IND vs SA: ಅಂತಿಮ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ ತಂಡಗಳ ಮಾಹಿತಿ

ದಕ್ಷಿಣ ಆಫ್ರಿಕಾ ಭಾರತ ಪ್ರವಾಸವನ್ನು ಕೈಗೊಂಡಿದ್ದು, 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸೆಣಸಾಟವನ್ನು ನಡೆಸುತ್ತಿದೆ. ಇತ್ತಂಡಗಳ ನಡುವಿನ ಈ ಸರಣಿಯ 4 ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದ್ದು, ಅಂತಿಮ ಪಂದ್ಯ ನಾಳೆ ( ಜೂನ್ 19 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇನ್ನು ಈಗಾಗಲೇ ಮುಕ್ತಾಯಗೊಂಡಿರುವ 4 ಪಂದ್ಯಗಳ ಪೈಕಿ ಮೊದಲೆರಡು ಪಂದ್ಯಗಳನ್ನು ಪ್ರವಾಸಿ ದಕ್ಷಿಣ ಆಫ್ರಿಕಾ ಗೆದ್ದು ಬೀಗಿತ್ತು ಹಾಗೂ ನಂತರ ನಡೆದ 3 ಮತ್ತು 4ನೇ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲ್ಲುವುದರ ಮೂಲಕ ಸರಣಿ ಸಮಬಲಗೊಂಡಿದೆ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ನಾಲ್ಕನೇ ಪಂದ್ಯ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದ್ದು ಸರಣಿಯಲ್ಲಿ ವಿಜೇತ ತಂಡ ಯಾವುದು ಎಂಬುದು ತಿಳಿಯಲಿದೆ.
ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಈ ಮಹತ್ವದ ಪಂದ್ಯದಲ್ಲಿ ಎರಡೂ ತಂಡಗಳು ಬಲಿಷ್ಠ ಆಡುವ ಬಳಗವನ್ನು ಕಣಕ್ಕಿಳಿಸಿ ಸರಣಿ ಗೆಲ್ಲಬೇಕೆಂಬ ಗುರಿಯನ್ನು ಹೊಂದಿವೆ. ಅದರಲ್ಲಿಯೂ ತವರು ನೆಲದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಇದುವರೆಗೂ ಯಾವುದೇ ಟಿ ಟ್ವೆಂಟಿ ಸರಣಿಯಲ್ಲಿಯೂ ಜಯ ಸಾಧಿಸಲಾಗದೇ ಹಿನ್ನಡೆ ಅನುಭವಿಸಿದ್ದು, ಈ ಸರಣಿಯನ್ನು ಗೆದ್ದು ನೂತನ ಇತಿಹಾಸ ಬರೆಯುವ ತವಕದಲ್ಲಿದೆ. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಇತ್ತಂಡಗಳ ಆಡುವ ಬಳಗಗಳು ಹೇಗಿರಲಿವೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ.

ದಕ್ಷಿಣ ಆಫ್ರಿಕಾ ಸಂಭಾವ್ಯ ಆಡುವ ಬಳಗ
ಕಳೆದ ನಾಲ್ಕನೇ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿದಿದ್ದ ದಕ್ಷಿಣ ಆಫ್ರಿಕಾ ಆಡುವ ಬಳಗವನ್ನೇ ಈ ಪಂದ್ಯದಲ್ಲಿಯೂ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಿದ್ದು, ದಕ್ಷಿಣ ಆಫ್ರಿಕಾ ಯಾವುದೇ ಬದಲಾವಣೆಗಳನ್ನು ಮಾಡಿಕೊಳ್ಳುವುದಿಲ್ಲ ಎನ್ನಬಹುದು. ತಂಡದ ಸಂಭಾವ್ಯ ಆಡುವ ಬಳಗ ಹೀಗಿದೆ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬಾವುಮಾ ( ನಾಯಕ ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಅನ್ರಿಚ್ ನಾರ್ಕಿಯಾ, ತಬ್ರೈಜ್ ಶಮ್ಸಿ, ಲುಂಗಿ ಎನ್ಗಿಡಿ

ಭಾರತ ಸಂಭಾವ್ಯ ಆಡುವ ಬಳಗ
ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 82 ರನ್‌ಗಳ ಜಯ ಸಾಧಿಸಿದ್ದ ಕಾರಣ ಅದೇ ತಂಡವನ್ನು ಈ ಪಂದ್ಯದಲ್ಲಿಯೂ ಕಣಕ್ಕಿಳಿಸುವುದು ಬಹುತೇಕ ಖಚಿತ ಎನ್ನಬಹುದು. ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ( ವಿಕೆಟ್ ಕೀಪರ್, ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್

ತಂಡಗಳು
ಭಾರತ: ಭಾರತ: ರಿಷಬ್ ಪಂತ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವೆಂಕಟೇಶ್ ಅಯ್ಯರ್, ವೈ ಚಾಹಲ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ತಬ್ರೈಜ್ ಶಂಬ್ಸಿ, ಟ್ರೈಸ್ಸಿ ಸ್ಟ್ಯಾಬ್ಸ್ವಾನ್, ಟ್ರೈಸ್ಸಿ ಸ್ಟಬ್ಸ್ವಾನ್, ರಸ್ಸಿ ವಾನ್ ಡರ್ ಡಸನ್, ಮಾರ್ಕೊ ಜಾನ್ಸೆನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications