IND vs SA: ಮಿಂಚಿದ ಸೂರ್ಯ, ಕುಲದೀಪ್; ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ; ಸರಣಿ ಸಮಬಲ
ಗುರುವಾರ, ಡಿಸೆಂಬರ್ 14ರಂದು ಜೋಹಾನ್ಸ್‌ಬರ್ಗ್‌ನ ಐಕಾನಿಕ್ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಪ್ರವಾಸಿ ಭಾರತ ತಂಡ ಅದ್ಭುತ ಗೆಲುವು ಸಾಧಿಸಿತು.
ಗೆಲ್ಲಲೇಬೇಕಾದ ನಿರ್ಣಾಯಕ ಪಂದ್ಯದಲ್ಲಿ ಗೆದ್ದ ಭಾರತ ತಂಡ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದವು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ಸೂರ್ಯಕುಮಾರ್ ಯಾದವ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 201 ರನ್‌ಗಳನ್ನು ಕಲೆಹಾಕಿತು.

ಬೃಹತ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 13.5 ಕೇವಲ 95 ರನ್‌ಗಳಿಗೆ ಸರ್ವಪತನ ಕಂಡಿತು ಮತ್ತು 106 ರನ್‌ಗಳ ದೊಡ್ಡ ಅಂತರದಿಂದ ಮುಖಭಂಗ ಅನುಭವಿಸಿತು.
ಡರ್ಬನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯವು ಮಳೆಯಿಂದ ರದ್ದುಗೊಂಡರೆ, ಎರಡನೇ ಪಂದ್ಯವನ್ನು ಡಿಎಲ್‌ಎಸ್ ವಿಧಾನದ ಮೂಲಕ ಆತಿಥೇಯ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್‌ಗಳ ಗೆಲುವು ಸಾಧಿಸಿತ್ತು.
Story first published: Friday, December 15, 2023, 6:15 [IST]
Other articles published on Dec 15, 2023
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications