ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs SA: ಗಾಯಾಳು ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ಆಯ್ಕೆ

Mohammad siraj

ಟೀಂ ಇಂಡಿಯಾ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಸರಣಿ ಆರಂಭಕ್ಕೂ ಮುನ್ನವೇ ಮತ್ತೆ ಗಾಯಾಳುವಾಗಿ ಟೀಂ ಇಂಡಿಯಾದಿಂದ ಹೊರಬಿದ್ದಿದ್ದು, ಹರಿಣಗಳ ವಿರುದ್ಧ ಉಳಿದ ಎರಡು ಪಂದ್ಯಕ್ಕೆ ಬುಮ್ರಾ ಸ್ಥಾನಕ್ಕೆ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆಗೊಂಡಿದ್ದಾರೆ. ಬಿಸಿಸಿಐ ಶುಕ್ರವಾರ ಈ ಕುರಿತಾಗಿ ಪ್ರಕಟಣೆ ಹೊರಡಿಸಿದೆ.

ತೀವ್ರವಾದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಟಿ20 ಸರಣಿ ಅಷ್ಟೇ ಅಲ್ಲದೆ ಟಿ20 ವಿಶ್ವಕಪ್‌ನಿಂದಲೂ ಹೊರಗುಳಿಯಬಹುದು ಎನ್ನಲಾಗಿದೆ. ಇದಾದ ಬಳಿಕ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಮುಂದಿನ ಎರಡು ಟಿ20 ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ.

ಬುಮ್ರಾ ಬದಲು ಮೊಹಮ್ಮದ್ ಸಿರಾಜ್‌ ತಂಡದಲ್ಲಿ ಸ್ಥಾನ

ಬುಮ್ರಾ ಬದಲು ಮೊಹಮ್ಮದ್ ಸಿರಾಜ್‌ ತಂಡದಲ್ಲಿ ಸ್ಥಾನ

ಬುಮ್ರಾ ಬದಲಿ ಆಟಗಾರನಾಗಿ ಮೊಹಮ್ಮದ್ ಸಿರಾಜ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಭಾನುವಾರ ರಾತ್ರಿ ಗುವಾಹಟಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯ ನಡೆಯಲಿದೆ. ಮೂರನೇ ಹಾಗೂ ಅಂತಿಮ ಪಂದ್ಯ ಮಂಗಳವಾರ ಇಂದೋರ್‌ನಲ್ಲಿ ನಡೆಯಲಿದೆ.

ಬಿಸಿಸಿಐ ವೈದ್ಯಕೀಯ ತಂಡದ ನಿಗಾದಲ್ಲಿರುವ ಬುಮ್ರಾ

ಬಿಸಿಸಿಐ ವೈದ್ಯಕೀಯ ತಂಡದ ನಿಗಾದಲ್ಲಿರುವ ಬುಮ್ರಾ

ಟೀಂ ಇಂಡಿಯಾ ಹಿರಿಯ ಆಟಗಾರರ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದ್ದರ ಜೊತೆಗೆ, ಸ್ಟಾರ್‌ ಬೌಲರ್‌ ಬಿಸಿಸಿಐನ ವೈದ್ಯಕೀಯ ತಂಡದ ಪ್ರಸ್ತುತ ನಿಗಾದಲ್ಲಿದ್ದಾರೆ ಎಂದು ಬಿಸಿಸಿಐ ಪತ್ರಿಕಾ ಪ್ರಕಟಣೆ ತಿಳಿಸಿದೆ.

IND vs SA T20: ಸರಣಿ ಗೆಲ್ಲುವ ಉತ್ಸಾಹದಲ್ಲಿ ಗುವಾಹಟಿಗೆ ಬಂದಿಳಿದ ರೋಹಿತ್ ಶರ್ಮಾ ಪಡೆ

ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ ಸಿರಾಜ್

ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ ಸಿರಾಜ್

ಇದು ಭಾರತದ ಟಿ20 ತಂಡಕ್ಕೆ ಮೊಹಮ್ಮದ್ ಸಿರಾಜ್ ಕಂಬ್ಯಾಕ್ ಕೂಡ ಆಗಿದೆ. ಭಾರತ ಪರ ಇದುವರೆಗೆ ಕೇವಲ ಐದು ಟಿ20 ಪಂದ್ಯಗಳನ್ನು ಆಡಿರುವ ಸಿರಾಜ್ ಐದು ವಿಕೆಟ್‌ಗಳು ಉರುಳಿಸಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಸಿರಾಜ್ ಕೊನೆಯ ಬಾರಿಗೆ ಟಿ20 ಪಂದ್ಯ ಆಡಿದ್ದರು.

ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20ಯಲ್ಲಿ ಬುಮ್ರಾ ಆಡಿರಲಿಲ್ಲ. ತರಬೇತಿಯ ಸಮಯದಲ್ಲಿ ಬೆನ್ನುನೋವಿನ ಬಗ್ಗೆ ದೂರು ನೀಡಿದ ನಂತರ ಆತನಿಗೆ ವಿಶ್ರಾಂತಿ ನೀಡಲಾಯಿತು. ಬದಲಿಗೆ ದೀಪಕ್ ಚಹಾರ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆದರು.

ಜಸ್ಪ್ರೀತ್ ಬುಮ್ರಾ ಬದಲಿಗೆ ಟಿ20 ವಿಶ್ವಕಪ್‌ನಲ್ಲಿ ಈ ಬೌಲರ್ ಆಡಬೇಕು ಎಂದ ಸಬಾ ಕರೀಮ್

ಆಸ್ಟ್ರೇಲಿಯಾ ವಿರುದ್ಧ ಜಸ್ಪ್ರೀತ್ ಬುಮ್ರಾ ಆಡಬಾರದಿತ್ತು: ವಾಸಿಂ ಜಾಫರ್

ಆಸ್ಟ್ರೇಲಿಯಾ ವಿರುದ್ಧ ಜಸ್ಪ್ರೀತ್ ಬುಮ್ರಾ ಆಡಬಾರದಿತ್ತು: ವಾಸಿಂ ಜಾಫರ್

ಟಿ20 ವಿಶ್ವಕಪ್ ದೃಷ್ಟಿಯಿಂದ ನೋಡುವುದಾದ್ರೆ, ಆಗಷ್ಟೇ ಚೇತರಿಸಿಕೊಂಡಿದ್ದ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಆಡಬಾರದಿತ್ತು ಎಂದು ಭಾರತದ ಮಾಜಿ ಆಟಗಾರ ವಾಸಿಂ ಜಾಫರ್ ಹೇಳಿದ್ದಾರೆ. ಬುಮ್ರಾ ಅದಾಗಲೇ ಇಂಜ್ಯುರಿಯಿಂದ ಬಳಲುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧದ ಆಡುವಾಗ ಮತ್ತಷ್ಟು ಹೆಚ್ಚಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇಎಸ್‌ಪಿಎನ್ ಕ್ರಿಕ್‌ಇನ್‌ಫೋ ಜೊತೆ ಮಾತನಾಡಿದ ಜಾಫರ್, ''ಟೀಮ್ ಮ್ಯಾನೇಜ್‌ಮೆಂಟ್ ಬುಮ್ರಾ ಅವರನ್ನು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲು ಆತುರ ಮಾಡಿದ್ದರಿಂದ ಗಾಯವು ಉಲ್ಬಣಗೊಂಡಿರಬಹುದು ಎಂದು ನಾನು ಭಾವಿಸುತ್ತೇನೆ'' ಎಂದು ಹೇಳಿದರು.

ಟೀಂ ಇಂಡಿಯಾ ಪರಿಷ್ಕೃತ ಟಿ20 ತಂಡ

ಟೀಂ ಇಂಡಿಯಾ ಪರಿಷ್ಕೃತ ಟಿ20 ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಶಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಶಹಬಾಜ್ ಅಹ್ಮದ್ ಮತ್ತು ಮೊಹಮ್ಮದ್ ಸಿರಾಜ್

Story first published: Friday, September 30, 2022, 15:04 [IST]
Other articles published on Sep 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X