ಮುಂದುವರಿದ ಶ್ರೇಯಸ್ ಐಯ್ಯರ್ ಅಬ್ಬರ: ವಿರಾಟ್ ಕೊಹ್ಲಿ ಇರುವ ವಿಶೇಷ ಪಟ್ಟಿಗೆ ಸೇರ್ಪಡೆ

ಭಾರತ ತಂಡದ ಆಟಗಾರ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಐಯ್ಯರ್ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ. ಏಕದಿನ ಮಾದರಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಐಯ್ಯರ್ ಎರಡನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಭಾರತ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಈ ಸರಣಿಯ ಮೊದಲ ಪಂದ್ಯದಲ್ಲಿಯೂ ಐಯ್ಯರ್ ಅರ್ಧ ಶತಕದ ಕೊಡುಗೆ ನೀಡಿದ್ದರು.
ಶ್ರೇಯಸ್ ಐಯ್ಯರ್ ಅವರ ಅಮೋಘ ಪ್ರದರ್ಶನದ ಕಾರಣದಿಂದಾಗಿ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಸಮಬಲ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಅದ್ಭುತ ಪ್ರದರ್ಶನದ ಜೊತೆಗೆ ಕುತೂಹಲಕಾರಿ ಸಾಧನೆಯೊಂದನ್ನು ಮಾಡಿದ್ದು ಮಾಜಿ ನಾಯಕ ವಿರಾಟ್ ಕೊಹ್ಲಿ ಜೊತೆಗೆ ವಿಶೇಷ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಕೊಹ್ಲಿ ಜೊತೆ ವಿಶೇಷ ಸಾಧನೆ ಪಟ್ಟಿಯಲ್ಲಿ ಐಯ್ಯರ್
ರಾಂಚಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಭಾರತದ ಗೆಲುವಿಗೆ ಕಾರಣವಾದರು. ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯುಕ ವಿರಾಟ್ ಕೊಹ್ಲಿ ಅವರೊಂದಿಗೆ ವಿಶೇಷ ಪಟ್ಟಿಯಲ್ಲಿ ಶ್ರೇಯಸ್ ಐಯ್ಯರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಏಕದಿನ ಮಾದರಿಯಲ್ಲಿ ವಿರಾಟ್ ಕೊಹ್ಲಿ ನಂತರ ಶತಕ ಸಿಡಿಸಿದ ಭಾರತದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ ಶ್ರೇಯಸ್ ಐಯ್ಯರ್.

ಎರಡು ಶತಕ ದಾಖಲಿಸಿರುವ ಕೊಹ್ಲಿ
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ರಾಂಚಿಯಲ್ಲಿ ಎರಡು ಶತಕವನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ. 2014ರಲ್ಲಿ ಶ್ರೀಲಂಕಾ ವಿರುದ್ಧ ಅಜೇಯ 139 ರನ್ ಬಾರಿಸಿದ್ದರೆ ಆಸ್ಟ್ರೇಲಿಯಾ ವಿರುದ್ಧ 2019ರಲ್ಲಿ 123 ರನ್ ಬಾರಿಸಿದ್ದರು. ಇನ್ನು ಶ್ರೀಲಂಕಾದ ಬ್ಯಾಟರ್ ಏಂಜಲೋ ಮ್ಯಾಥ್ಯೂಸ್ ಹಾಗೂ ಇಸ್ಮಾನ್ ಖವಾಜಾ ಕೂಡ ಈ ಮೈದಾನದಲ್ಲಿ ಶತಕ ಸಿಡಿಸಿರುವ ಇತರ ಬ್ಯಾಟರ್‌ಗಳಾಗಿದ್ದಾರೆ.

ಕುತೂಹಲ ಮೂಡಿಸಿದೆ ಅಂತಿಮ ಪಂದ್ಯ
ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-1 ಅಂತರದಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಏಕದಿನ ಮಾದರಿಯಲ್ಲಿಯೂ ಅಂಥಾದ್ದೇ ಸಾಧನೆ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಣಕ್ಕಿಳಿದಿಲ್ಲ. ಬದಲಿಗೆ ಶಿಖರ್ ಧವನ್ ನೇತೃತ್ವದಲ್ಲಿ ದ್ವಿತೀಯ ದರ್ಜೆಯ ಟೀಮ್ ಇಂಡಿಯಾ ಬಳಗ ಕಣಕ್ಕಿಳಿದಿದೆ. ಹಾಗಿದ್ದರೂ ದಕ್ಷಿಣ ಆಫ್ರಿಕಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ್ದು ಮೊದಲ ಪಂದ್ಯದಲ್ಲಿ ಸಣ್ಣ ಅಂತರದಿಂದ ಎಡವಿದ್ದರೂ ಎರಡನೇ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದುಕೊಂಡಿದೆ. ಇದೀಗ ಅಂತಿಮ ಪಂದ್ಯದಲ್ಲಿ ಯಾವ ತಂಡಕ್ಕೆ ಗೆಲುವು ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದ್ದು ಗೆದ್ದ ತಂಡ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್
ದ. ಆಫ್ರಿಕಾ ಸಂಭಾವ್ಯ ಆಡುವ ಬಳಗ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್ (ನಾಯಕ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications