ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಏಕದಿನ ಪಂದ್ಯ ಗುರುವಾರ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನವನ್ನು ನೀಡಿ ಸರಣಿ ಗೆಲುವಿನ ಕನಸು ಕಾಣುತ್ತಿದೆ. ಕರ್ನಾಟಕದ ಕೆಎಲ್ ರಾಹುಲ್ ಮುಂದಾಳತ್ವದ ಯುವ ತಂಡ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾದ ಹಂಗಾಮಿ ನಾಯಕ ಕೆಎಲ್ ರಾಹುಲ್ ಅವರಿಗೆ ವಿಶೇಷ ಸಾಧನೆ ಮಾಡುವ ಅವಕಾಶ ಕೂಡಿ ಬಂದಿದೆ.
ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ನಡೆಯಲಿರುವ ಪಂದ್ಯ ರಾಹುಲ್ ಪಾಲಿಗೆ ವಿಶೇವಾಗಿದೆ. ಮೊದಲ ಪಂದ್ಯ ಗೆದ್ದಿದ್ದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ಸೋಲು ಕಂಡಿತು. ಸದ್ಯ 3 ಪಂದ್ಯಗಳ ಉಭಯ ತಂಡಗಳು ತಲಾ ಒಂದು ಗೆಲುವ ದಾಖಲಿಸಿವೆ. ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ಕನಸು ಕಾಣುತ್ತಿದೆ.

ಕೆಎಲ್ ರಾಹುಲ್ ಏಕದಿನ ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಅವರು ವಿರಾಟ್ ಕೊಹ್ಲಿಯ ವಿಶೇಷ ಕ್ಲಬ್‌ಗೆ ಸೇರುತ್ತಾರೆ. ದಕ್ಷಿಣ ಆಫ್ರಿಕಾದಲ್ಲಿ ಭಾರತ ಇದುವರೆಗೆ ಒಂದು ಬಾರಿ ಏಕದಿನ ಸರಣಿ ಗೆದ್ದಿದೆ. ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆಲ್ಲುವುದು ಭಾರತಕ್ಕೆ ಸುಲಭದ ವಿಷಯವಲ್ಲ. ಇದಕ್ಕಾಗಿ ಟೀಂ ಇಂಡಿಯಾ ಸಂಪೂರ್ಣ ಪ್ರಯತ್ನ ಮಾಡಬೇಕಿದೆ.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ, ಭಾರತವು 2017-18 ರಲ್ಲಿ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 6 ಪಂದ್ಯಗಳ ಏಕದಿನ ಸರಣಿಯನ್ನು 5-1 ರಲ್ಲಿ ಗೆದ್ದುಕೊಂಡಿತ್ತು. ರಾಹುಲ್ ಗೆ ಮೂರನೇ ಪಂದ್ಯ ಗೆದ್ದು ವಿರಾಟ್ ಕ್ಲಬ್ ಸೇರುವ ಸುವರ್ಣಾವಕಾಶ ಸಿಕ್ಕಿದೆ. ವಿರಾಟ್ ಕೊಹ್ಲಿ ನಂತರ, ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಗೆದ್ದ ಎರಡನೇ ಭಾರತೀಯ ನಾಯಕನಾಗುವ ಕನಸು ಕಾಣುತ್ತಿದ್ದಾರೆ. ಇದು ದಕ್ಷಿಣ ಆಫ್ರಿಕಾದಲ್ಲಿ ಟೀಂ ಇಂಡಿಯಾದ 7ನೇ ಏಕದಿನ ಸರಣಿಯಾಗಿದೆ. ತವರಿನಲ್ಲಿ ಆತಿಥೇಯರ ವಿರುದ್ಧ ಕಳೆದ 6 ಏಕದಿನ ಸರಣಿಗಳಲ್ಲಿ ಭಾರತ ತಂಡವು ಕೇವಲ ಒಂದನ್ನು ಮಾತ್ರ ಗೆಲ್ಲಲು ಶಕ್ತವಾಗಿದೆ.
1992-93ರಲ್ಲಿ ಭಾರತ ತನ್ನ ಮೊದಲ ಏಕದಿನ ಸರಣಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಆಡಿತ್ತು. ಅಂದಿನಿಂದ, ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಆರು ಏಕದಿನ ಸರಣಿಗಳನ್ನು ಆಡಿದೆ, ಅದರಲ್ಲಿ ಟೀಮ್ ಇಂಡಿಯಾ ಕೇವಲ ಒಂದು ಸರಣಿಯನ್ನು ಮಾತ್ರ ಗೆದ್ದಿದೆ. ದಕ್ಷಿಣ ಆಫ್ರಿಕಾ 5 ಏಕದಿನ ಸರಣಿಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ ಪ್ರವಾಸದ ಏಕದಿನ ಸರಣಿಯಲ್ಲಿ ರಾಹುಲ್ ಮೊದಲು ಟೀಮ್ ಇಂಡಿಯಾದ ನಾಯಕತ್ವ ವಹಿಸಿಕೊಂಡರು. ರಾಹುಲ್ ನಾಯಕತ್ವದಲ್ಲಿ ಭಾರತವು 2021/22 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ 0-3 ರಿಂದ ಏಕದಿನ ಸರಣಿಯನ್ನು ಸೋಲ ಬೇಕಾಯಿತು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ 93 ಏಕದಿನ ಪಂದ್ಯಗಳು ನಡೆದಿದೆ. ದಕ್ಷಿಣ ಆಫ್ರಿಕಾ ಇದುವರೆಗೆ ಭಾರತದ ವಿರುದ್ಧ 51 ಏಕದಿನ ಪಂದ್ಯಗಳನ್ನು ಗೆದ್ದಿದ್ದರೆ, ಟೀಂ ಇಂಡಿಯಾ 39 ಪಂದ್ಯಗಳನ್ನು ಗೆದ್ದಿದೆ.
ಭಾರತ ತಂಡ ಮೊದಲ ಏಕದಿನ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು, ಆದರೆ ದಕ್ಷಿಣ ಆಫ್ರಿಕಾ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ8 ವಿಕೆಟ್‌ಗಳಿಂದ ಗೆದ್ದಿತು. ಮೊದಲ ಏಕದಿನ ಪಂದ್ಯದಲ್ಲಿ ವೇಗಿ ಅರ್ಷದೀಪ್ ಸಿಂಗ್ 5 ವಿಕೆಟ್ ಕಬಳಿಸಿದ್ದರೆ, ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಟೋನಿ ಡಿ ಜಾರ್ಜಿ ಶತಕ ಬಾರಿಸಿ ಗೆಲುವಿನಲ್ಲಿ ಮಿಂಚಿದರು.