IND vs SA 2ನೇ ಟಿ20: ಟಾಸ್ ವರದಿ ಮತ್ತು ಆಡುವ ಬಳಗದ ಮಾಹಿತಿ; ಆಫ್ರಿಕಾದ ಪ್ರಮುಖ ಆಟಗಾರ ಔಟ್

ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ಜತೆ ಸೆಣಸಾಟವನ್ನು ನಡೆಸುತ್ತಿದ್ದು, ಕಳೆದ ಗುರುವಾರ ( ಜೂನ್ 9 ) ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಆತಿಥೇಯ ಭಾರತವನ್ನು ಸೋಲಿಸಿ ಸರಣಿಯಲ್ಲಿ 1 - 0 ಅಂತರದ ಮುನ್ನಡೆಯನ್ನು ಸಾಧಿಸಿದೆ.
ಇತ್ತ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ 211 ರನ್‌ಗಳ ಬೃಹತ್ ಮೊತ್ತ ಕಲೆಹಾಕಿಯೂ ಸೋತ ಟೀಂ ಇಂಡಿಯಾ ತವರಿನಲ್ಲಿಯೇ ಮುಖಭಂಗ ಅನುಭವಿಸಿದ್ದು, ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಗೆದ್ದು ಕಮ್ ಬ್ಯಾಕ್ ಮಾಡುವತ್ತ ಚಿತ್ತ ನೆಟ್ಟಿದೆ. ಇತ್ತಂಡಗಳ ನಡುವಿನ ಎರಡನೇ ಟಿ ಟ್ವೆಂಟಿ ಪಂದ್ಯ ಕಟಕ್ ನಗರದ ಬಾರಾಬತಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಜೂನ್ 12 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಕಳೆದ ಪಂದ್ಯದಂತೆ ಈ ಪಂದ್ಯದಲ್ಲಿಯೂ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಟೀಂ ಇಂಡಿಯಾ ಆಡುವ ಬಳಗ
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ವಿಕೆಟ್ ಕೀಪರ್/ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ಪಂದ್ಯದ ಟಾಸ್ ಮುಕ್ತಾಯವಾದ ನಂತರ ಮಾತನಾಡಿದ ನಾಯಕ ರಿಷಭ್ ಪಂತ್ ಈ ಪಂದ್ಯದಲ್ಲಿ ಯಾವುದೇ ಆಟಗಾರರನ್ನು ಬದಲಾವಣೆ ಮಾಡದೇ, ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡದ ಜೊತೆಯೇ ಆಡಲಿದ್ದೇವೆ ಎಂದಿದ್ದಾರೆ.

ದಕ್ಷಿಣ ಆಫ್ರಿಕಾ ಆಡುವ ಬಳಗ
ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡ, ಅನ್ರಿಚ್ ನಾರ್ಕಿಯಾ

ದಕ್ಷಿಣ ಆಫ್ರಿಕಾದ ಇಬ್ಬರು ತಂಡದಿಂದ ಔಟ್
ಇನ್ನು ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿರುವ ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬವುಮಾ ಟಾಸ್ ಮುಕ್ತಾಯವಾದ ನಂತರ ಮಾತನಾಡಿದ್ದು, ತಂಡದಲ್ಲಿ 2 ಬದಲಾವಣೆಗಳಾಗಿವೆ, ಕ್ವಿಂಟನ್ ಡಿ ಕಾಕ್ ಮೊಣಕೈ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದು, ಕ್ಲಾಸೆನ್ ಸೇರ್ಪಡೆಗೊಂಡಿದ್ದಾರೆ ಹಾಗೂ ಸ್ಟಬ್ಸ್ ತಂಡದಿಂದ ಹೊರಗುಳಿದಿದ್ದು ಬದಲಾಗಿ ರೀಜಾ ಹೆಂಡ್ರಿಕ್ಸ್ ಕಣಕ್ಕಿಳಿದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications