ವೈರಲ್ ಆಯ್ತು ಕೊಹ್ಲಿ ಕಟೌಟ್: ಭಿನ್ನವಾಗಿ ಪ್ರೀತಿ ವ್ಯಕ್ತಪಡಿಸಿದ ಅಭಿಮಾನಿಗಳು

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಬುಧವಾರದಿಂದ ಆರಂಭವಾಗಲಿದ್ದು ಮೊದಲ ಪಂದ್ಯ ಕೇರಳದ ತಿರುವನಂತಪುರಂನಲ್ಲಿ ನಡೆಯುತ್ತಿದೆ. ಇಲ್ಲಿನ ಗ್ರೀನ್‌ಫೀಲ್ಡ್ ಕ್ರೀಡಾಂಗಣ ಎರಡು ಬಲಿಷ್ಠ ತಂಡಗಳ ನಡುವಿನ ಕದನಕ್ಕೆ ಸಾಕ್ಷಿಯಾಗುತ್ತಿದ್ದು ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳು ತಂಡದ ಸ್ಟಾರ್ ಆಟಗಾರರ ಮೇಲಿನ ಅಭಿಮಾನವನ್ನು ಭಿನ್ನವಾಗಿ ವ್ಯಕ್ತಪಡಿಸಿದ್ದಾರೆ.

ಗ್ರೀನ್‌ಫೀಲ್ಡ್ ಸ್ಟೇಡಿಯಂನ ಸುತ್ತ ಕ್ರಿಕೆಟ್ ಅಭಿಮಾನಿಗಳು ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಬೃಹತ್ ಕಟೌಟ್‌ಗಳನ್ನು ಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಆಟಗಾರರ ಈ ಕಟೌಟ್‌ಗಳ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಿರುವನಂತಪುರಂಗೆ ಭಾರತೀಯ ಕ್ರಿಕೆಟಿಗರು ಆಗಮಿಸುತ್ತಿದ್ದಂತೆಯೇ ಭಾರೀ ಸ್ವಾಗತಕೋರಿದ್ದ ಅಭಿಮಾನಿಗಳು ಕಟೌಟ್‌ಗಳನ್ನು ಹಾಕುವ ಮೂಲಕ ಭಿನ್ನವಾಗಿ ಅಭಿಮಾನವನ್ನು ತೋರ್ಪಡಿಸಿದ್ದಾರೆ.

ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್

ಅದ್ಭುತ ಫಾರ್ಮ್‌ನಲ್ಲಿರುವ ಕೊಹ್ಲಿ

ಭಾರತೀಯ ಕ್ರಿಕೆಟ್‌ನ ಪ್ರಮುಖ ತಾರೆಯಾಗಿರುವ ವಿರಾಟ್ ಕೊಹ್ಲಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಸುದೀರ್ಘ ಕಾಲದಿಂದ ಕಳೆದುಕೊಂಡಿದ್ದ ಫಾರ್ಮ್ಅನ್ನು ವಿರಾಟ್ ಕೊಹ್ಲಿ ಮತ್ತೆ ಗಳಿಸಿಕೊಂಡಿದ್ದು ಅದ್ಭುತ ಪ್ರದರ್ಶನ ನೀಡುವ ಮೂಲಕ ಮಿಂಚುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅಭಿಮಾನಿಗಳು ಮತ್ತಷ್ಟು ಸಂಭ್ರಮದಲ್ಲಿದ್ದಾರೆ. ಆಸ್ಟ್ರೆಲಿಯಾ ವಿರುದ್ಧದ ಸರಣಿಯಲ್ಲಿ ಭರ್ಜರಿ ಅರ್ಧ ಶತಕ ಸಿಡಿಸುವ ಮೂಲಕ ಕೊಹ್ಲಿ 2-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆಯಲು ಕಾರಣವಾದರು.

ಇನ್ನು ಮತ್ತೊಂದು ಕುತೂಹಲಕಾರಿ ಅಂಶವೆಂದರೆ ಭಾರತ ಈ ಕ್ರೀಡಾಂಗಣದಲ್ಲಿ ಕೊನೆಯ ಬಾರಿಗೆ 2019ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಿತ್ತು. ಆಗ ಭಾರತ ತಂಡದ ನಾಯಕನಾಗಿದ್ದವರು ವಿರಾಟ್ ಕೊಹ್ಲಿ. ಇದೀಗ ಕೊಹ್ಲಿ ತಮ್ಮ ಅತ್ಯುತ್ತಮ ಫಾರ್ಮ್‌ಗೆ ಮರಳಿದ್ದು ಅದ್ಭುತ ಪ್ರದರ್ಶನದ ಮೂಲಕ ಅಭಿಮಾನಿಗಳನ್ನು ರಂಜಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಮೇಲೆ ಹೆಚ್ಚಿನ ಕುತೂಹಲವಿದೆ.

ಕೊಹ್ಲಿ ಜೊತೆಗೆ ಸಂಜು, ರೋಹಿತ್, ಧೋನಿ ಕಟೌಟ್

ವಿರಾಟ್ ಕೊಹ್ಲಿ ಫ್ಲೆಕ್ಸ್ ಮಾತ್ರವಲ್ಲದೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಸ್ಥಳೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಮತ್ತು ಮಾಜಿ ನಾಯಕ ಎಂಎಸ್ ಧೋನಿಯ ಕಟೌಟ್‌ಗಳನ್ನು ಕೂಡ ಕ್ರೀಡಾಂಗಣದ ಸನಿಹದಲ್ಲಿ ಪ್ರದರ್ಶಿಸಲಾಗಿದೆ.

IND vs AUS: ಟಿ20 ಕ್ರಿಕೆಟ್‌ನಲ್ಲಿ ಪಾಕ್‌ನ ಮೊಹಮ್ಮದ್ ರಿಜ್ವಾನ್ ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್

ಮತ್ತೊಂದು ಸರಣಿ ಗೆಲುವಿನ ಮೇಲೆ ಭಾರತದ ಕಣ್ಣು

ಮತ್ತೊಂದು ಸರಣಿ ಗೆಲುವಿನ ಮೇಲೆ ಭಾರತದ ಕಣ್ಣು

ಇನ್ನು 2021ರ ಟಿ20 ವಿಶ್ವಕಪ್‌ನ ಬಳಿಕ ಭಾರತ ತಂಡ ಯಾವುದೇ ಟಿ20 ದ್ವಿಪಕ್ಷೀಯ ಸರಣಿಯನ್ನು ಸೋತಿಲ್ಲ. ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿಕೊಂಡು ಬಂದಿದೆ. ಐಸಿಸಿ ಟಿ20 ವಿಶ್ವಕಪ್‌ನ ಆರಂಭಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಇದೀಗ ಭಾರತ ತಂಡಕ್ಕೆ ಮತ್ತೊಂದು ಚುಟುಕು ಕ್ರಿಕೆಟ್ ಸರಣಿಯನ್ನು ವಶಕ್ಕೆ ಪಡೆಯುವ ಅತ್ಯುತ್ತಮ ಅವಕಾಶವಿದ್ದು ಈ ಸರಣಿಯಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಸರಣಿಯಿಂದ ಹೊರಗುಳಿಯಲಿದ್ದಾರೆ ಹಾರ್ದಿಕ್ ಪಾಂಡ್ಯ

ಸರಣಿಯಿಂದ ಹೊರಗುಳಿಯಲಿದ್ದಾರೆ ಹಾರ್ದಿಕ್ ಪಾಂಡ್ಯ

ಇನ್ನು ಈ ಸರಣಿಯಲ್ಲಿ ಭಾರತ ತಂಡದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದು ಇದು ಯುವ ಆಟಗಾರ ರಿಷಭ್ ಪಂತ್‌ಗೆ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ. ಈ ಮೂಲಕ ಪಂತ್ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿಕೊಳ್ಳುವ ಅವಕಾಶ ಪಡೆಯಲಿದ್ದಾರೆ. ಇನ್ನು ಮತ್ತೋರ್ವ ಅನುಭವಿ ಭುವನೇಶ್ವರ್ ಕುಮಾರ್‌ಗೆ ವಿಶ್ರಾಂತಿ ನೀಡಲಾಗಿದ್ದು ಯುವ ವೇಗಿ ಅರ್ಶ್‌ದೀಪ್ ಸಿಂಗ್ ಆಡುವ ಬಳಗಕ್ಕೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಿದೆ.

For Quick Alerts
ALLOW NOTIFICATIONS
For Daily Alerts
Story first published: Wednesday, September 28, 2022, 21:11 [IST]
Other articles published on Sep 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X