IND vs SA: ವಿರಾಟ್ ಕೊಹ್ಲಿಯನ್ನು ಹೊಗಳಿದ ಜಾಕ್ ಕಾಲಿಸ್, ಟೆಸ್ಟ್ ಬಗ್ಗೆ ಭವಿಷ್ಯವಾಣಿ
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಸರಣಿಗಳನ್ನು ಆಡಬೇಕಿದೆ. ಟಿ20 ಸರಣಿಯೊಂದಿಗೆ ಈ ಪ್ರವಾಸ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ, ಆದರೆ ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಉಳಿದಿವೆ. ಭಾರತ, ಟಿ 20 ನಂತರ, 3 ಪಂದ್ಯಗಳ ಏಕದಿನ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯು ಆಡಲಿದೆ.
ಭಾರತದ ಇಬ್ಬರು ದೊಡ್ಡ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಟೆಸ್ಟ್ ಸರಣಿಯಲ್ಲಿ ಮಾತ್ರ ನೋಡ ಬಹುದಾಗಿದೆ. ಏಕದಿನ ವಿಶ್ವಕಪ್ ಬಳಿಕ ಉಭಯ ಆಟಗಾರರು ವಿಶ್ರಾಂತಿ ಪಡೆದಿದ್ದು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಹಾಗೂ ಟಿ20 ಸರಣಿಯ ಭಾಗವಾಗಿಲ್ಲ.
ವಿರಾಟ್ ಕೊಹ್ಲಿ ಕಳೆದ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು ಮತ್ತು ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಅವರಿಗೆ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಲಭಿಸಿತ್ತು. ವಿಶ್ವಕಪ್ ಫೈನಲ್ ಪಂದ್ಯದ ನಂತರ ವಿರಾಟ್ ಕೊಹ್ಲಿ ತನ್ನ ಮೊದಲ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆಡಲಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಒಂದು ಟೆಸ್ಟ್ ಗೆಲ್ಲುವುದು ಭಾರತ ತಂಡಕ್ಕೆ ಪ್ರತಿ ಪ್ರವಾಸದಲ್ಲೂ ಸವಾಲಾಗಿದೆ. ಆದರೆ ವಿರಾಟ್ ಕೊಹ್ಲಿ ಬೌನ್ಸ್ ಮತ್ತು ಸ್ವಿಂಗ್ ಇರುವ ಪಿಚ್ ಗಳಲ್ಲಿ ತಮ್ಮನ್ನೂ ತಾವು ಸಾಬೀತುಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಈ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈ ಬಗ್ಗೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮತ್ತು ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಜಾಕ್ವೆಸ್ ಕಾಲಿಸ್ ಮಾತನಾಡಿದ್ದಾರೆ. ಈ ವೇಳೆ ಜಾಕ್, ವಿರಾಟ್ ಕೊಹ್ಲಿಯನ್ನು ಸಾಕಷ್ಟು ಹೊಗಳಿದ್ದಾರೆ.
ವಿರಾಟ್ ತುಂಬಾ ದೊಡ್ಡ ಆಟಗಾರ, ಅವರು ತಂಡದಲ್ಲಿ ದೊಡ್ಡ ಪಾತ್ರವನ್ನು ಹೊಂದಿದ್ದಾರೆ, ಮತ್ತು ಟೀಮ್ ಇಂಡಿಯಾ ಸರಣಿಯನ್ನು ಗೆದ್ದರೆ, ನಾವು ನಿಜವಾಗಿಯೂ ಶ್ರೇಷ್ಠ ಟೆಸ್ಟ್ ಸರಣಿಯನ್ನು ನೋಡುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಪಡೆ ಕೇವಲ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸಿದರೆ ಅಥವಾ ತವರಿನ ಪರಿಸ್ಥಿತಿಯ ಲಾಭ ಪಡೆದು ಟೆಂಬಾ ಬಾವುಮಾ ತನ್ನ ತಂಡವನ್ನು ಸರಣಿಯನ್ನು ವಶಪಡಿಸಿಕೊಳ್ಳುತ್ತಾರಾ ಕಾದು ನೋಡಬೇಕಿದೆ.

ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ವಿರಾಟ್ ಒಟ್ಟಾರೆ 7 ಟೆಸ್ಟ್ ಪಂದ್ಯಗಳ 14 ಇನಿಂಗ್ಸ್‌ನಲ್ಲಿ 51.35ರ ಸರಾಸರಿಯಲ್ಲಿ ರನ್ ಕಲೆ ಹಾಕಿದ್ದಾರೆ. ಈ ವೇಳೆ ಎರಡು ಶತಕ ಹಾಗೂ ಮೂರು ಅರ್ಧಶತಕಗಳು ಸೇರಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications