IND vs SA: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ 11ರ ಬಳಗ ಸೂಚಿಸಿದ ಗೌತಮ್ ಗಂಭೀರ್; 2 ಅಚ್ಚರಿ ಆಯ್ಕೆ
2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಚಕ್ರದಲ್ಲಿ ನಿರ್ಣಾಯಕವಾಗಿರುವ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರವಾಸಿ ಭಾರತ ಮತ್ತು ಆತಿಥೇಯ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲು ಸಿದ್ಧವಾಗಿವೆ.
ಮಂಗಳವಾರ, ಡಿಸೆಂಬರ್ 26ರಿಂದ 30ರವರೆಗೆ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ನಿಗದಿಯಾಗಿದೆ.
ಮೊದಲ ಟೆಸ್ಟ್ ಪಂದ್ಯಕ್ಕೆ ಮುನ್ನ, ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಆಯ್ಕೆಯ ಭಾರತದ ಆಡುವ 11ರ ಬಳಗವನ್ನು ಸೂಚಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಅವರು ಇನ್ನಿಂಗ್ಸ್ ಆರಂಭಿಕ ಜೋಡಿಯಾಗಲು ಗೌತಮ್ ಗಂಭೀರ್ ತಮ್ಮ ಬೆಂಬಲ ನೀಡಿದ್ದಾರೆ.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಆರಂಭಿಕ ಆಟಗಾರನಾಗಿ ವಿಶೇಷವಾಗಿ ಪ್ರಭಾವಶಾಲಿಯಾಗಿದ್ದು, ಯಶಸ್ವಿ ಜೈಸ್ವಾಲ್ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಆಡಲಿದ್ದಾರೆ.
ನಿರ್ಣಾಯಕ 3ನೇ ಸ್ಥಾನವನ್ನು ಶುಭ್ಮನ್ ಗಿಲ್ ಆಕ್ರಮಿಸಿಕೊಂಡಿದ್ದಾರೆ, ಇದು ಅನುಭವಿ ಚೇತೇಶ್ವರ ಪೂಜಾರ ಹಲವು ವರ್ಷಗಳಿಂದ ಆಡಿದ ಕ್ರಮಾಂಕವಾಗಿದೆ. ಇದೇ ವೇಳೆ, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಖಾಯಂ 4ನೇ ಸ್ಥಾನವನ್ನು ಪಡೆದುಕೊಳ್ಳಲಿದ್ದಾರೆ.
ಮಧ್ಯಮ ಕ್ರಮಾಂಕಕ್ಕೆ ಗೌತಮ್ ಗಂಭೀರ್ ಅವರ ಆಯ್ಕೆಗಳಲ್ಲಿ ಶ್ರೇಯಸ್ ಅಯ್ಯರ್ 5ನೇ ಕ್ರಮಾಂಕ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಕೆಎಲ್ ರಾಹುಲ್ 6ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬರಲಿದ್ದಾರೆ.

ಕ್ರಿಕೆಟ್ ಪಂಡಿತ ಗೌತಮ್ ಗಂಭೀರ್ ಅವರು ಏಕೈಕ ಸ್ಪಿನ್ನರ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ ಮತ್ತು ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ನಡುವೆ ಒಬ್ಬರನ್ನು ಆಡಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನು ಶಾರ್ದೂಲ್ ಠಾಕೂರ್ ಅವರಿಗೆ ವೇಗದ-ಬೌಲಿಂಗ್ ಆಲ್‌ರೌಂಡರ್ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದರು.
ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರು ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಬೇಕು ಎಂದಿರುವ ಗೌತಮ್ ಗಂಭೀರ್, ವೇಗದ ದಾಳಿಯನ್ನು ಮುನ್ನಡೆಸುವ ಜವಾಬ್ದಾರಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ನೀಡಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಗೌತಮ್ ಗಂಭೀರ್ ಆಯ್ಕೆಯ ಭಾರತದ ಆಡುವ 11ರ ಬಳಗ ಇಲ್ಲಿದೆ.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ/ ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications