"ಗೆಲ್ಲುವುದಿಲ್ಲ ಎಂದು ಮೊದಲೇ ನಿರ್ಧರಿಸಿದಂತಿತ್ತು": ಭಾರತದ ರಣತಂತ್ರವನ್ನು ಟೀಕಿಸಿದ ಗವಾಸ್ಕರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿ ಅಂತ್ಯವಾಗಿದೆ. ಅಂತಿಮ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡಕ್ಕೆ 7 ವಿಕೆಟ್‌ಗಳ ಅಂತರದಿಂದ ಶರಣಾಗುವ ಮೂಲಕ ಸರಣಿಯನ್ನು 1-2 ಅಂತರದಿಂದ ಎದುರಾಳಿಗೆ ಬಿಟ್ಟುಕೊಟ್ಟಿದೆ. ಇನ್ನು ಈ ಸೋಲಿನ ಬಗ್ಗೆ ಈಗ ಸಾಕಷ್ಟು ಚರ್ಚೆಗಳು ವಿಮರ್ಶೆಗಳು ನಡೆಯುತ್ತಿದೆ. ನ್ಯೂಲ್ಯಾಂಡ್ಸ್‌ನಲ್ಲಿ ನಡೆದ ಅಂತಿಮ ಟೆಸ್ಟ್‌ನಲ್ಲಿ ಭಾರತ ಸೋಲು ಅನುಭವಿಸಿದ ಬಳಿಕ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ. ಈ ಪಂದ್ಯದಲ್ಲಿ ನಾಲ್ಕನೇ ದಿನದಾಟದಲ್ಲಿ ಭಾರತದ ರಣತಂತ್ರದ ಬಗ್ಗೆ ಗವಾಸ್ಕರ್ ಟೀಕಿಸಿದ್ದಾರೆ.
ನಾಲ್ಕನೇ ದಿನ ಭೋಜನವಿರಾಮದ ವೇಳೆಗೆ ದಕ್ಷಿಣ ಆಫ್ರಿಕಾ ತಂಡದ ಗೆಲುವಿಗೆ 41 ರನ್‌ಗಳ ಅಗತ್ಯವಿತ್ತು. ಈ ಮೊತ್ತವನ್ನು ದಕ್ಷಿಣ ಆಪ್ರಿಕಾ ಭೋಜನವಿರಾಮದ ಬಳಿಕ ಕೇವಲ 8.3 ಓವರ್‌ಗಳಲ್ಲಿ ಬೆನ್ನನಟ್ಟುವಲ್ಲಿ ಯಶಸ್ವಿಯಾಗಿತ್ತು. ಈ ಅವಧಿಯಲ್ಲಿ ಟೀಮ್ ಇಂಡಿಯಾ ಅನುಸರಿಸಿದ ರಣತಂತ್ರದ ಬಗ್ಗೆ ಗವಾಸ್ಕರ್ ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಪ್ರಮುಖ ಬೌಲರ್‌ಗಳಾದ ಜಸ್ಪ್ರಿತ್ ಬೂಮ್ರಾ, ಮೊಹಮ್ಮದ್ ಶಮಿ ಅಥವಾ ಶಾರ್ದೂಲ್ ಠಾಕೂರ್ ಅವರನ್ನು ಯಾವ ಕಾರಣಕ್ಕೆ ಬಳಸಿಕೊಳ್ಳಲಿಲ್ಲ ಎಂದಿದ್ದಾರೆ ಸುನಿಲ್ ಗವಾಸ್ಕರ್.
"ಶಾರ್ದೂಲ್ ಠಾಕೂರ್ ಮತ್ತು ಜಸ್ಪ್ರೀತ್ ಬೂಮ್ರಾ ಭೋಜನ ವಿರಾಮದ ಬಳಿಕ ಯಾವ ಕಾರಣಕ್ಕೆ ಬೌಲಿಂಗ್ ನಡೆಸಿಲ್ಲ ಎಂಬುದು ನನಗೆ ಅಚ್ಚರಿಯುಂಟು ಮಾಡಿದೆ. ಈ ಸಂದರ್ಣದಲ್ಲಿ ಭಾರತ ತಾನು ಗೆಲ್ಲುವುದಿಲ್ಲ ಎಂದು ನಿರ್ಧಾರ ಮಾಡಿದಂತಿತ್ತು" ಎಂದು ಸುನಿಲ್ ಗವಾಸ್ಕರ್ ಪಂದ್ಯದ ಮುಕ್ತಾಯದ ಬಳಿಕ ಸ್ಟಾರ್‌ಸ್ಪೋರ್ಟ್ಸ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಇನ್ನು ಈ ಸಂದರ್ಭದಲ್ಲಿ ತಂಡದ ಫೀಲ್ಡಿಂಗ್ ಪ್ಲೇಸ್‌ಮೆಂಟ್ ಬಗ್ಗೆಯೂ ಸುನಿಲ್ ಗವಾಸ್ಕರ್ ಆಕ್ಷೇಪವೆತ್ತಿದ್ದಾರೆ. "ಆರ್ ಅಶ್ವಿನ್ ಬೌಲಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಫಿಲ್ಡಿಂಗ್ ನಿಲ್ಲಿಸಿದ್ದ ಸ್ಥಳವೂ ಸರಿಯಾಗಿರಲಿಲ್ಲ. ಅಲ್ಲಿ ಸುಲಭವಾಗಿ ಒಂಟಿ ರನ್‌ಗಳನ್ನು ಗಳಿಸಬಹುದಾಗಿತ್ತು. ಐವರು ಫಿಲ್ಡರ್‌ಗಳು ಬೌಂಡರಿ ಸನಿಹದಲ್ಲಿದ್ದರು. ಈ ಮೂಲಕ ಬ್ಯಾಟರ್‌ಗಳನ್ನು ಔಟ್ ಮಾಡುವ ಅವಕಾಶವನ್ನು ಕಳೆದುಕೊಂಡರು" ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್
ಬೆಂಚ್: ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಹನುಮ ವಿಹಾರಿ,ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ
ದಕ್ಷಿಣ ಆಪ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಾಕ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ
ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಸಿಸಂಡಾ ಮಗಾಲಾ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications