ಮಂಗಳವಾರ ರಾತ್ರಿ ನಡೆದ ಟಿ20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ನಿರಾಸೆ ಕಂಡಿತು. ಮಳೆಯ ಪರಿಣಾಮ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 19.3 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್ ಗಳಿಸಿತು. ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ ಪಡಿಸಿತು.
ನಂತರ ದಕ್ಷಿಣ ಆಫ್ರಿಕಾ ಗೆಲುವಿಗೆ 15 ಓವರ್‌ಗಳಲ್ಲಿ 152 ರನ್‌ಗಳ ಗುರಿಯನ್ನು ನೀಡಲಾಯಿತು. ಅದನ್ನು ಆತಿಥೇಯ ತಂಡ ಇನ್ನು 7 ಎಸೆತಗಳು ಬಾಕಿ ಇರುವಾಗಲೇ ಜಯ ಸಾಧಿಸಿತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಪ್ರತಿ ವಿಭಾಗದಲ್ಲೂ ಟೀಮ್ ಇಂಡಿಯಾಕ್ಕಿಂತ ಬಲಾಢ್ಯವಾಗಿ ಕಂಡು ಬಂದಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿಗೆ ಕಾರಣವಾದ ಅಂಶಗಳು ಇಲ್ಲಿವೆ.

1- ನಿಧಾನಗತಿಯ ಪಿಚ್: ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದಾಗ ಪಿಚ್ ಸ್ವಲ್ಪ ನಿಧಾನವಾಗಿ ಕಂಡು ಬಂದಿತು. ಇಂತಹ ಪರಿಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾದ ಸ್ಪಿನ್ನರ್‌ಗಳಿಗೆ ಉತ್ತಮ ಸಹಾಯ ಸಿಕ್ಕಿತು. ತಬ್ರೇಜ್ ಶಂಶಿ ನಾಲ್ಕು ಓವರ್‌ಗಳಲ್ಲಿ ಕೇವಲ 18 ರನ್ ನೀಡಿ ಒಂದು ವಿಕೆಟ್ ಪಡೆದರಿ.
ಈ ಪಿಚ್‌ನಲ್ಲಿ ಬೌಲಿಂಗ್ ಮಾಡಿದ ಏಡನ್ ಮಾರ್ಕ್ರಂ ಕೂಡ ಒಂದು ವಿಕೆಟ್ ಪಡೆದರು. ಪಂದ್ಯದ ನಂತರ ದಕ್ಷಿಣ ಆಫ್ರಿಕಾದ ನಾಯಕ ಆಡಮ್ ಮಾರ್ಕ್ರಾಮ್ ಅವರು ಆರಂಭದಲ್ಲಿ ಪಿಚ್ ನಿಧಾನವಾಗಿದ್ದರು, ಇದು ಅವರಿಗೆ ಅನುಕೂಲಕರವಾಗಿದೆ ಎಂದು ಹೇಳಿದರು.
2- ಮಳೆ ಮತ್ತು ಒದ್ದೆಯಾದ ಅಂಗಳ: ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆರಂಭಿಸುವ ಮೊದಲು ಪಂದ್ಯದಲ್ಲಿ ಸಾಕಷ್ಟು ಮಳೆಯಾಗಿತ್ತು. ಇದರಿಂದಾಗಿ ಔಟ್ ಫೀಲ್ಡ್ ಒದ್ದೆಯಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಎರಡನೇ ಇನ್ನಿಂಗ್ಸ್ ನಲ್ಲೂ ಚೆಂಡು ಒದ್ದೆಯಾಗಿತ್ತು. ಇದರಿಂದಾಗಿ ಭಾರತದ ಬೌಲರ್‌ಗಳಿಗೆ ಹೆಚ್ಚಿನ ಸಹಾಯ ಸಿಗಲಿಲ್ಲ. ಚೆಂಡಿನ ಮೇಲಿನ ಹಿಡಿತದ ಕೊರತೆಯಿಂದಾಗಿ ಭಾರತೀಯ ಬೌಲರ್‌ಗಳು ಪಂದ್ಯದಲ್ಲಿ ಪರಿಣಾಮ ಬೀರಲಿಲ್ಲ. ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ತಂಡಕ್ಕೂ ಲಾಭವಾಯಿತು.

3- ಕಳಪೆ ಆರಂಭ: ಈ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಗಳು ಖಾತೆ ತೆರೆಯದೆ ಪೆವಿಲಿಯನ್ ಗೆ ಮರಳಿದರು. ಪಂದ್ಯದ ಮೂರನೇ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಮಾರ್ಕೊ ಯಾನ್ಸಿನ್ ಔಟ್ ಮಾಡಿದರು. ಮತ್ತು ನಂತರದ ಓವರ್‌ನಲ್ಲಿ ವಿಲಿಯಮ್ಸ್ ಶುಭಮನ್ ಗಿಲ್ ಅವರ ವಿಕೆಟ್ ಪಡೆದರು. ಈ ಕಳಪೆ ಆರಂಭದಿಂದಾಗಿ ಭಾರತ ಸ್ಕೋರ್ ಗಳಿಸಲು ಸಾಧ್ಯವಾಗಲಿಲ್ಲ.
4- ಆತಿಥೇಯರ ಯೋಜನಾ ಬದ್ಧ ಆಟ: 15 ಓವರ್‌ಗಳಲ್ಲಿ 152 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಅಬ್ಬರಿಸಿತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎಂದಿಗೂ ಒತ್ತಡಕ್ಕೆ ಒಳಗಾಗಲಿಲ್ಲ. ಆಫ್ರಿಕಾ ಬ್ಯಾಟ್ಸ್‌ಮನ್‌ಗಳು ಅಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಭಾರತೀಯ ಬೌಲರ್‌ಗಳ ಮೇಲೆ ಒತ್ತಡ ಹೇರುತ್ತಲೇ ಸಾಗಿದರು.
ದಕ್ಷಿಣ ಆಫ್ರಿಕಾದ ಪ್ರತಿಯೊಬ್ಬ ಬ್ಯಾಟ್ಸ್‌ಮನ್‌ಗಳು ಬಂದ ತಕ್ಷಣ ಬ್ಯಾಟ್ ದೊಡ್ಡ ಹೊಡೆತ ಬಾರಿಸಿ ರನ್ ರೇಟ್ ಹಿಗ್ಗಿಸುತ್ತಲೇ ಸಾಗಿದರು. ಇದರಿಂದಾಗಿ ರನ್ ರೇಟ್ ವಿಚಾರದಲ್ಲಿ ತಂಡದ ಮೇಲೆ ಯಾವುದೇ ಒತ್ತಡ ಬೀಳಲಿಲ್ಲ. ಪರಿಣಾಮ ದಕ್ಷಿಣ ಆಫ್ರಿಕ ಸುಲಭವಾಗಿ ಪಂದ್ಯ ಗೆದ್ದುಕೊಂಡಿತು.