆನ್ನೆ, ಜುಬೇರ್ ಹಮ್ಜಾ, ಮಾರ್ಕೊ ಜಾನ್ಸೆನ್, ತಬ್ರೈಜ್ ಶಮ್ಸಿ

Story first published: Monday, January 24, 2022, 10:22 [IST]
Other articles published on Jan 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X