ಕನ್ನಡಿಗ ಕೆಎಲ್ ರಾಹುಲ್ ಅದ್ಭುತ ಬ್ಯಾಟಿಂಗ್‌ನ ರಹಸ್ಯವನ್ನು ಬಿಚ್ಚಿಟ್ಟ ದಿನೇಶ್ ಕಾರ್ತಿಕ್

ಸೆಂಚೂರಿಯನ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮೊದಲ ದಿನದಾಟದಲ್ಲಿ ಅಧದಬುತ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾದ ಆರಂಬಿಕ ಆಟಗಾರ ಕೆಎಲ್ ರಾಹುಲ್ ಮೊದಲ ದಿನ ಅಜೇಯ 122 ರನ್‌ಗಳನ್ನು ಬಾರಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಕೆಎಲ್ ರಾಹುಲ್ ಅವರ ಸೊಗಸಾದ ಇನ್ನಿಂಗ್ಸ್‌ನಿಂದಾಗಿ ಭಾರತ ಪಂದ್ಯದಲ್ಲಿ ಸಂಪೂರ್ಣ ಹಿಡಿತವನ್ನು ಸಾಧಿಸಿದೆ. ಮೊದಲ ದಿನ 248 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 122 ರನ್‌ಗಳನ್ನು ಗಳಿಸಿದ್ದಾರೆ.
ಈ ಶತಕದೊಂದಿಗೆ ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾದಲ್ಲಿ ಭಾರತದ ಪರವಾಗಿ ಶತಕ ಸಿಡಿಸಿದ ಎರಡನೇ ಭಾರತೀಯ ಆರಂಭಿಕ ಆಟಗಾರ ಎನಿಸಿದ್ದಾರೆ. ಇನ್ನು ಕೆಎಲ್ ರಾಹುಲ್ ಈ ಸರಣಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕನಾಗಿಯೂ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಮೊದಲ ವಿಕೆಟ್‌ಗೆ ಮಯಾಂಕ್ ಅಗರ್ವಾಲ್ ಜೊತೆಗೆ ಸೇರಿ ಭರ್ಜರಿ 117 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿದ್ದರು ಕೆಎಲ್ ರಾಹುಲ್.

ಕೆಎಲ್ ರಾಹುಲ್ ಬ್ಯಾಟಿಂಗ್ ಯಶಸ್ಸಿನ ಬಗ್ಗೆ ದಿನೇಶ್ ಕಾರ್ತಿಕ್ ಮಾತು
ಇನ್ನು ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಸಾಧಿಸುತ್ತಿರುವ ಯಶಸ್ಸಿನ ಬಗ್ಗೆ ಹಿರಿಯು ಕ್ರಿಕೆಟಿಗ ದಿನೇಶ್ ಕಾರ್ತಿಕ್ ಮಾತನಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಅವರು ಕೆಲ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ ಎಂದು ಡಿಕೆ ಹೇಳಿದ್ದಾರೆ. ಈ ಬದಲಾವಣೆಯಿಂದಾಗಿ ಕೆಎಲ್ ರಾಹುಲ್ ಯಶಸ್ಸು ಸಾಧಿಸಿದ್ದಾರೆ ಎಂದಿದ್ದಾರೆ ಹಿರಿಯ ಕ್ರಿಕೆಟಿಗ ದಿನೇಶ್ ಕಾರ್ತಿಕ್.

ಕೆಎಲ್ ಮಾಡುತ್ತಿದ್ದ ಎಡವಟ್ಟುಗಳು!
"ಕೆಎಲ್ ರಾಹುಲ್ ದೇಶೀಯ ಕ್ರಿಕೆಟ್‌ನಲ್ಲಿ ಆಡುವಾಗ ಅವರು ಕವರ್ ಹಾಗೂ ಲಾಂಗ್-ಆನ್ ಮೇಲೆ ವೇಗದ ಬೌಲರ್‌ಗಳಿಗೆ ಸಾಕಷ್ಟು ಸಿಕ್ಸರ್‌ಗಳನ್ನು ಹೊಡೆಯುತ್ತಾರೆ. ಅದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೆಸ್ಟ್ ಆಡುವಾಗಲೂ ಅದೇ ಅಭ್ಯಾಸವನ್ನು ಮುಂದುವರಿಸಿದ್ದರು. ಆದರೆ 140, 145+ ವೇಗದಲ್ಲಿ ಬೌಲಿಂಗ್ ಮಾಡುವ ವೇಗದ ಬೌಲರ್‌ಗಳಿಗೆ ಅದನ್ನು ನಿರಂತರವಾಗಿ ಮಾಡುವುದು ಅಷ್ಟು ಸುಲಭವಲ್ಲ. ಆಗ ಎಡವಿ ವಿಕೆಟ್ ಕಳೆದುಕೊಳ್ಳಬೇಕಾಗುತ್ತದೆ. ಆರಂಭಿಕನಾಗಿದ್ದು ಕೆಟ್ಟ ಸಮಯದಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಕಳೆದುಕೊಳ್ಳುವುದು ಚೆನ್ನಾಗಿ ಕಾಣಿಸುವುದಿಲ್ಲ" ಎಂದು ಕೆಎಲ್ ರಾಹುಲ್ ಬ್ಯಾಟಿಂಗ್ ಬಗ್ಗೆ ದಿನೇಶ್ ಕಾರ್ತಿಕ್ ಮಾತನಾಡುತ್ತಾ ಹೇಳಿದ್ದಾರೆ.

ಕೆಲ ಬದಲಾವಣೆ ಮಾಡಿಕೊಂಡಿದ್ದಾರೆ
ಈ ಸಂದರ್ಭದಲ್ಲಿ ದಿನೇಶ್ ಕಾರ್ತಿಕ್ ಆರಂಭಿಕ ಆಟಗಾರ ಕೆಎಲ್ ರಾಹುಲ್ ತಾಂತ್ರಿಕವಾಗಿ ಕೆಲ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ ಎಂಬ ಸಂಗತಿಯನ್ನು ಹೇಳಿದ್ದಾರೆ. "ಕೆಎಲ್ ರಾಹುಲ್ ತಾನು ನಿಲ್ಲುವ ರೀತಿ ಕೈಯ ಸ್ಥಾನ, ಸೇರಿದಂತೆ ಕೆಲ ತಾಂತ್ರಿಕ ಬದಲಾವಣೆಯನ್ನು ಮಾಡಿಕೊಂಡಿದ್ದಾರೆ. ಈ ಸಣ್ಣ ವಿಚಾರಗಳ ಬಗ್ಗೆ ರಾಹುಲ್ ಸಾಕಷ್ಟು ಕೆಲಸ ಮಾಡಿದ್ದಾರೆ. ಅದರಿಂದಾಗಿ ಅವರು ಹೆಚ್ಚಿನ ಆತ್ಮವಿಶ್ವಾಸವನ್ನು ಕೂಡ ಪಡೆದಿದ್ದಾರೆ. ಎರಡನೇ ಹೊಸ ಚೆಂಡನ್ನು ಅವರು ಎದುರಿಸಿದ ರೀತಿ ನಿಜಕ್ಕೂ ಅದ್ಭುತವಾಗಿತ್ತು" ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಮೊದಲ ದಿನದ ಪ್ರದರ್ಶನ
ಕೆಎಲ್ ರಾಹುಲ್ ಅವರ ಅಜೇಯ ಶತಕದಿಂದಾಗಿ ಭಾರತ ಮೊದಲ ದಿನದಾಟದಲ್ಲಿ 272 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದೆ. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೂಡ ಲುಂಗಿ ಎನ್‌ಗಿಡಿಗೆ ವಿಕೆಟ್ ಒಪ್ಪಿಸುವ ಮುನ್ನ 60 ರನ್‌ಗಳ ಕೊಡುಗೆಯನ್ನು ನೀಡುವ ಮೂಲಕ ಮಿಂಚಿದ್ದಾರೆ.ಚೇತೇಶ್ವರ್ ಪೂಜಾರ ಶೂನ್ಯಕ್ಕೆ ಔಟಾಗಿದ್ದರೆ ವಿರಾಟ್ ಕೊಹ್ಲಿ 35 ರನ್‌ಗಳನ್ನು ಮಾಡಲಷ್ಟೇ ಶಕ್ತವಾದರು. ಈ ಇಬ್ಬರು ಕೂಡ ಲುಂಗಿ ಎನ್‌ಗಿಡಿಗೆ ವಿಕೆಟ್ ಒಪ್ಪಿಸಿದ್ದರು. ಸದ್ಯ ಅನುಭವವಿ ಆಟಗಾರ ಅಜಿಂಕ್ಯಾ ರಹಾನೆ 40 ರನ್‌ಗಳಿಸಿ ಕೆಎಲ್ ರಾಹುಲ್ ಜೊತೆಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications