For Quick Alerts
ALLOW NOTIFICATIONS  
For Daily Alerts
 

ಭಾರತ vs ದಕ್ಷಿಣ ಆಫ್ರಿಕಾ: ಫೀಲ್ಡಿಂಗ್‌ನಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ

Ind vs SA: Indian skipper Virat Kohli Joins elite list of fielding after completes 100 test catch

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಎರಡು ತಂಡಗಳು ಕೂಡ ಸಾಕಷ್ಟು ಪೈಪೋಟಿಯ ಪ್ರದರ್ಶನ ನೀಡುತ್ತಿದೆ. ಎರಡು ತಂಡಗಳ ಬೌಲಿಂಗ್ ದಾಳಿಯ ಮುಂದೆ ಬ್ಯಾಟರ್‌ಗಳ ಆಟ ನಡೆಯುತ್ತಿಲ್ಲ. ಎರಡು ತಂಡಗಳು ಕೂಡ ದೊಡ್ಡ ಮೊತ್ತವನ್ನು ಪೇರಿಸಲು ವಿಫಲವಾಗಿದ್ದು ಪೂಪೋಟಿಯ ಪ್ರದರ್ಶನ ಕಂಡು ಬರುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಕೇವಲ 13 ರನ್‌ಗಳ ಮುನ್ನಡೆಯನ್ನು ಮಾತ್ರವೇ ಪಡೆಯಲು ಸಫಲವಾಗಿದ್ದು ಇದು ಎರಡು ತಂಡಗಳ ನಡುವಿನ ಪೈಪೋಟಿಗೆ ಕೈಗನ್ನಡಿಯಂತಿದೆ.

ಇನ್ನು ಇಂದು ಭಾರತ ತಂಡದ ಫೀಲ್ಡಿಂಗ್ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶತಕವನ್ನು ಗಳಿಸಲು ವಿಫಲವಾಗಿದ್ದರೂ ಫಿಲ್ಡಿಂಗ್‌ನಲ್ಲಿ ಕೊಹ್ಲಿ ಶತಕದ ಸಾಧನೆಯೊಂದನ್ನು ಮಾಡಿ ಮಿಂಚಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಫೀಲ್ಡಿಂಗ್ ವೇಲೆ ವಿರಾಟ್ ಕೊಹ್ಲಿ 100 ಕ್ಯಾಚ್ ಪಡೆದು ಫಿಲ್ಡಿಂಗ್‌ನಲ್ಲಿ ಈ ವಿಶೇಷ ಮೈಲಿಗಲ್ಲನ್ನು ಸಾಧಿಸಿದ್ದಾರೆ.

ನ್ಯೂಲ್ಯಾಂಡ್ಸ್ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಜ್ಲಿ ವೇಗಿ ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ದಕ್ಷಿಣ ಆಪ್ರಿಕಾ ತಂಡದ ಪ್ರಮುಖ ಆಟಗಾರ ಟೆಂಬಾ ಬವುಮಾ ನೀಡಿದ ಕ್ಯಾಚ್‌ಅನ್ನು ಪಡೆದರು. ಬ್ಯಾಟ್‌ನ ಬದಿಗೆ ಅಪ್ಪಳಿಸಿದ್ದ ಚೆಂಡು ಸ್ಲಿಪ್‌ನಲ್ಲಿದ್ದ ನಾಯಕ ವಿರಾಟ್ ಕೊಹ್ಲಿ ಬೊಗಸೆಯಲ್ಲಿ ಭದ್ರವಾಗಿತ್ತು. ಈ ಮೂಲಕ ಅಪಾಯಕಾರಿ ಆಟಗಾರ ಟೆಂಬಾ ಬವುಮಾ ವಿಕೆಟ್ ಕಳೆದುಕೊಂಡಿದ್ದರು. ಈ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಮೂರನೇ ಕ್ಯಾಚ್ ಪಡೆದ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆಯನ್ನು ಮಾಡಿದ ಭಾರತದ ಕೇವಲ 6ನೇ ಫೀಲ್ಡರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಕೊಹ್ಲಿ ಪಡೆದ ಈ ಕ್ಯಾಚ್‌ನಿಂದ ಬವುಮಾ ಹಾಗೂ ಕೀಗನ್ ಪೀಟರ್ಸನ್ ನಡುವಿನ 47 ರನ್‌ಗಳ ಜೊತೆಯಾಟ ಕೂಡ ಅಂತ್ಯವಾಯಿತು.

ಕುತೂಹಲಕಾರಿ ಸಂಗತಿಯೆಂದರೆ ವಿರಾಟ್ ಕೊಹ್ಲಿ ಈ ಸಾಧನೆಯನ್ನು ತಮ್ಮ 99ನೇ ಟೆಸ್ಟ್ ಪಂದ್ಯದಲ್ಲಿ ಸಾಧಿಸಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ 100ಕ್ಕೂ ಅಧಿಕ ಕ್ಯಾಚ್ ಪಡೆದ ಇತರ ಐವರು ಫಿಲ್ಡರ್‌ಗಳು ಎಂದರೆ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್ ಹಾಗೂ ಮೊಹಮ್ಮದ್ ಅಜರುದ್ದೀನ್.

ಇನ್ನು 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ 210 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ. ದ. ಆಫ್ರಿಕಾ ಪರವಾಗಿ ಕೀಗನ್ ಪೀಟರ್ಸನ್ ಮಾತ್ರ 72 ರನ್‌ಗಳನ್ನು ಸಿಡಿಸಿ ಟೀಮ್ ಇಂಡಿಯಾ ಬೌಲರ್‌ಗಳಿಗೆ ಕಾಡಿದರು. ಉಳಿದ ಬ್ಯಾಟರ್‌ಗಳಿಂದ ದೊಡ್ಡ ಮೊತ್ತದ ಕೊಡುಗೆ ದೊರೆಯಲಿಲ್ಲ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ವೇಗಿ ಜಸ್ಪ್ರಿತ್ ಬೂಮ್ರಾ ಐದು ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಉಳಿದಂತೆ ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಶಮಿ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು. ಒಂದು ವಿಕೆಟ್ ಶಾರ್ದೂಲ್ ಠಾಕೂರ್ ಪಾಲಾಯಿತು.

ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೀಗನ್ ಪೀಟರ್ಸನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ
ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂದಾ ಮಗಾಲಾ, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಭಾರತ ಆಡುವ ಬಳಗ: ಆಡುತ್ತಿರುವವರು: ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್
ಬೆಂಚ್ ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಮೊಹಮ್ಮದ್ ಸಿರಾಜ್, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ

Story first published: Thursday, January 13, 2022, 9:54 [IST]
Other articles published on Jan 13, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+