India vs South Africa ODI squad : ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ, ಆರ್‌ಸಿಬಿ ಆಟಗಾರನಿಗೆ ಅವಕಾಶ
ಸುದೀರ್ಘ ವಿಳಂಬದ ಬಳಿಕ ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಗಾರರು ಅಂತಿಮವಾಗಿ ಏಕದಿನ ತಂಡವನ್ನು ಪ್ರಕಟಿಸಿದ್ದಾರೆ. ನಿರೀಕ್ಷೆಯಂತೆ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಟಿ20 ವಿಶ್ವಕಪ್ ತಂಡದಲ್ಲಿ ಸ್ಟಾಂಡ್ ಬೈ ಆಟಗಾರರಾಗಿರುವ ಶ್ರೇಯಸ್ ಅಯ್ಯರ್, ದೀಪಕ್ ಚಹಾರ್, ರವಿ ಬಿಷ್ಣೋಯ್ ಮತ್ತು ಮೊಹಮ್ಮದ್ ಸಿರಾಜ್ ಏಕದಿನ ಸರಣಿಗಾಗಿ ಭಾರತದಲ್ಲಿ ಉಳಿಯುತ್ತಾರೆ. ಸಂಜು ಸ್ಯಾಮ್ಸನ್ ಏಕದಿನ ಸರಣಿಗೆ ಭಾರತ ತಂಡಕ್ಕೆ ವಾಪಸಾಗಿದ್ದಾರೆ. ಮುಖೇಶ್ ಕುಮಾರ್ ಮತ್ತು ಆರ್ ಸಬಿ ತಂಡದ ಆಟಗಾರ ರಜತ್ ಪಾಟಿದಾರ್ ಮೊದಲ ಬಾರಿಗೆ ತಂಡಕ್ಕೆ ಆಯ್ಕೆಯಾಗಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಟಿ 20 ವಿಶ್ವಕಪ್‌ನಲ್ಲಿ ಆಡುವ ಎಲ್ಲಾ ಆಟಗಾರರಿಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ. ಟಿ20 ವಿಶ್ವಕಪ್ ತಂಡಕ್ಕಾಗಿ ಸಂಜು ಸ್ಯಾಮ್ಸನ್ ಆಯ್ಕೆ ಮಾಡದ್ದಕ್ಕಾಗಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಈಗ ಅವರಿಗೆ ಏಕದಿನ ಸರಣಿಯಲ್ಲಿ ತಂಡಕ್ಕೆ ಆಯ್ಕೆ ಮಾಡುವ ಮೂಲಕ ಬಿಸಿಸಿಐ ಟೀಕೆಗಳಿಂದ ತಪ್ಪಿಸಿಕೊಂಡಿದೆ. ಅಕ್ಟೋಬರ್ 6 ರಂದು ಮೊದಲನೇ ಏಕದಿನ ಪಂದ್ಯ ನಡೆಯಲಿದೆ.

ಅಕ್ಟೋಬರ್ 6ರಂದು ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ ಪ್ರಯಾಣ
ಅಕ್ಟೋಬರ್ 17 ರಂದು ಟೀಮ್ ಇಂಡಿಯಾ ಮೊದಲ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಕಾರಣ, ತಂಡದ ಎಲ್ಲಾ 15 ಸದಸ್ಯರಿಗೆ ದಕ್ಷಿಣ ಆಫ್ರಿಕಾ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ರೋಹಿತ್ ಶರ್ಮಾ ಮತ್ತು ತಂಡ ಅಕ್ಟೋಬರ್ 6 ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಆಸ್ಟ್ರೇಲಿಯಾದ ಪರಿಸ್ಥಿತಿಗಳು ಮತ್ತು ಸಮಯ ವಲಯಗಳಿಗೆ ಒಗ್ಗಿಕೊಳ್ಳಲು ಅನುಕೂಲವಾಗುತ್ತದೆ ಎಂದು ಟೀಂ ಇಂಡಿಯಾ ಸಾಕಷ್ಟು ಮುನ್ನವೇ ಪ್ರಯಾಣ ಬೆಳೆಸುತ್ತಿದೆ.
ಭಾರತದ ಈ ಬ್ಯಾಟರ್ ವಿಶ್ವಕಪ್‌ನಲ್ಲಿ ಅತ್ಯುತ್ತಮ ಫಿನಿಷರ್ ಆಗಲಿದ್ದಾನೆ ಎಂದ ರವಿಚಂದ್ರನ್ ಅಶ್ವಿನ್

ಟೀಂ ಇಂಡಿಯಾಕ್ಕೆ ಆರ್ ಸಿಬಿ ಆಟಗಾರನ ಆಯ್ಕೆ
ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಮುಖೇಶ್ ಕುಮಾರ್, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಆಯ್ಕೆಯಾಗಿದ್ದು. ಪದಾರ್ಪಣೆ ಮಾಡುವ ನಿರೀಕ್ಷೆ ಇದೆ. ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್ ತಂಡದ ಜೊತೆ ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡುತ್ತಿರುವ ಕಾರಣ, ವಿವಿಎಸ್ ಲಕ್ಷ್ಮಣ್ ಸರಣಿಯ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
ಭಾರತದ ಮೂರು ಪಂದ್ಯಗಳ ಏಕದಿನ ಸರಣಿಯು ಅಕ್ಟೋಬರ್ 6 ರಿಂದ ನಡೆಯಲಿದೆ ಮತ್ತು ಅಕ್ಟೋಬರ್ 11 ರಂದು ಕೊನೆಗೊಳ್ಳಲಿದೆ. ಆದಾಗ್ಯೂ, ಕೊನೆಯ ಏಕದಿನ ಪಂದ್ಯ ನಡೆದ ನಂತರ ಕೇವಲ ಆರು ದಿನಗಳಲ್ಲಿ, ಟೀಮ್ ಇಂಡಿಯಾ ಟಿ20 ವಿಶ್ವಕಪ್‌ಗಿಂತ ಮೊದಲು ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ.

ಏಕದಿನ ಸರಣಿ ಬಳಿಕ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾಕ್ಕೆ ಪ್ರಯಾಣ
ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್ ತಂಡವನ್ನು ಏಕದಿನದಲ್ಲಿ ಆಡಲಿದೆ ಎಂಬುದನ್ನು ಗಮನಿಸಬೇಕು. ದಕ್ಷಿಣ ಆಫ್ರಿಕಾ ಕೂಡ ತಮ್ಮ ಟಿ20 ವಿಶ್ವಕಪ್ ಅಭ್ಯಾಸವನ್ನು ಅಕ್ಟೋಬರ್ 17 ರಂದು ನ್ಯೂಜಿಲೆಂಡ್ ವಿರುದ್ಧ ಪ್ರಾರಂಭಿಸಲಿದೆ. ಟಿ20 ಸರಣಿಯಲ್ಲಿ ಮೊದಲನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನ ಪಂದ್ಯಗಳನ್ನು ಗೆಲ್ಲುವ ಮೂಲಕ ವಿಶ್ವಾಸವನ್ನು ಮರಳಿ ಪಡೆಯಬೇಕಿದೆ. ಏಕದಿನ ತಂಡಕ್ಕೂ ಟೆಂಬಾ ಬವುಮಾ ನಾಯಕರಾಗಿ ಮುಂದುವರೆದಿದ್ದಾರೆ.
ಮೊದಲನೇ ಪಂದ್ಯ ಅಕ್ಟೋಬರ್ 6 ರಂದು ರಾಂಚಿಯಲ್ಲಿ ನಡೆಯಲಿದೆ. ಎರಡನೇ ಪಂದ್ಯ ಅಕ್ಟೋಬರ್ 9ರಂದು ಲಕ್ನೋದಲ್ಲಿ ನಡೆಯಲಿದೆ. ಮೂರನೇ ಮತ್ತು ಸರಣಿಯ ಕೊನೆಯ ಪಂದ್ಯ ಅಕ್ಟೋಬರ್ 11ರಂದು ದೆಹಲಿಯಲ್ಲಿ ನಡೆಯಲಿದೆ.

ಏಕದಿನ ಸರಣಿಯಲ್ಲಿ ಆಡುವ ತಂಡಗಳ ವಿವರ
ಏಕದಿನ ಸರಣಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್.
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಜನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಆಂಡಿಲೆ ಫೆಹ್ಲುಕ್ವಾಯೊ, ಡ್ವೈನ್ ಪ್ರಿಟೋರಿಯಸ್, ಟ್ವೈನ್ ಪ್ರಿಟೋರಿಯಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications