ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs SA ODI: ಟೀಂ ಇಂಡಿಯಾ ಮುನ್ನಡೆಸಲಿರುವ ಶಿಖರ್ ಧವನ್, ಸಂಜುಗೆ ಉಪನಾಯಕತ್ವ?

Sanju samson and Shikhar dhawan

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಂಡ ಪ್ರಕಟವಾಗುತ್ತಿದ್ದಂತೆ ಸಂಜು ಸ್ಯಾಮ್ಸನ್ ಮೇಲೆ ಎಲ್ಲರ ಕಣ್ಣಿದೆ. ಸಂಜು ಅವರನ್ನು ತಂಡದ ಉಪನಾಯಕರನ್ನಾಗಿ ನೇಮಿಸಲಾಗುವುದು ಎಂದು ವರದಿಯಾಗಿದೆ. ಇದು ಸ್ಯಾಮ್ಸನ್ ಅಭಿಮಾನಿಗಳಿಗೆ ತುಂಬಾ ಸಂತೋಷವನ್ನುಂಟುಮಾಡಿದೆ.

ಟಿ20 ಸರಣಿ ಬಳಿಕ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಭಾರತ ಟಿ20 ಸರಣಿಗೆ ಮಾತ್ರ ತಂಡವನ್ನು ಆಯ್ಕೆ ಮಾಡಿದೆ. ಏಕದಿನ ತಂಡವನ್ನು ಬುಧವಾರ ಪ್ರಕಟಿಸಲಾಗುವುದು ಎಂದು ವರದಿಯಾಗಿದೆ.

ಟಿ20 ಸರಣಿಗಿಂತ ಭಿನ್ನವಾಗಿ ಭಾರತ ಏಕದಿನ ಪಂದ್ಯಗಳಲ್ಲಿ ಎರಡನೇ ಹಂತದ ತಂಡವನ್ನು ಕಣಕ್ಕಿಳಿಸಲಿದೆ. ಐಸಿಸಿ ಟಿ20 ವಿಶ್ವಕಪ್‌ಗಾಗಿ ಭಾರತ ತಂಡ ಅಕ್ಟೋಬರ್ 6 ರಂದು ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳಸಲಿದೆ. ಇದೇ ದಿನ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ.

ಶಿಖರ್ ಧವನ್ ನಾಯಕತ್ವದಲ್ಲಿ ಮುನ್ನಡೆಯಲಿರುವ ಭಾರತ

ಶಿಖರ್ ಧವನ್ ನಾಯಕತ್ವದಲ್ಲಿ ಮುನ್ನಡೆಯಲಿರುವ ಭಾರತ

ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸೇರ್ಪಡೆಗೊಂಡಿರುವ ಯಾವುದೇ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಇರುವುದಿಲ್ಲ. ಹಿರಿಯ ಆಟಗಾರ ಶಿಖರ್ ಧವನ್ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸಂಜು ಸ್ಯಾಮ್ಸನ್ ಉಪನಾಯಕರಾಗಿರುತ್ತಾರೆ. ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ತೆರಳುತ್ತಿರುವ ಕಾರಣ ವಿವಿಎಸ್ ಲಕ್ಷ್ಮಣ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಕೋಚ್ ಆಗಲಿದ್ದಾರೆ.

ಸಂಜು ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಎ ತಂಡವನ್ನು ಮುನ್ನಡೆಸುತ್ತಿದ್ದಾರೆ. ಮೊದಲೆರಡು ಪಂದ್ಯಗಳನ್ನು ಗೆದ್ದು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದ್ದಾರೆ.

ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ

ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ

ಏಕದಿನ ಸರಣಿಗಾಗಿ ಟಿ20 ವಿಶ್ವಕಪ್ ತಂಡದಲ್ಲಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ಎ ಮತ್ತು ನ್ಯೂಜಿಲೆಂಡ್ ಎ ನಡುವಿನ ಏಕದಿನ ಸರಣಿಯ ನಂತರ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮಂಕಡಿಂಗ್ ಮಾಡಿದ್ದ ಕಪಿಲ್ ದೇವ್, ವಿಶ್ವ ಕ್ರಿಕೆಟ್‌ನಲ್ಲಿ ಭಾರಿ ವಿವಾದ ಸೃಷ್ಟಿಸಿದ 5 ಮಂಕಡಿಂಗ್‌ ಘಟನೆಗಳಿವು

ಮೂರು ಏಕದಿನ ಪಂದ್ಯಗಳಲ್ಲಿ ಸವಾಲು

ಮೂರು ಏಕದಿನ ಪಂದ್ಯಗಳಲ್ಲಿ ಸವಾಲು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿ ಅಕ್ಟೋಬರ್ 6 ರಿಂದ 11 ರವರೆಗೆ ನಡೆಯಲಿದೆ. ಮೊದಲ ಏಕದಿನ ಪಂದ್ಯ ರಾಂಚಿಯಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ. 9ರಂದು ಎರಡನೇ ಪಂದ್ಯ ಲಕ್ನೋದಲ್ಲಿ ನಡೆಯಲಿದ್ದು, ಮೂರನೇ ಹಾಗೂ ಅಂತಿಮ ಪಂದ್ಯ 11ರಂದು ದೆಹಲಿಯಲ್ಲಿ ನಡೆಯಲಿದೆ.

ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಭಾರತಕ್ಕೆ ಬಂದಿದೆ. ಭಾರತದೊಂದಿಗೆ ಟಿ20 ಸರಣಿ ಮತ್ತು ಏಕದಿನ ಸರಣಿಯಲ್ಲಿ ಹರಿಣಗಳು ಅದೇ ತಂಡವನ್ನು ಕಣಕ್ಕಿಳಿಸುತ್ತಿದ್ದಾರೆ.

Ind vs SA ODI: ರಜತ್ ಪಾಟೀದಾರ್‌ಗೆ ಚೊಚ್ಚಲ ಅವಕಾಶ ಸಿಗುವ ಸಾಧ್ಯತೆ

ಆಸ್ಟ್ರೇಲಿಯಾದಲ್ಲಿ ನಡೆಯಲಿದೆ 2 ಅಭ್ಯಾಸ ಪಂದ್ಯ

ಆಸ್ಟ್ರೇಲಿಯಾದಲ್ಲಿ ನಡೆಯಲಿದೆ 2 ಅಭ್ಯಾಸ ಪಂದ್ಯ

ಏತನ್ಮಧ್ಯೆ, ಟಿ20 ವಿಶ್ವಕಪ್‌ಗೂ ಮುನ್ನ ಭಾರತ ಆಸ್ಟ್ರೇಲಿಯಾದಲ್ಲಿ ಎರಡು ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಭಾರತದ ಅಭ್ಯಾಸ ಪಂದ್ಯವನ್ನಾಡಲಿವೆ.

ಪರಿಸ್ಥಿತಿ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ಭಾರತ ತಂಡವು ಮೊದಲೇ ಆಸ್ಟ್ರೇಲಿಯಾಕ್ಕೆ ಮರಳಿದೆ. ಈ ಕಾರಣಕ್ಕಾಗಿಯೇ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಭಿನ್ನ ತಂಡವನ್ನು ಪ್ರಯತ್ನಿಸಲು ನಿರ್ಧರಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ಸಂಭಾವ್ಯ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ಸಂಭಾವ್ಯ ತಂಡ

ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಪೃಥ್ವಿ ಶಾ, ಸಂಜು ಸ್ಯಾಮ್ಸನ್ (ಉಪನಾಯಕ, ವಿಕೆಟ್-ಕೀಪರ್), ರಾಹುಲ್ ತ್ರಿಪಾಠಿ, ರಜತ್ ಪಾಟೀದಾರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಪ್ರಸಿದ್ಧ ಕೃಷ್ಣ, ಕುಲದೀಪ್ ಸೇನ್

Story first published: Tuesday, September 27, 2022, 13:34 [IST]
Other articles published on Sep 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X