ಗುರುವಾರ, ಡಿಸೆಂಬರ್ 14ರಂದು ಜೋಹಾನ್ಸ್‌ಬರ್ಗ್‌ನ ಐಕಾನಿಕ್ ವಾಂಡರರ್ಸ್ ಸ್ಟೇಡಿಯಂನಲ್ಲಿ ಪ್ರವಾಸಿ ಭಾರತ ಮತ್ತು ಆತಿಥೇಯ ದಕ್ಷಿಣ ಆಫ್ರಿಕಾ ನಡುವೆ 3ನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ.
ಡರ್ಬನ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯವು ಮಳೆಯಿಂದ ರದ್ದುಗೊಂಡರೆ, ಎರಡನೇ ಪಂದ್ಯವನ್ನು ಡಿಎಲ್‌ಎಸ್ ವಿಧಾನದ ಮೂಲಕ ಆತಿಥೇಯ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್‌ಗಳ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಇದೀಗ, ಭಾರತ ತಂಡಕ್ಕೆ ಅಂತಿಮ ಪಂದ್ಯ ನಿರ್ಣಾಯಕವಾಗಿದ್ದು, ಸರಣಿಯನ್ನು ಸಮಬಲಗೊಳಿಸಲು ತನ್ನ ಅತ್ಯುತ್ತಮ ಪ್ರದರ್ಶನವನ್ನು ನೀಡಲೇಬೇಕಿದೆ. ಇನ್ನು ಈ ಪಂದ್ಯವನ್ನು ಗೆಲ್ಲುವ ಮೂಲಕ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಳ್ಳಲು ಹರಿಣ ಪಡೆ ಎದುರು ನೋಡುತ್ತಿದೆ.
ಎರಡೂ ತಂಡಗಳಲ್ಲಿ ಯಾವುದೇ ಗಾಯದ ಆತಂಕವಿಲ್ಲ. ಫಾರ್ಮ್ ವಿಷಯಕ್ಕೆ ಬಂದರೆ, 2ನೇ ಟಿ20 ಪಂದ್ಯದಲ್ಲಿ ಮಿಂಚಿದ ಆಟಗಾರರು ಭಾರತದ ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಗ್ ಮತ್ತು ದಕ್ಷಿಣ ಆಫ್ರಿಕಾದ ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್.

ಮೊದಲ ಪಂದ್ಯದಲ್ಲಿ ಡಕ್‌ಗೆ ಔಟಾದ ಯಶಸ್ವಿ ಜೈಸ್ವಾಲ್ ಮತ್ತು ಶುಭ್ಮನ್ ಗಿಲ್ ಕೊನೆಯ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಿದೆ. ಇದು ಭಾರತ ತಂಡದ ಗೆಲುವಿಗೆ ಅನಿವಾರ್ಯವಾಗಿದೆ.
ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್ ಯಾವಾಗಲೂ ಬ್ಯಾಟಿಂಗ್‌ಗೆ ಅನುಕೂಲಕರವಾಗಿದೆ. ಆದ್ದರಿಂದ, ಬ್ಯಾಟರ್‌ಗಳು ಉತ್ತಮ ಸಹಾಯವನ್ನು ಹೊಂದಿರುತ್ತಾರೆ.
ಡಿಸೆಂಬರ್ 14ರಂದು ಜೋಹಾನ್ಸ್‌ಬರ್ಗ್ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಮೂರನೇ ಟಿ20 ಪಂದ್ಯವನ್ನು ಅನುಕೂಲಕರ ಹವಾಮಾನ ಪರಿಸ್ಥಿತಿಗಳಲ್ಲಿ ಆಯೋಜಿಸಲು ಸಜ್ಜಾಗಿದೆ.
ಹಗಲಿನಲ್ಲಿ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್‌ನಷ್ಟು ಇರುವ ನಿರೀಕ್ಷೆ ಇದ್ದು, ಪಂದ್ಯ ಪ್ರಾರಂಭವಾಗುತ್ತಿದ್ದಂತೆ 26 ಡಿಗ್ರಿ ಸೆಲ್ಸಿಯಸ್‌ಗೆ ಸ್ವಲ್ಪ ಇಳಿಕೆಯಾಗುತ್ತದೆ.
ಪಂದ್ಯವು ಸಂಜೆಯವರೆಗೂ ಮುಂದುವರೆದಂತೆ, ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ಗೆ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಆರ್ದ್ರತೆಯ ಮಟ್ಟವು 27 ಪ್ರತಿಶತದಷ್ಟು ಮಧ್ಯಮವಾಗಿರುತ್ತದೆ. ಜೊತೆಗೆ ಸೆಕೆಂಡಿಗೆ 6 ಮೀಟರ್ ವೇಗದಲ್ಲಿ ಗಾಳಿ ಬೀಸುತ್ತದೆ.
ಭಾರತ vs ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದೆ. ಡಿಸ್ನಿ+ ಹಾಟ್ ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಭಾರತ: ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ: ಮ್ಯಾಥ್ಯೂ ಬ್ರೀಟ್ಜ್ಕೆ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಕೇಶವ್ ಮಹಾರಾಜ್, ಆಂಡಿಲೆ ಫೆಹ್ಲುಕ್ವಾಯೊ, ನಾಂದ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.