For Quick Alerts
ALLOW NOTIFICATIONS  
For Daily Alerts
 

IND vs SA: ಭಾರತ vs ದಕ್ಷಿಣ ಆಫ್ರಿಕಾ ಮೊದಲ ಟಿ20 ಕದನ; ಪಂದ್ಯದ ಸಮಯ, ಟಿವಿ, ಲೈವ್‌ಸ್ಟ್ರೀಮ್ ಮಾಹಿತಿ

ಇತ್ತೀಚೆಗೆ ತವರಿನಲ್ಲಿ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಗೆದ್ದ ಬಳಿಕ, ಭಾರತೀಯ ಕ್ರಿಕೆಟ್ ತಂಡವು ಟಿ20, ಏಕದಿನ ಮತ್ತು ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಭಾನುವಾರ, ಡಿಸೆಂಬರ್ 10ರಂದು ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಪ್ರವಾಸಿ ಭಾರತ ತಂಡಗಳು ಮೊದಲನೇ ಟಿ20 ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ವಿದೇಶಿ ಪರಿಸ್ಥಿತಿಗಳಲ್ಲಿ, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಆಡುವ ಮತ್ತು ಗೆಲ್ಲುವ ಸವಾಲು ಟಿ20 ಸರಣಿಯ ನಾಯಕ ಸೂರ್ಯಕುಮಾರ್ ಯಾದವ್‌ಗೆ ಸಾಕಷ್ಟು ಸವಾಲಿನಿಂದ ಕೂಡಿರಲಿದೆ.

IND vs SA: India vs South Africa 1st T20 Match Timings, TV And Live Streaming Details

ಕಂಫರ್ಟ್ ಝೋನ್‌ನಿಂದ ಹೊರ ಬಂದು ಆಟವನ್ನು ಆನಂದಿಸಲು ಮತ್ತು ನಿರ್ಭಯವಾಗಿ ಆಡುವಂತೆ ಸೂರ್ಯಕುಮಾರ್ ಯಾದವ್‌ ತಮ್ಮ ತಂಡದ ಆಟಗಾರರನ್ನು ಕೇಳಿಕೊಂಡಿದ್ದಾರೆ.

ಇದು ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅಥವಾ ಮೊಹಮ್ಮದ್ ಶಮಿ ಇಲ್ಲದ ಯುವ ಭಾರತೀಯ ತಂಡವಾಗಿದೆ. ಭಾರತ ತಂಡ ಟಿ20 ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸುವ ತವಕದಲ್ಲಿದೆ.

ದಕ್ಷಿಣ ಆಫ್ರಿಕಾ ತಂಡವನ್ನು ಹೊಸ ವೈಟ್ ಬಾಲ್ ನಾಯಕ ಏಡೆನ್ ಮಾರ್ಕ್ರಾಮ್ ಮುನ್ನಡೆಸುತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಕ್ವಿಂಟನ್ ಡಿ ಕಾಕ್ ಅವರ ಸೇವೆಯನ್ನು ಆತಿಥೇಯ ತಂಡ ಕಳೆದುಕೊಳ್ಳಲಿದೆ.

IND vs SA: India vs South Africa 1st T20 Match Timings, TV And Live Streaming Details

ಇದೇ ಸಮಯದಲ್ಲಿ, ಪಾದದ ಉಳುಕಿನಿಂದಾಗಿ ವೇಗಿ ಲುಂಗಿ ಎನ್‌ಗಿಡಿ ಅವರು ಹೊರಗುಳಿದಿದ್ದಾರೆ. ಹೊಸ ನಾಯಕತ್ವದಲ್ಲಿ ಮತ್ತು ಕೆಲವು ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಹರಿಣ ಪಡೆ ಹೇಗೆ ಆಡುತ್ತಾರೆ ಎಂಬುದನ್ನು ನೋಡಲು ಕುತೂಹಲದಾಯಕವಾಗಿದೆ.

ಪಂದ್ಯದ ಸಮಯ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 1ನೇ ಟಿ20 ಪಂದ್ಯ ಭಾನುವಾರ ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಆರಂಭವಾಗಲಿದೆ.

ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ ಟಿವಿ ಮತ್ತು ಲೈವ್‌ಸ್ಟ್ರೀಮ್ ಮಾಹಿತಿ

ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಅಲ್ಲದೆ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್‌ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಭಾರತ vs ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದ ಸಂಭಾವ್ಯ ಆಡುವ 11ರ ಬಳಗ

ಭಾರತ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮುಖೇಶ್ ಕುಮಾರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್.

ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಜ್ಕೆ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಟ್ರಿಸ್ಟಿಯನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.

Story first published: Saturday, December 9, 2023, 22:59 [IST]
Other articles published on Dec 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+