For Quick Alerts
ALLOW NOTIFICATIONS  
For Daily Alerts
 

IND Vs SA ODI: ಹರಿಣಗಳ ವಿರುದ್ಧ ಏಕದಿನ ಪಂದ್ಯದಲ್ಲಿ ಭಾರತ ಕೊನೆಯ ಬಾರಿಗೆ ಗೆದ್ದದ್ದು ಯಾವಾಗ ಗೊತ್ತಾ?

IND Vs SA ODI: Know India Vs South Africa ODI Head to Head, Statistics, Team, Records

ಭಾರತ-ದಕ್ಷಿಣ ಆಫ್ರಿಕಾ ಸರಣಿಯ ಎರಡನೇ ಏಕದಿನ ಪಂದ್ಯ ಭಾನುವಾರ ರಾಂಚಿಯ ಜೆಎಸ್‌ಸಿಎ ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ಅಕ್ಟೋಬರ್ 9 ರಂದು ನಡೆಯಲಿದೆ. ಅಕ್ಟೋಬರ್ 6 ರಂದು ಗುರುವಾರ ಲಕ್ನೋದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಒಂಬತ್ತು ರನ್‌ಗಳಿಂದ ಗೆದ್ದ ದಕ್ಷಿಣ ಆಫ್ರಿಕಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಶಿಖರ್ ಧವನ್ ನೇತೃತ್ವದ ಭಾರತ ತಂಡವು ದೆಹಲಿಯಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಯನ್ನು ಸಮಬಲಗೊಳಿಸಿಕೊಳ್ಳಲು ಉತ್ತಮ ಆಟವನ್ನು ಆಡಬೇಕಾಗಿದೆ.

ದಕ್ಷಿಣ ಆಫ್ರಿಕಾ ತಂಡವೇ ಎರಡನೇ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೂ, ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ವಾಪಸಾಗುವ ನಿರೀಕ್ಷೆ ಇದ್ದು, ಗೆಲುವಿಗಾಗಿ ತೀವ್ರ ಪೈಪೋಟಿ ಒಡ್ಡಲು ಸಿದ್ಧವಾಗಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಯ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ, ಉಭಯ ದೇಶಗಳ ಮುಖಾಮುಖಿ ದಾಖಲೆಯ ನೋಟ, ಹೆಡ್ ಟು ಹೆಡ್, ಬಲಾಬಲಗಳ ಬಗ್ಗೆ ನೋಡಬೇಕಾಗಿದೆ.

ಭಾರತದ ವಿರುದ್ಧ ಹರಿಣಗಳದ್ದೇ ಮೇಲುಗೈ

ಭಾರತದ ವಿರುದ್ಧ ಹರಿಣಗಳದ್ದೇ ಮೇಲುಗೈ

ಭಾರತ ವಿರುದ್ಧದ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 50-35 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಉಭಯ ತಂಡಗಳು ಇದುವರೆಗೆ 88 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಅವುಗಳಲ್ಲಿ ಮೂರು ಫಲಿತಾಂಶವನ್ನು ನೀಡದೆ ಕೊನೆಗೊಂಡಿವೆ.

2019ರ ವಿಶ್ವಕಪ್‌ ಪಂದ್ಯದ ನಂತರ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 4 ಏಕದಿನ ಪಂದ್ಯಗಳನ್ನಾಡಿದೆ. ನಾಲ್ಕೂ ಪಂದ್ಯಗಳಲ್ಲಿ ಹರಿಣಗಳ ಪಡೆ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಪಡೆ ಉತ್ತಮ ಅಂಕಿ ಅಂಶವನ್ನು ಹೊಂದಿದೆ.

ಮುಂದಿನ ದಿನಗಳಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯುವುದೇ ನನ್ನ ಗುರಿ ಎಂದ ಈ ಬ್ಯಾಟರ್

ಸತತ ನಾಲ್ಕು ಏಕದಿನ ಪಂದ್ಯದಲ್ಲಿ ಸೋತ ಟೀಂ ಇಂಡಿಯಾ

ಸತತ ನಾಲ್ಕು ಏಕದಿನ ಪಂದ್ಯದಲ್ಲಿ ಸೋತ ಟೀಂ ಇಂಡಿಯಾ

2019ರ ಜೂನ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು. ಅದಾದ ನಂತರ 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳನ್ನಾಡಿರುವ ಟೀಂ ಇಂಡಿಯಾ ಒಂದರಲ್ಲೂ ಗೆಲುವು ಕಾಣಲು ಸಾಧ್ಯವಾಗಿಲ್ಲ.

2022ರ ಜನವರಿಯಲ್ಲಿ ನಡೆದ ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದೆ. ನಂತರ, ಟಿ20 ವಿಶ್ವಕಪ್‌ಗೂ ಮುನ್ನ ಭಾರತದಲ್ಲಿ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲನೇ ಪಂದ್ಯದಲ್ಲಿ 9 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿ 1-0 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

ರಾಂಚಿಯಲ್ಲಿ 2014ರಿಂದ ಏಕದಿನ ಪಂದ್ಯ ಗೆಲ್ಲದ ಭಾರತ

ರಾಂಚಿಯಲ್ಲಿ 2014ರಿಂದ ಏಕದಿನ ಪಂದ್ಯ ಗೆಲ್ಲದ ಭಾರತ

ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ಭಾರತ ತಂಡ ಒಟ್ಟು ನಾಲ್ಕು ಏಕದಿನ ಪಂದ್ಯಗಳನ್ನಾಡಿದೆ. ಅವುಗಳಲ್ಲಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ.

2014ರಿಂದ ಟೀಂ ಇಂಡಿಯಾ ರಾಂಚಿಯಲ್ಲಿ ಏಕದಿನ ಪಂದ್ಯವನ್ನು ಗೆದ್ದಿಲ್ಲ. 2019ರಲ್ಲಿ ಇಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನಾಡಿತ್ತು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ 32 ರನ್‌ಗಳ ಅಂತರದಲ್ಲಿ ಭಾರತವನ್ನು ಸೋಲಿಸಿತ್ತು.

ರಾಂಚಿಯ ಈ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಇದುವರೆಗೂ ಒಂದೂ ಪಂದ್ಯವನ್ನಾಡಿಲ್ಲ. ಟೀಂ ಇಂಡಿಯಾ ಇದರ ಲಾಭವನ್ನು ಹೇಗೆ ಪಡೆಯುತ್ತದೆ ಎಂದು ಕಾದು ನೋಡಬೇಕಿದೆ.

ಏಕದಿನ ಸರಣಿಗೆ ಟೀಂ ಇಂಡಿಯಾ

ಏಕದಿನ ಸರಣಿಗೆ ಟೀಂ ಇಂಡಿಯಾ

ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್‌, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಜತ್ ಪಾಟೀದಾರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್‌, ಶಾರ್ದೂಲ್ ಠಾಕೂರ್, ಕುಲ್‌ದೀಪ್ ಯಾದವ್, ರವಿ ಬಿಷ್ಣೋಯಿ, ಮುಕೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್

Story first published: Saturday, October 8, 2022, 19:32 [IST]
Other articles published on Oct 8, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+