IND Vs SA ODI : ಸಿಕ್ಕಿರುವ ಅವಕಾಶಗಳನ್ನು ಬಳಸಿಕೊಳ್ಳಿ ಎಂದ ಆಕಾಶ್ ಚೋಪ್ರಾ

ಭಾನುವಾರ ರಾಂಚಿಯಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಅಗ್ರ ಕ್ರಮಾಂಕದ ಆಟಗಾರರು ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಮೊದಲ ಏಕದಿನ ಪಂದ್ಯದಲ್ಲಿ ಆರು ಬ್ಯಾಟರ್‌ಗಳು ಮತ್ತು ಕೇವಲ ಒಬ್ಬರು ಆಲ್‌ರೌಂಡರ್ ಜೊತೆಗೆ ಮಾತ್ರ ನಾಲ್ವರು ಬೌಲರ್ ಗಳ ಜೊತೆ ಆಡಿದ್ದರು. ಗಾಯಗೊಂಡು ಸರಣಿಯಿಂದ ಹೊರಗುಳಿದಿರುವ ದೀಪಕ್ ಚಹಾರ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಆಡುವ ತಂಡದಲ್ಲಿ ಸ್ಥಾನ ಪಡೆಯಬೇಕು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
ವಾಷಿಂಗ್ಟನ್ ಸುಂದರ್ ತಂಡಕ್ಕೆ ಸೇರ್ಪಡೆಗೊಂಡರೆ ಬ್ಯಾಟಿಂಗ್ ವಿಭಾಗಕ್ಕೆ ಹೆಚ್ಚಿನ ಶಕ್ತಿ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೂ, ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ರನ್ ಗಳಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊವೊಂದರಲ್ಲಿ ಮಾತನಾಡಿರುವ ಆಕಾಶ್ ಚೋಪ್ರಾ, ಈ ಆಟಗಾರರಿಗೆ ಲಭ್ಯವಿರುವ ಸೀಮಿತ ಅವಕಾಶಗಳನ್ನು ಹೆಚ್ಚು ಬಳಸಿಕೊಳ್ಳುವ ಮಹತ್ವವನ್ನು ವಿವರಿಸಿದರು.

ನಿಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ
"ನಾನು ಭಾರತ ತಂಡದಲ್ಲಿ ಕೇವಲ ಒಂದು ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ರವಿ ಬಿಷ್ಣೋಯ್ ಬದಲಿಗೆ ವಾಷಿಂಗ್ಟನ್ ಸುಂದರ್ ಆಡುವ ಸಾಧ್ಯತೆ ಇದೆ. ರುತುರಾಜ್ ಮತ್ತು ಇಶಾನ್ ಅವರಂತಹವರು ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು, ಉತ್ತಮ ರನ್ ಗಳಿಸಬೇಕು ಎಂದು ನಾನು ಭಾವಿಸುತ್ತೇನೆ" ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
ಟಿ20 ವಿಶ್ವಕಪ್ ಇರುವುದರಿಂದ ಹಿರಿಯ ಆಟಗಾರರ ಬದಲಿಗೆ ನಿಮಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ. ವಿಶ್ವಕಪ್ ನಂತರ ಹಿರಿಯ ಆಟಗಾರರು ಆಡುತ್ತಾರೆ. ಸಂಜು ಸ್ಯಾಮ್ಸನ್ ಮತ್ತು ಶ್ರೇಯಸ್ ಅಯ್ಯರ್ ರೀತಿ ಉಳಿದ ಆಟಗಾರರು ತಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
Ind vs SA: 2ನೇ ಏಕದಿನ ಪಂದ್ಯದ ಸಂಭಾವ್ಯ ಆಡುವ ಬಳಗ: ಸರಣಿ ಜೀವಂತವಾಗಿರಿಸತ್ತಾ ಧವನ್ ಪಡೆ!

ಅವೇಶ್ ಖಾನ್ ಮತ್ತು ಸಿರಾಜ್ ಪ್ರದರ್ಶನ ನೀಡಬೇಕು
ರಾಂಚಿಯಲ್ಲಿ ಅವೇಶ್ ಖಾನ್‌ಗೆ ನಿಜವಾದ ಪರೀಕ್ಷೆ ಎದುರಾಗಲಿದೆ. ಅವರು ಉತ್ತಮ ಪ್ರದರ್ಶನ ನೀಡದೇ ಇದ್ದರೆ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟವಾಗಲಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಅವರಿಗೆ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಲು ಅವಕಾಶ ಇತ್ತು ಆದರೆ, ಏಷ್ಯಾಕಪ್‌ನಲ್ಲಿ ತೋರಿದ ಕೆಟ್ಟ ಪ್ರದರ್ಶನದಿಂದ ತಮ್ಮ ಅವಕಾಶ ಕಳೆದುಕೊಂಡರು ಎಂದು ಅವರು ಹೇಳಿದರು.
ಮೊಹಮ್ಮದ್ ಸಿರಾಜ್ ಉಳಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯಲು ಅವಕಾಶ ಇದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ಟಿ20 ವಿಶ್ವಕಪ್ ತಂಡಕ್ಕೆ ಸಿರಾಜ್ ಆಯ್ಕೆ ?
"ಅವೇಶ್‌ಗೆ ಇದು ಪ್ರಮುಖ ಪಂದ್ಯವಾಗಿದೆ. ಒಂದು ಹಂತದಲ್ಲಿ, ಅವರು ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಬಹುತೇಕ ಖಚಿತವಾಗಿತ್ತು. ಆದರೆ ಈಗ ಅವರು ಅವಕಾಶ ಕಳೆದುಕೊಂಡರು. ಮೊಹಮ್ಮದ್ ಶಮಿ ಟಿ20 ವಿಶ್ವಕಪ್ ತಂಡಕ್ಕೆ ಪ್ರವೇಶಿಸಬಹುದು. ಮೊಹಮ್ಮದ್ ಸಿರಾಜ್ ಅವರನ್ನು ಸ್ಟಾಂಡ್‌ಬೈ ಆಟಗಾರರನ್ನಾಗಿ ಆಯ್ಕೆ ಮಾಡಬಹುದು." ಎಂದು ಹೇಳಿದ್ದಾರೆ.

ಏಕದಿನ ಸರಣಿಗೆ ಭಾರತ, ದಕ್ಷಿಣ ಆಫ್ರಿಕಾ ತಂಡ
ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ , ಸಂಜು ಸ್ಯಾಮ್ಸನ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕೇಶವ್ ಮಹಾರಾಜ್, ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಜನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್ , ಆಂಡಿಲೆ ಫೆಹ್ಲುಕ್ವಾಯೊ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ತಬ್ರೈಜ್ ಶಮ್ಸಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications