IND vs SA: ಕುಮಾರ ಸಂಗಕ್ಕಾರ ಹಿಂದಿಕ್ಕಿ ವಿಶ್ವಕಪ್ ಇತಿಹಾಸದಲ್ಲಿ 3ನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ!
ಭಾನುವಾರ, ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸಿ, ಶತಕದತ್ತ ಮುನ್ನುಗ್ಗುತ್ತಿದ್ದಾರೆ.
ಇದೇ ವೇಳೆ ಶ್ರೀಲಂಕಾದ ಲೆಜೆಂಡ್ ಬ್ಯಾಟರ್ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ಅವರು ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

ಬರ್ಥ್ ಡೇ ಬಾಯ್ ವಿರಾಟ್ ಕೊಹ್ಲಿ ಕೋಲ್ಕತ್ತಾದಲ್ಲಿ ಹರಿಣ ಪಡೆಯ ವಿರುದ್ಧ ಅದ್ಭುತವಾದ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ, ಅತಿ ಹೆಚ್ಚು ಏಕದಿನ ವಿಶ್ವಕಪ್ ರನ್ ಗಳಿಸಿದವರ ಪಟ್ಟಿಯಲ್ಲಿ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿದರು.
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೂಡ ಏಕದಿನ ವಿಶ್ವಕಪ್‌ನಲ್ಲಿ 1500 ರನ್‌ಗಳ ಗಡಿ ದಾಟಿದ ಮೂರನೇ ಬ್ಯಾಟರ್ ಮತ್ತು ಎರಡನೇ ಭಾರತೀಯ ಆಟಗಾರನಾದರು.
ಭಾರತದ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ (45 ಪಂದ್ಯಗಳಲ್ಲಿ 2278 ರನ್) ಮತ್ತು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ (46 ಪಂದ್ಯಗಳಲ್ಲಿ 1743 ರನ್) ಮಾತ್ರ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿಗಿಂತ ಹೆಚ್ಚು ರನ್ ಗಳಿಸಿದ್ದಾರೆ.

2023ರ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದರು.
ಸದ್ಯ ನಡೆಯುತ್ತಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023ರಲ್ಲಿ ಗ್ರೂಪ್ ಹಂತದ ತಮ್ಮ ಎಂಟನೇ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ, ವಿರಾಟ್ ಕೊಹ್ಲಿ 29ನೇ ಓವರ್‌ನಲ್ಲಿ ತಮ್ಮ 71ನೇ ಏಕದಿನ ಅರ್ಧಶತಕವನ್ನು ಪೂರೈಸಿದರು.
ಆರನೇ ಓವರ್‌ನಲ್ಲಿ ರೋಹಿತ್ ಶರ್ಮಾ ಔಟಾದ ನಂತರ ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಬಂದರು. ಭಾರತದ ನಾಯಕ 24 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ ಸಮೇತ 40 ರನ್ ಗಳಿಸಿ ವೇಗಿ ಕಗಿಸೊ ರಬಾಡ ಬೌಲಿಂಗ್‌ನಲ್ಲಿ ಔಟಾದರು.
11ನೇ ಓವರ್‌ನಲ್ಲಿ ಸ್ಪಿನ್ನರ್ ಕೇಶವ್ ಮಹಾರಾಜ್ ಅತ್ಯುತ್ತಮ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗುವ ಮೊದಲು ಶುಭ್ಮನ್ ಗಿಲ್ ಅವರು ವಿರಾಟ್ ಕೊಹ್ಲಿ ಅವರೊಂದಿಗೆ 31 ರನ್‌ಗಳ ಜತೆಯಾಟವನ್ನು ನಡೆಸಿದರು.
ನಂತರ ಶ್ರೇಯಸ್ ಅಯ್ಯರ್ ಜೊತೆಗೆ ವಿರಾಟ್ ಕೊಹ್ಲಿ ಮೂರನೇ ವಿಕೆಟ್‌ಗೆ 134 ರನ್‌ಗಳ ಜೊತೆಯಾಟ ನಿರ್ಮಿಸಿದರು. 50 ಓವರ್‌ಗಳ ಮಾದರಿಯಲ್ಲಿ 48 ಶತಕಗಳನ್ನು ಗಳಿಸಿರುವ ವಿರಾಟ್ ಕೊಹ್ಲಿ, ಏಕದಿನದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟುವ ಹಾದಿಯಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications