IND vs SA: ಪ್ರಥಮ ಟಿ ಟ್ವೆಂಟಿ ಪಂದ್ಯದ ಟಾಸ್ ವರದಿ ಮತ್ತು ಆಡುವ ಬಳಗದ ಮಾಹಿತಿ ಇಲ್ಲಿದೆ

ದಕ್ಷಿಣ ಆಫ್ರಿಕಾ ಭಾರತ ಪ್ರವಾಸವನ್ನು ಕೈಗೊಂಡಿದ್ದು, 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಮುಖಾಮುಖಿ ನಡೆಸುತ್ತಿದೆ. ಈ ಸರಣಿಯ ಪ್ರಥಮ ಟಿ ಟ್ವೆಂಟಿ ಪಂದ್ಯ ಇಂದು ( ಜೂನ್ 9 ) ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಫೀಲ್ಡಿಂಗ್ ಆಯ್ದುಕೊಂಡಿದ್ದು ಆತಿಥೇಯ ಭಾರತ ತಂಡದ ಆಟಗಾರರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು
ಟೀಮ್ ಇಂಡಿಯಾ ಆಡುವ ಬಳಗ: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್( ವಿಕೆಟ್ ಕೀಪರ್/ ನಾಯಕ), ಹಾರ್ದಿಕ್ ಪಾಂಡ್ಯ ( ಉಪನಾಯಕ ), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡ, ಅನ್ರಿಚ್ ನಾರ್ಕಿಯಾ
ಇನ್ನು ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಇಲ್ಲದ ಟೀಮ್ ಇಂಡಿಯಾ ಈ ಸರಣಿಯಲ್ಲಿ ಕಣಕ್ಕಿಳಿದಿದ್ದು, ಕೆಎಲ್ ರಾಹುಲ್ ನಾಯಕತ್ವದಲ್ಲಿ ಆಡಬೇಕಿತ್ತು. ಆದರೆ ಮೊದಲನೇ ಪಂದ್ಯ ಆರಂಭಕ್ಕೂ ಮುನ್ನವೇ ಅಭ್ಯಾಸದ ವೇಳೆ ತೀವ್ರಗಾಯಕ್ಕೊಳಗಾದ ಕೆಎಲ್ ರಾಹುಲ್ ಸರಣಿಯಿಂದ ಹೊರ ಬಿದ್ದಿದ್ದು, ಇದೀಗ ತಂಡದ ನಾಯಕತ್ವದ ಜವಾಬ್ದಾರಿ ರಿಷಭ್ ಪಂತ್ ಹೆಗಲಿಗೆ ಬಿದ್ದಿದೆ ಹಾಗೂ ಉಪನಾಯಕನ ಸ್ಥಾನವನ್ನು ಹಾರ್ದಿಕ್ ಪಾಂಡ್ಯಾಗೆ ನೀಡಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications